ಬೆಳಗಾವಿ: ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಮಾಡಲು ರಾಜ್ಯ ಸರ್ಕಾರ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸೇರಿದಂತೆ ವಿವಿಧ ಸಂಘಟನೆ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು.
ಶಿವಾಜಿ ಮಹಾರಾಜರು ಒಂದೇ ಸಮುದಾಯ, ಒಂದೇ ನಾಡಿಗೆ ಸೀಮಿತವಾಗಿಲ್ಲ. ಅವರು ಈ ದೇಶದ ಮಹಾನ್ ವ್ಯಕ್ತಿ. ಆದರೆ, ಕೆಲವರು ರಾಜಕೀಯ ಉದ್ದೇಶವಿಟ್ಟುಕೊಂಡು ಜಿಲ್ಲಾಡಳಿತದ ಮೂಲಕ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮೂರ್ತಿ ತೆರವುಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಈ ವಿಚಾರವಾಗಿ ಸರ್ಕಾರ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಶುಭಂ ಶೋಕೆ, ಸಂತೋಷ ಕೆ., ಧನಂಜಯ ಪಾಟೀಲ, ಶ್ರೀಕಾಂತ ಕದಂ ಮತ್ತಿತರರು ಇದ್ದರು.