25.7 C
Bangalore
Sunday, December 15, 2019

ಬಾಲ್ಯದ ಜೀವನವೇ ಚೆಂದ

Latest News

ಬಿಎಸ್‌ವೈ ವೈಟ್‌ಡ್ರೆಸ್ ರಮೇಶ ಬ್ಲ್ಯಾಕ್ ಮಾಡ್ತಾನೆ

ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧರಿಸುವ ವೈಟ್ ಡ್ರೆಸ್‌ಅನ್ನು ಬ್ಲಾೃಕ್ ಮಾಡುತ್ತಾನೆ ಎಂದು ಶಾಸಕ ಸತೀಶ ಜಾರಕಿಹೊಳಿ...

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಮಂಡ್ಯ: ಯಾವುದೇ ರೀತಿಯ ಒತ್ತಡವಿಲ್ಲದೆ, ಮುಕ್ತವಾಗಿ ಆಲೋಚಿಸುವ ಬಾಲ್ಯದ ಜೀವನವೇ ಚೆಂದ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ನಗರದ ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮಕ್ಕಳ ಸಹಾಯವಾಣಿ, ನೊಡೆಲ್-ಬರ್ಡ್ಸ್ ಸಂಸ್ಥೆ, ಕೊಲಾಬ್-ವಿಕಸನ ಸಂಸ್ಥೆ, ಹೊಸಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಗುರುವಾರ ಆಯೋಜಿಸಿದ್ದ ‘ಮಕ್ಕಳ ದಿನ ಮತ್ತು ಸಹಾಯವಾಣಿ ಸ್ನೇಹಿ ಸಪ್ತಾಹ’ಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರ ಜೀವನದಲ್ಲಿ ಬಾಲ್ಯ ಪ್ರಮುಖ ಘಟ್ಟ. ಈ ವೇಳೆ ಸಹಪಾಠಿಗಳೊಂದಿಗೆ ಕಾಲಕಳೆಯುತ್ತಾ, ಹೊಸ ಆಲೋಚನೆ ಮಾಡಲಾಗುತ್ತದೆ. ಒತ್ತಡವಿಲ್ಲದೆ ಪ್ರೀತಿ, ವಾತ್ಸಲ್ಯದಿಂದ ಇರುತ್ತಾರೆ ಎಂದರು.

ಎಲ್ಲ ಮಕ್ಕಳಿಗೂ ಪ್ರೀತಿ, ವಾತ್ಸಲ್ಯ ಸಿಗುವುದಿಲ್ಲ. ಕೆಲವರು ದೌರ್ಜನ್ಯ, ಶೋಷಣೆಗೊಳಗಾಗಿ ದುಖಃದಲ್ಲಿ ಕಾಲ ಕಳೆಯುತ್ತಿರುತ್ತಾರೆ. ಇಂತಹ ಸಮಸ್ಯೆ ಗಮನಿಸಿದ ಸರ್ಕಾರ, ಮಕ್ಕಳಿಗೆ ಅನುಕೂಲ ಮಾಡುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಜಾರಿಗೊಳಿಸಿತು. ಪ್ರತಿ ಮಗುವಿಗೂ ಕಡ್ಡಾಯವಾಗಿ ಉಚಿತ ಶಿಕ್ಷಣ, ಅನ್ನದಾಸೋಹ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಜತೆಗೆ ದೌರ್ಜನ್ಯಕ್ಕೊಳಗಾಗುವ ಮಕ್ಕಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸಹಾಯವಾಣಿಯನ್ನು ತೆರೆಯಲಾಗಿದೆ ಎಂದರು.

ಸರ್ಕಾರ, ಪಾಲಕರ ಜತೆಗೆ ಮಕ್ಕಳಿಗೆ ಎಲ್ಲ ಸೌಲಭ್ಯ ಪಡೆಯುವಂತೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಇನ್ನು ನವೆಂಬರ್ ತಿಂಗಳು ಮಕ್ಕಳಿಗೆಂದೇ ಸೀಮಿತಗೊಳಿಸಲಾಗಿದೆ. ಮಕ್ಕಳ ಸಹಾಯವಾಣಿ, ಬಾಲ್ಯವಿವಾಹದಿಂದಾಗುವ ಪರಿಣಾಮ ಸೇರಿದಂತೆ ಮಕ್ಕಳಿಗೆ ಸೇರಿದ ಎಲ್ಲ ಕಾರ್ಯಕ್ರಮದ ಬಗ್ಗೆ ಹೆಚ್ಚಿನ ಪ್ರಚಾರವಾಗಬೇಕು. ಈ ಮೂಲಕ ಪ್ರತಿಯೊಬ್ಬರ ಮನ, ಮನೆ ತಲುಪುವಂತೆ ಮಾಡಬೇಕಿದೆ ಎಂದರು.
ರಕ್ಷಾ ಬಂಧನಕ್ಕೆ ಎಎಸ್‌ಪಿ ಡಾ.ವಿ.ಜೆ.ಶೋಭಾರಾಣಿ ಚಾಲನೆ ನೀಡಿದರು. ಬಾಲ್ಯವಿವಾಹ ನಿಷೇಧ ಕುರಿತ ಕರಪತ್ರ ಬಿಡುಗಡೆ ಮಾಡಲಾಯಿತು. ಅಂತೆಯೇ, ಸಪ್ತಾಹಕ್ಕೆ ಸಹಿ ಸಂಗ್ರಹಿಸುವ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಎಚ್.ಎಸ್.ಮಂಜುನಾಥ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ರಾಜಮೂರ್ತಿ, ಬಿಇಒ ಚಂದ್ರಕಾಂತಾ, ವಿಕಸನ ಸಂಸ್ಥೆ ನಿರ್ದೇಶಕ ಮಹೇಶ ಚಂದ್ರಗುರು, ಮಕ್ಕಳ ಸಹಾಯವಾಣಿ ನೋಡೆಲ್ ಅಧಿಕಾರಿ ವೆಂಕಟೇಶ್, ಜಿಲ್ಲಾ ಕಾರ್ಮಿಕಾಧಿಕಾರಿ ನಾಗೇಂದ್ರ, ಎಸ್‌ಡಿಎಂಸಿ ಅಧ್ಯಕ್ಷೆ ನಾಗಮಣಿ, ಶಿಕ್ಷಣಾಸಕ್ತ ಶೇಖರ್, ಮುಖ್ಯಶಿಕ್ಷಕರಾದ ಮಹೇಶ್, ರಾಜಮಣ್ಣಿ ಇದ್ದರು. ಶಾಲೆಯ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...