ಸತ್ಕಾರ್ಯಗಳಿಗೆ ಲಭಿಸುತ್ತದೆ ಭಗವಂತನ ಆಶೀರ್ವಾದ

nithyananda 1
ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ ಕಾರ್ಯಕ್ರಮ ಉದ್ಘಾಟಿಸಿದರು. ವಸಂತ ಪೈ, ಪಿ.ಸಿ.ಜಯರಾಮ ಮೊದಲಾದವರಿದ್ದರು.
Published on

ಸುಳ್ಯ: ನಾವು ಮಾಡುವ ಎಲ್ಲ ಕೆಲಸಗಳು ಭಗವಂತನ ಪ್ರೀತಿಗೆ ಅರ್ಹವಾಗುವಂತಿರಬೇಕು. ಹಾಗಿದ್ದರೆ ಮಾತ್ರ ಪಡೆದಿರುವ ಶ್ರೇಷ್ಠ ಜನ್ಮಕ್ಕೆ ನೈಜ ಅರ್ಥ ದೊರಕಲು ಸಾಧ್ಯ ಎಂದು ಬೆಳ್ತಂಗಡಿಯ ಗಮಕ ಕಲಾ ಪರಿಷತ್ ಅಧ್ಯಕ್ಷ ರಾಮಕೃಷ್ಣ ಭಟ್ ತಿಳಿಸಿದರು.

ಮಂಡೆಕೋಲು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು.

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಅಡೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಪೈ ಮಾತನಾಡಿದರು. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಉಗ್ರಾಣಿಮನೆ ಅಧ್ಯಕ್ಷತೆ ವಹಿಸಿದ್ದರು.
ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ.ಜಯರಾಮ, ಸಿ.ಎ. ಬ್ಯಾಂಕ್ ಅಧ್ಯಕ್ಷ ವಿಕ್ರಂ ಅಡ್ಪಂಗಾಯ, ವಕೀಲ ಶ್ರೀಕಾಂತ್, ಉದ್ಯಮಿ ಸುಧಾಕರ ಕಾಮತ್, ದೇಗುಲ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವಮೂರ್ತಿ ಹೆಬ್ಬಾರ್, ಕಣೆಮರಡ್ಕ ವಿಷ್ಣುಮೂರ್ತಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪೂರ್ಣಚಂದ್ರ ಕಣೆಮರಡ್ಕ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್ ಕಣೆಮರಡ್ಕ ಉಪಸ್ಥಿತರಿದ್ದರು.

ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸದಾನಂದ ಮಾವಜಿ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಆರ್ಥಿಕ ಸಮಿತಿ ಸಂಚಾಲಕ ಉದಯಕುಮಾರ್ ಆಚಾರ್ ವಂದಿಸಿದರು. ಅಚ್ಯುತ ಅಟ್ಲೂರು ಹಾಗೂ ಗಣೇಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿದುಷಿ ಅಪೂರ್ವ ಪಾವೂರು ಬಳಗದದಿಂದ ನೃತ್ಯ ವೈವಿಧ್ಯ ನಡೆಯಿತು.

ಭಕ್ತಿ-ಶ್ರದ್ಧೆಯಿಂದ ಭಗವಂತನನ್ನು ಸ್ತುತಿಸಿದರೆ ಆತನ ಆಶೀರ್ವಾದ ಸದಾ ಇರುತ್ತದೆ. ಇತ್ತೀಚೆಗೆ ಧಾರ್ಮಿಕ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವ ನಡೆಯುತ್ತಿರುವುದು ಉತ್ತಮ ಬೆಳವಣಿಗೆ.- ನಿತ್ಯಾನಂದ ಮುಂಡೋಡಿಕುಕ್ಕೆ ದೇವಳ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ https://www.vijayavani.net/sports-fans-built-house-for-the-poor-people

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net