ಮಂದಾರ್ತಿ ಸಹಕಾರಿ ಸಂಘ ಸುವರ್ಣ ಮಹೋತ್ಸವ

mandarthi
ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘ.
Published on

ಕೊಕ್ಕರ್ಣೆ: ಮಂದಾರ್ತಿ ಹಾಲು ಉತ್ಪಾದಕರ ಸಹಕಾರಿ ಸಂಘ ಸುವರ್ಣ ಮಹೋತ್ಸವ ಕಾರ್ಯಕ್ರಮ ಅ.19ರಂದು ಶೇಡಿಕೊಡ್ಲು ಮಂದಾರ್ತಿ ಶ್ರೀ ದುರ್ಗಾ ಸಾನ್ನಿಧ್ಯದಲ್ಲಿ ನಡೆಯಲಿದೆ.

ಸಂಘದ ಕಚೇರಿಯಲ್ಲಿ ಗಣಪತಿ ಹೋಮ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಸಾನ್ನಿಧ್ಯದಲ್ಲಿ ಒಕ್ಕೂಟ ಅಧ್ಯಕ್ಷರು, ನಿರ್ದೇಶಕರು, ಅಧಿಕಾರಿಗಳು, ಹೈನುಗಾರರು ಒಕ್ಕೂಟದ ಹಾಲು ಉತ್ಪಾದನೆ ಹೆಚ್ಚಳಕ್ಕೆ ದೇವಿಯಲ್ಲಿ ಸಾಮೂಹಿಕ ಪ್ರಾರ್ಥನೆ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಿಂದ ಮಂದಾರ್ತಿ ಹಾಲು ಉತ್ಪಾದಕರ ಸಂಘದವರೆಗೆ ಮೆರವಣಿಗೆ, ಸಂಘದ ವಠಾರದಲ್ಲಿ ಗೋಪೂಜೆ ನಡೆಯಲಿದೆ. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆನುವಂಶಿಕ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸುವರು. ಟಿ.ಎ.ಪೈ ಹಾಗೂ ಡಾ.ಕುರಿಯನ್ ಭಾವಚಿತ್ರಕ್ಕೆ ಪುಷ್ಪನಮನ ಜರುಗಲಿದೆ. ದ.ಕ. ಸಹಕಾರಿ ಹಾಲು ಒಕ್ಕೂಟ ಮಂಗಳೂರು ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಸಭಾ ಕಾರ್ಯಕ್ರಮ ಉದ್ಘಾಟಿಸುವರು.

ಮಂದಾರ್ತಿ ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಎಚ್.ವಿಠಲ ಶೆಟ್ಟಿ ಶೇಡಿಕೊಡ್ಲು ಅಧ್ಯಕ್ಷತೆ ವಹಿಸುವರು. ಧರ್ಮಸ್ಥಳ ಗ್ರಾಮಾಬಿವೃದ್ಧಿ ಸಂಸ್ಥೆಯ ವಿಶ್ರಾಂತ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಎಚ್.ಮಂಜುನಾಥ ಹೈನುಗಾರಿಕೆ ಸವಾಲುಗಳು ವಿಷಯದ ಕುರಿತು ದಿಕ್ಸೂಚಿ ಭಾಷಣಗೈಯುವರು. ದ.ಕ. ಸಹಕಾರಿ ಹಾಲು ಒಕ್ಕೂಟ ಮಂಗಳೂರು ಉಪಾಧ್ಯಕ್ಷ ಎಸ್.ಬಿ.ಜಯರಾಮ ರೈ, ಮಾಜಿ ಉಪಾಧ್ಯಕ್ಷರು, ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರು, ವ್ಯವಸ್ಥಾಪಕರು, ಉಪವ್ಯವಸ್ಥಾಪಕರು, ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಕರ್ನಾಟಕ ಹಾಲು ಮಹಾಮಂಡಲ ಬೆಂಗಳೂರು ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಮಂದಾರ್ತಿ ಹಾಲು ಉತ್ಪಾದಕ ಸಂಘ ಮಾಜಿ ಅಧ್ಯಕ್ಷ ಬಿ.ಜಯರಾಮ ರೈ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಇಂದ್ರಾಳಿ ಜಯಕರ ಶೆಟ್ಟಿ, ಮಂದಾರ್ತಿ ಸೇವಾ ಸಹಕಾರಿ ಅಧ್ಯಕ್ಷ ಎಚ್.ಗಂಗಾಧರ ಶೆಟ್ಟಿ, ಒಕ್ಕೂಟ ಅಧಿಕಾರಿಗಳು, ಪಶುವೈದ್ಯರು, ವಿಸ್ತರಣಾಧಿಕಾರಿಗಳು, ಕಾರ್ಯದರ್ಶಿಗಳು, ಹೈನುಗಾರರು ಮತ್ತಿತರರು ಉಪಸ್ಥಿತರಿರುವರು ಎಂದು ಸಂಘದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net