ಮದ್ದೂರಿನ ಸೊಸೆಗೆ ಮಿಸೆಸ್ ಇಂಡಿಯಾ ಕಿರೀಟ | Mrs. India Pride of Nation 2024

Mrs. India Pride of Nation 2024

Mrs. India Pride of Nation 2024 : ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ – 2024 ಕಿರೀಟವು ಕನ್ನಡತಿ ಡಾ. ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ.

ನವದೆಹಲಿಯಲ್ಲಿ ಐದು ದಿನಗಳು ನಡೆದ ಅಂತಿಮ ಸುತ್ತಿನಲ್ಲಿ ಕರ್ನಾಟಕದ ಮದ್ದೂರಿನ ಡಾ. ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದ್ದಾರೆ. ಜೊತೆಗೆ ಅದೇ ವೇದಿಕೆಯಲ್ಲಿ ಸೋಷಿಯಲ್ ಇನ್ಫ್ಲುಯೆನ್ಸರ್ ಗೌರವಕ್ಕೂ ಪಾತ್ರರಾಗಿದ್ದಾರೆ.

ವೃತ್ತಿಯಿಂದ ಪಶುಪಾಲನ ವೈದ್ಯರಾದ ಡಾ. ಪ್ರಿಯಾ ಗೋಸ್ವಾಮಿ, ಮೂಲತಃ ಪಂಜಾಬಿಯಾದರೂ ಗೋವಾದಲ್ಲಿ ಬೆಳೆದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿದ್ದಾರೆ. ಭಾರತೀಯ ಸೇನೆಯಲ್ಲಿರುವ ಇವರ ಪತಿ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು.

Mrs. India Pride of Nation 2024

ಮದ್ದೂರಿನ ಎಚ್ ಕೆ ವೀರಣ್ಣಗೌಡ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ. ಬಿ ಸಿದ್ದೇಗೌಡ ಅವರ ಪುತ್ರರಾದ ಕರ್ನಲ್ ಸಂಜೀತ್, ಪ್ರಸ್ತುತ ಉತ್ತರಖಾಂಡ್​ನಲ್ಲಿ ಭಾರತೀಯ ಸೇನೆಯ ಕುದುರೆ ತರಬೇತಿ ವಿಭಾಗದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ. ಪಶು ವೈದ್ಯರಾಗಿರುವ ಡಾ. ಪ್ರಿಯಾ ಕೂಡ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಇದನ್ನೂ ಓದಿ: ನೀವು ಈ ದಿನಾಂಕಗಳಲ್ಲಿ ಜನಿಸಿದ್ದೀರಾ? ಹಾಗಾದರೆ ಇದೇ ನೋಡಿ ನಿಮ್ಮ ವರ ಮತ್ತು ಶಾಪ! Numerology

16 ವರ್ಷದ ಮಗಳು ಧ್ರುವಿ ಸಂಜಿತ್ ಹಾಗೂ 9 ವರ್ಷದ ಮಗ ಶೌರ್ಯಗೌಡ, ಮಾವ ಸಿದ್ದೇಗೌಡ, ಅತ್ತೆ ಸುಮಿತ್ರಮ್ಮ ಅವರ ಸಹಕಾರ ಹಾಗೂ ಪತಿ ಕರ್ನಲ್ ಸಂಜಿತ್, ನಾದಿನಿ ಸುಪ್ರೀತಾ ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ಡಾ. ಪ್ರಿಯಾ ಗೋಸ್ವಾಮಿ ಸಂತಸ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮದ ನಿರ್ದೇಶಕರಾದ ಭಾರ್ಕಾ ನಂಗಿಯಾ ಮತ್ತು ಅಭಿಷೇಕ್ ಅವರ ಸಲಹೆಗಳೇ‌ ಗೆಲುವಿಗೆ ದಾರಿ ತೋರಿಸಿದವು ಎಂದು ಸ್ಮರಿಸಿದ್ದಾರೆ.

Mrs. India Pride of Nation 2024

ಹಿಂದಿ ರಾಷ್ಟ್ರ ಭಾಷೆಯಲ್ಲ! ಅಶ್ವಿನ್​​ ಹೇಳಿಕೆಗೆ ತಮಿಳುನಾಡು BJP ರಾಜ್ಯಾಧ್ಯಕ್ಷ ಅಣ್ಣಾಮಲೈ ಕೊಟ್ಟ ಉತ್ತರ ವೈರಲ್​… K Annamalai

ಸೈಕಾಲಜಿ ಪ್ರಕಾರ ನಿಮ್ಮ ಬದುಕನ್ನು ಖಾಸಗಿಯಾಗಿ ಇಟ್ಟುಕೊಂಡ್ರೆ ಎಷ್ಟು ಪ್ರಯೋಜನಗಳಿವೆ ಗೊತ್ತಾ? Life

Share This Article

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…

ಕಣ್ಣಿನಪೊರೆ ಸಮಸ್ಯೆಗೆ ಪರಿಹಾರ ಏನೆಂದು ಆಲೋಚಿಸುತ್ತಿದ್ದೀರಾ?; ಇಲ್ಲಿದೆ ಸೂಕ್ತ ಮನೆಮದ್ದಿನ ಮಾಹಿತಿ | Health Tips

ಪ್ರಸ್ತುತ ಕಾರ್ಯನಿರತ ಜೀವನ ಮತ್ತು ಕಳಪೆ ಜೀವನಶೈಲಿಯಿಂದಾಗಿ ಅನೇಕ ಸಮಸ್ಯೆಗಳು ಉದ್ಭವಿಸುತ್ತಿವೆ. ಅದರಲ್ಲಿನ ಪ್ರಮುಖ ಸಮಸ್ಯೆಗಳಲ್ಲಿ…