17 C
Bangalore
Friday, December 13, 2019

ಇಸ್ರೇಲ್ ಕೃಷಿ ಪದ್ಧತಿ ಅನುಸರಿಸಿದ ಸಣ್ಣ ನೀರಾವರಿ ಸಚಿವ!

Latest News

ಸಂಭ್ರಮದ ಅಮೃತೇಶ್ವರ ರಥೋತ್ಸವ

ಅಣ್ಣಿಗೇರಿ: ಪಟ್ಟಣದ ಆರಾಧ್ಯದೈವ ಶ್ರೀ ಅಮೃತೇಶ್ವರ ಮಹಾರಥೋತ್ಸವ ಗುರುವಾರ ಸಂಜೆ ಸಹಸ್ರಾರು ಭಕ್ತರ ಜಯಘೊಷಗಳ ಮಧ್ಯ ಸಡಗರ, ಸಂಭ್ರಮದಿಂದ ಜರುಗಿತು.

ಗಣರಾಜ್ಯೋತ್ಸವಕ್ಕೆ ಬ್ರೆಜಿಲ್ ಪ್ರಧಾನಿ ಬೇಡ

ವಿಜಯವಾಣಿ ಸುದ್ದಿಜಾಲ ಧಾರವಾಡ 2020ರ ಜ. 26ರ ಗಣರಾಜ್ಯೋತ್ಸವದ ಅತಿಥಿಯಾಗಿ ಬ್ರೆಜಿಲ್ ಪ್ರಧಾನಿ ಬೊಲ್ಸೇನಾರೋ ಬರುತ್ತಿರುವುದನ್ನು ರೈತ ಸಂಘ...

ಡಿಸಿಪಿಯಾಗಿ ಬಿ.ಎಸ್. ನೇಮಗೌಡ ಅಧಿಕಾರ ಸ್ವೀಕಾರ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್​ನ ಅಪರಾಧ ಮತ್ತು ಸಂಚಾರ ವಿಭಾಗಕ್ಕೆ ವರ್ಗವಾಗಿ ಬಂದಿರುವ ಉಪ ಪೊಲೀಸ್ ಆಯುಕ್ತ(ಡಿಸಿಪಿ) ಬಿ.ಎಸ್. ನೇಮಗೌಡ ಗುರುವಾರ...

ಸೇವೆ ಸ್ಥಗಿತಗೊಳಿಸಿ ಧರಣಿ

ವಿಜಯವಾಣಿ ಸುದ್ದಿಜಾಲ ಕುಂದಗೋಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತಾಲೂಕಾಸ್ಪತ್ರೆ ಡಿ ದರ್ಜೆ ಗುತ್ತಿಗೆ ನೌಕರರು ಗುರುವಾರ ಸೇವೆ...

ಜ್ಞಾನ ಸಂಸತ್ ಅಧಿವೇಶನ ನಾಳೆ

ವಿಜಯವಾಣಿ ಸುದ್ದಿಜಾಲ ಧಾರವಾಡ ಹುಬ್ಬಳ್ಳಿಯ ವರದಶ್ರೀ ಫೌಂಡೇಷನ್​ನಿಂದ ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಡಿ. 14ರಂದು ಸಂಜೆ 4ಕ್ಕೆ...

| ಕೆ.ಎನ್. ರಾಘವೇಂದ್ರ ಮಂಡ್ಯ

ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಅವರು ತಮ್ಮ ಜಮೀನಿನಲ್ಲಿ ಇಸ್ರೇಲ್ ಕೃಷಿ ಪದ್ಧತಿ ಅಳವಡಿಸಿಕೊಂಡು ಮಾದರಿ ಕೃಷಿಕರಾಗಿದ್ದಾರೆ. ಜತೆಗೆ ಅದರ ಲಾಭ ಕಾಣುತ್ತಿದ್ದಾರೆ.

ರಾಜ್ಯದಲ್ಲಿ ಇಸ್ರೇಲ್ ಕೃಷಿ ಪದ್ಧತಿ ಸಾಕಷ್ಟು ಸುದ್ದಿ ಮಾಡಿತ್ತು. ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರುವ ಮುನ್ನ ಕೃಷಿ ಬಗ್ಗೆ ತಿಳಿಯಲು ಇಸ್ರೇಲ್ ಪ್ರವಾಸ ಮಾಡಿದ್ದರು. ಈ ವೇಳೆ ಸಿ.ಎಸ್. ಪುಟ್ಟರಾಜು ಕೂಡ ಅವರ ಜತೆ ಹೋಗಿ ಅಧ್ಯಯನ ಮಾಡಿ ಮರಳಿದ್ದರು. ಕಡಿಮೆ ನೀರು ಬಳಸಿ ಹೆಚ್ಚು ಇಳುವರಿ ಪಡೆಯುವ ಇಸ್ರೇಲ್ ಪದ್ಧತಿ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಿದ್ದ ಪುಟ್ಟರಾಜು, ಸ್ವಂತ ಜಮೀನಿ ನಲ್ಲೇ ಅದನ್ನು ಅಳವಡಿಸಿಕೊಂಡಿದ್ದಾರೆ. ಇದರಿಂದ ಕೃಷಿಯಲ್ಲಿ ಸಾಕಷ್ಟು ಬದಲಾವಣೆ ಕಂಡಿದ್ದಾರೆ.

ಉತ್ತಮ ಇಳುವರಿ ನಿರೀಕ್ಷೆ: ಪಾಂಡವಪುರ ತಾಲೂಕು ಚಿನಕುರಳಿ ಗ್ರಾಮದಲ್ಲಿ 2 ಕಡೆ ಇರುವ ಸುಮಾರು 15 ಎಕರೆ ಜಮೀನಿನಲ್ಲಿ ಇಸ್ರೇಲ್ ಕೃಷಿ ಪದ್ಧತಿ ಅನುಷ್ಠಾನಗೊಳಿಸಿರುವ ಪುಟ್ಟರಾಜು, ನಾಲ್ಕು ಎಕರೆ ಪ್ರದೇಶದಲ್ಲಿ ಕಾಫಿ ಬೆಳೆದಿದ್ದಾರೆ. ಇನ್ನುಳಿದ ಜಮೀನಿನಲ್ಲಿ ಅಡಕೆ, ತೆಂಗು, ಮೆಣಸು, ಬಾಳೆ, ತೊಗರಿ, ಜಾನುವಾರು ಮೇವಿನ ಬೆಳೆ, ತೇಗ, ಪಪ್ಪಾಯ ಸೇರಿ ಹಲವು ಬೆಳೆ ಬೆಳೆದಿದ್ದಾರೆ.

ಮೊದಲು ಈ ಬೆಳೆಗೆಂದು ನಾಲ್ಕು ಬೋರ್​ವೆಲ್ ಹಾಕಿಸಿದ್ದರು. ಆದರೆ ಎಲ್ಲ ಬೆಳೆಗೂ ನೀರು ಹಾಯಿಸಲು ಕಷ್ಟವಾಗುತ್ತಿತ್ತು. ವಿದ್ಯುತ್ ಸಮಸ್ಯೆಯೂ ಕಾಡುತ್ತಿತ್ತು. ಎರಡು ವರ್ಷದ ಹಿಂದೆ ಇಸ್ರೇಲ್ ಪದ್ಧತಿ ಅನುಷ್ಠಾನದ ಬಳಿಕ ಕೇವಲ ಒಂದು ಬೋರ್​ವೆಲ್​ನ ನೀರು ಬಳಸಿಕೊಳ್ಳಲಾಗುತ್ತಿದೆ. ಹನಿ ನೀರಾವರಿ ಆಗಿರುವುದರಿಂದ 3-4 ಗಂಟೆ ವಿದ್ಯುತ್ ಇದ್ದರೂ ಸಾಲುತ್ತಿದೆ. ಈಗಾಗಲೇ ಎಲ್ಲ ಬೆಳೆಗಳ ಇಳುವರಿ ಉತ್ತಮವಾಗಿದ್ದು, ಈ ಬಾರಿ ಹೆಚ್ಚಿನ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಮೂರು ಲಕ್ಷ ರೂ. ವೆಚ್ಚ ಮಾಡಿ ಇಸ್ರೇಲ್ ಕೃಷಿ ಪದ್ಧತಿ ಅಳವಡಿಸಿಕೊಳ್ಳಲಾಗಿದೆ. ಜೈನ್ ಕಂಪನಿ ಇದನ್ನು ಮಾಡಿದೆ. ಜತೆಗೆ ಸಚಿವರು ಸರ್ಕಾರದಿಂದ ಸಿಗುವ ಸಬ್ಸಿಡಿ ಸೌಲಭ್ಯ ಬಳಸಿಕೊಂಡಿದ್ದು, ಮಾದರಿ ಕೃಷಿಕರಾಗಿದ್ದಾರೆ. ವಾರಕ್ಕೊಮ್ಮೆ ಅಥವಾ ಗ್ರಾಮಕ್ಕೆ ಬಂದಾಗ ತೋಟಕ್ಕೆ ಹೋಗಿ ನಿರ್ವಹಣೆ ಮಾಡಿಸುತ್ತಾರೆ. ಇಸ್ರೇಲ್ ಕೃಷಿ ಅನುಷ್ಠಾನದ ಬಳಿಕ ಜಮೀನಿನಲ್ಲಿ ಬೆಳೆದಿರುವ ವಿವಿಧ ಬೆಳೆಗಳು ಉತ್ತಮ ಇಳುವರಿ ಕಾಣತೊಡಗಿವೆ. ಹಾಗಾಗಿ ಅಕ್ಕಪಕ್ಕದ ಗ್ರಾಮಗಳ ಕೃಷಿಕರು ತೋಟಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಇಸ್ರೇಲ್ ಕೃಷಿ ಬಗ್ಗೆ ಅಧ್ಯಯನ ಮಾಡಿ ಬಂದ ಬಳಿಕ ಅದನ್ನು ನನ್ನ ಜಮೀನಿನಲ್ಲಿ ಅಳವಡಿಸಿಕೊಳ್ಳಬೇಕೆಂದು ತೀರ್ವನಿಸಿದೆ. ಮೊದಲು 15 ಎಕರೆ ಜಮೀನಿಗೆ ನೀರೊದಗಿಸುವುದು ಕಷ್ಟವಾಗಿತ್ತು. ಆದರೆ ಈಗ ಸಮಸ್ಯೆಯಾಗುತ್ತಿಲ್ಲ. ಒಂದೇ ಬೋರ್​ವೆಲ್​ನಲ್ಲಿ ಜಮೀನಿಗೆಲ್ಲ ನೀರು ಹಾಯಿಸಬಹುದು. ಜತೆಗೆ ಉತ್ತಮ ಇಳುವರಿಯೂ ಬರುತ್ತಿದೆ. ರೈತರು ಈ ಪದ್ಧತಿ ಅನುಸರಿಸಿದರೆ ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಬೆಳೆಯಬಹುದು.

| ಸಿ.ಎಸ್.ಪುಟ್ಟರಾಜು ಸಣ್ಣ ನೀರಾವರಿ ಸಚಿವ

Stay connected

278,749FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...