More

    ಸಹಕಾರಿ ಉಳಿದರೆ ರೈತರು ಉಳಿಯುತ್ತಾರೆ ಎಂದ ಮಾಜಿ ಶಾಸಕ ಬಸನಗೌಡ ಬ್ಯಾಗವಾಟ

    ಮಾನ್ವಿ: ಕಡಿಮೆ ಬಡ್ಡಿ ದರದಲ್ಲಿ ರೈತರಿಗೆ ಸಾಲ ಸಿಗುವ ಸಹಕಾರ ಕ್ಷೇತ್ರ ಉಳಿದರೆ ಮಾತ್ರ ರೈತ ಉಳಿಯಲು ಸಾಧ್ಯ ಎಂದು ಮಾಜಿ ಶಾಸಕ ಬಸನಗೌಡ ಬ್ಯಾಗವಾಟ ಹೇಳಿದರು.

    ಪಟ್ಟಣದ ಸಾಯಿಬಾಬಾ ಕಲ್ಯಾಣ ಮಂಟಪದಲ್ಲಿ ಸೋಮವಾರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಟಿಎಪಿಸಿಎಂಎಸ್ ಆಶ್ರಯದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ವಿಶ್ವನಾಥಪಾಟೀಲ್ ತೋರಣದಿನ್ನಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಸಹಕಾರಿ ಕ್ಷೇತ್ರಕ್ಕೆ ಹಲವು ವರ್ಷಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸಿದ ವಿಶ್ವನಾಥಪಾಟೀಲ್‌ಗೆ ಸಹಕಾರ ರತ್ನ ಪ್ರಶಸ್ತಿ ಸಿಕ್ಕಿರುವುದು ಜಿಲ್ಲೆಗೆ ಹೆಮ್ಮೆಯ ವಿಷಯ ಎಂದರು.

    ಆರ್‌ಡಿಸಿಸಿ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಪಾಟೀಲ್, ‘ಸಹಕಾರ ಕ್ಷೇತ್ರಗಳ ಪ್ರಗತಿಯಿಂದಲೇ ರೈತರ ಕುಟುಂಬ ಸಾಮಾಜಿಕ, ಆರ್ಥಿಕವಾಗಿ ಪ್ರಗತಿ ಹೊಂದಲು ಸಹಕಾರಿಯಾಗಿದೆ ಎಂದರು. ಟಿಎಪಿಸಿಎಂಎಸ್ ಅಧ್ಯಕ್ಷ ಎಸ್.ತಿಮ್ಮಾರೆಡ್ಡಿ ಭೋಗಾವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಖಾದಿ ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಶಂಕರಗೌಡ ಹರವಿ, ಟಿಎಪಿಸಿಎಂಎಸ್ ಉಪಾಧ್ಯಕ್ಷ ಮಲ್ಲನಗೌಡ ನಕ್ಕುಂದಿ, ಬಸವಶ್ರೀ ಬ್ಯಾಂಕಿನ ಅಧ್ಯಕ್ಷ ಡಾ.ಶಂಕರಗೌಡ ಎಸ್.ಪಾಟೀಲ್, ಆರ್‌ಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಐ.ಎಸ್.ಗಿರೆಡ್ಡಿ ಮಾತನಾಡಿದರು.

    ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ವಿಶ್ವನಾಥಪಾಟೀಲ್ ತೋರಣದಿನ್ನಿ ಅವರನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಟಿಎಪಿಸಿಎಂಎಸ್ ವತಿಯಿಂದ ಸನ್ಮಾನಿಸಲಾಯಿತು. ಉಪ ನಿಬಂಧಕ ಮನೋಹರ, ಆರ್‌ಡಿಸಿಸಿ ವ್ಯವಸ್ಥಾಪಕ ಲಿಂಗಾರೆಡ್ಡಿ, ಮಾನ್ವಿ-ಸಿರವಾರ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು, ನಿರ್ದೇಶಕರು, ಕಾರ್ಯ ನಿರ್ವಾಹಣಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts