More

    ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ.

    ಗದಗ: ಕರ್ನಾಟಕ ಸರಕಾರವು ದಿನಾಂಕ ೨೦ ಫೆಬ್ರವರಿಯಂದು ಕರ್ನಾಟಕ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಆಧಿನಿಯಮ ೧೯೯೭ ಗೆ ಮತ್ತಷ್ಟು ತಿದ್ದುಪಡಿಯನ್ನು ಮಾಡಿದೆ. ಈ ತಿದ್ದುಪಡಿಯಲ್ಲಿ ಹಲವಾರು ದೋಷಗಳು ಇದ್ದು, ಅವುಗಳು ದೇವಸ್ಥಾನಗಳ ಪರಂಪರೆಯ ರಕ್ಷಣೆಯ ದೃಷ್ಟಿಯಿಂದ ಅತ್ಯಂತ ಅಪಾಯಕಾರಿಯಾಗಿದೆ. ಹಾಗಾಗಿ ಈ ಕಲಂಗಳನ್ನು ರದ್ದು ಮಾಡಬೇಕೆಂದು ಕರ್ನಾಟಕ ರಾಜ್ಯಪಾಲರಿಗೆ ಮನವಿಯನ್ನು ಸಲ್ಲಿಸಲಾಯಿತು.

    ೧. ಕಲಂ ೬೯ ಇ ನಲ್ಲಿ ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಉನ್ನತ ಸಮಿತಿಗಳನ್ನು ರಚನೆ ಮಾಡಲಾಗಿದ್ದು, ಜಿಲ್ಲಾ ಮಟ್ಟದ ಸಮಿತಿಗೆ ೯ ಜನರ ಸದಸ್ಯರ ನೇಮಕಾತಿಯ ಬಗ್ಗೆ ಉಲ್ಲೇಖ ಮಾಡಲಾಗಿದೆ. ಈ ೯ ಜನರಲ್ಲಿ ಪದನಿಮಿತ್ತ ಜಿಲ್ಲಾಧಿಕಾರಿ, ಪೋಲಿಸ್ ಅಧಿಕಾರಿ, ಅರಣ್ಯ ಸಂರಕ್ಷಣಾ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾ ಲೋಕೊಪಯೋಗಿ ಅಭಿಯಂತರರ ಹೀಗೆ ೯ ಜನರ ಸಮಿತಿ ರಚನೆ ಮಾಡಲಾಗಿದೆ. ಇದೇ ರೀತಿಯಲ್ಲಿ ೧೬ ಜನರ ರಾಜ್ಯ ಮಟ್ಟದ ಸಮಿತಿಯನ್ನು ರಚನೆ ಮಾಡಲಾಗಿದ್ದು, ಅದರಲ್ಲಿ ಸ್ಥಳೀಯ ಶಾಸಕರು, ಸಂಸದರು ಸೇರಿ ವಿವಿಧ ಇಲಾಖೆಗಳ ಕಾರ್ಯದರ್ಶಿಗಳನ್ನು ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ. ಇದರಲ್ಲಿ ಹಿಂದೂಗಳಲ್ಲದವರು ಇರುವ ಸಾಧ್ಯತೆ ಇರುವ ಕಾರಣದಿಂದ ಇದು ಅತ್ಯಂತ ಅಪಾಯಕಾರಿಯಾಗಿದೆ ಮತ್ತು ಅಲ್ಲಿಯೂ ಭ್ರಷ್ಟಚಾರವು ತಾಂಡವಾಡಲಿದೆ.

    ೨. ಕಲಂ ೧೯ ರಲ್ಲಿ ಸಾಮಾನ್ಯ ಸಂಗ್ರಹಣ ನಿಧಿಯ ಉಲ್ಲೇಖ ಮಾಡಲಾಗಿದೆ. ಈ ನಿಧಿಯನ್ನು ಇತರ ಯಾವುದೇ ಧಾರ್ಮಿಕ ಸಂಸ್ಥೆಗಳಿಗೆ ನೀಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ಮುಂದಿನ ದಿನಗಳಲ್ಲಿ ಅನ್ಯಮತೀಯರಿಗೂ ಸಹ ಅನ್ವಯ ಮಾಡಲಾಗುವ ಸಾದ್ಯತೆ ಇದೆ. ಇದು ಮುಂದಿನ ದಿನಗಳಲ್ಲಿ ಅನ್ಯ ಸಮುದಾಯದವರಿಗೂ ಸಹ ಹಿಂದೂ ದೇವಸ್ಥಾನಗಳ ಹಣ ನೀಡುವ ಸಾದ್ಯತೆ ಇದೆ..

    ೩. ಕಲಂ ೨೫ ರಲ್ಲಿ ಸಂಯೋಜಿತ ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿಯ ರಚನೆ ಸಂದರ್ಭದಲ್ಲಿ ಹಿಂದೂಗಳಲ್ಲದವರನ್ನು ನೇಮಕ ಮಾಡುವ ಬಗ್ಗೆ
    ಉಲ್ಲೇಖ ಮಾಡಲಾಗಿದೆ.ಇದು ದೇವಸ್ಥಾನಗಳ ಪರಂಪರೆ ರಕ್ಷಣೆಯ ವಿಷಯದಲ್ಲಿ ಅತ್ಯಂತ ಅಪಾಯಕಾರಿಯಾಗಿದೆ.

    ೪. ಕಲಂ ೧೭ ರಲ್ಲಿ ಯಾವ ಸಂಸ್ಥೆಗಳ ಆದಾಯ ೧ ಕೋಟಿ ಮೀರಿರುವುದೋ ಅವುಗಳ ೧೦ % ನಿವ್ವಳ ಆದಾಯದ ಪ್ರತಿಶತ್ ಹಣವನ್ನು ೫ ರಿಂದ ೧೦ ಲಕ್ಷ ಇರುವ ಆದಾಯ ಇರುವ ದೇವಸ್ಥಾನಗಳ ೫ ಶೇ ಹಣವನ್ನು ಸಾಮಾನ್ಯ ಸಂಗ್ರಹಣ ನಿಧಿಗೆ ವರ್ಗಾವಣೆ ಮಾಡುವ ಬಗ್ಗೆ ಉಲ್ಲೇಖ ಮಾಡಲಾಗಿದೆ. ಇದು ದೇವಸ್ಥಾನಗಳ ಹಣವನ್ನು ದೋಚುವ ಹುನ್ನಾರವಾಗಿದೆ. ಈ ಎಲ್ಲ ಕಲಂಗಳು ದೇವಸ್ಥಾನಗಳ ಸಂರಕ್ಷಣೆ ದೃಷ್ಟಿಯಿಂದ ಅತ್ಯಂತ ಮಾರಕವಿರುವುದರಿಂದ ಇದಕ್ಕೆ ಅವಕಾಶ ನೀಡಬಾರದು ಎಂದು ವಿನಂತಿಸುತ್ತೇವೆ. ಈ ಮೇಲಿನ ಎಲ್ಲ ಅಂಶಗಳು ಹಿಂದೂ ದೇವಸ್ಥಾನಗಳ ರಕ್ಷಣೆ ದೃಷ್ಟಿಯಿಂದ ಈ ವಿದೇಯಕವು ಅತ್ಯಂತ ಅಪಾಯಕಾರಿಯಾಗಿರುವುದರಿಂದ ಈ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ಅಂಕಿತ ಹಾಕಬಾರದೆಂದು ಆಗ್ರಹಿಸಿ ಗದಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಪಾಲರಿಗೆ ಮನವಿ ನೀಡಲಾಯಿತು.

    ರಾಣಿ ಚಂದಾವರಿ, ಸುಂದರಾಬಾಯಿ ಧರ್ಮದಾಸ, ಜಯಶ್ರೀ ಹೇಬಸೂರ, ಶ್ರೀವಿಠ್ಠಲ ಬಾಕಳೆ, ಶ್ರೀ ಚೇತನ್ ನಾಯಕರ, ಸೌ ಮಂಗಲಾ ಬೇಲೇರಿ, ಸೌ ಸುಮಿತ್ರಾ ಕಮತರ, ಸೌ.ಶ್ರೀ ಮಂಜುನಾಥ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts