ಮನೇಲಿ ಕೂತಿದ್ದು ಸಾಕು, ಇನ್ನು ಕೆಲಸಕ್ಕೆ ಬನ್ನಿ: ಎಲ್ಲ ಹಿರಿಯ ಅಧಿಕಾರಿಗಳಿಗೆ ರಾಜ್ಯ ಸರ್ಕಾರದ ತಾಕೀತು

Vidhana Soudha vvani
Published on

ಬೆಂಗಳೂರು: ಕರೊನಾ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳೆಂದು ಗುರುತಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ನೌಕರರಷ್ಟೇ ಇದುವರೆಗೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸೂಚಿಸಿದ್ದ ರಾಜ್ಯ ಸರ್ಕಾರ ಈಗ ಕರೊನಾ ಹಾವಳಿ ಹೆಚ್ಚಾಗುತ್ತಿದ್ದಂತೆಯೇ ತನ್ನ ವರಸೆ ಬದಲಾಯಿಸಿದೆ.

ರಾಜ್ಯದ ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದೆ. ರಾಜ್ಯದ ಮುಖ್ಯ ಕಾರ್ಯದರ್ಶಿ ತ.ಮ. ವಿಜಯಭಾಸ್ಕರ್ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ.

ಇದರಲ್ಲಿ ಸಚಿವಾಲಯದ ಅಧಿಕಾರಿಗಳೂ ಸೇರಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಒಳಾಡಳಿತ, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಆಹಾರ, ನಾಗರಿಕ ಸರಬರಾಜು, ವಾರ್ತಾ ಇಲಾಖೆ, ಸಾರಿಗೆ, ಇಂಧನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಆರ್ಥಿಕ ಇಲಾಖೆ, ಪಶು ಸಂಗೋಪನೆ, ಮೀನುಗಾರಿಕೆ, ಅರಣ್ಯ ಮುಂತಾಗಿ ಎಲ್ಲ ಇಲಾಖೆಗಳಲ್ಲಿ ಮತ್ತು ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ ವೃಂದದ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ. ದೈಹಿಕ ಅಂಗವೈಕಲ್ಯ ಹೊಂದಿರುವವರಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net