Thursday, 13th December 2018  

Vijayavani

ಕಬ್ಬು ದರ ಬಾಕಿ ನೀಡಲು ರೈತರ ಆಗ್ರಹ -ಸುವರ್ಣ ಸೌಧದಕ್ಕೆ ಮುತ್ತಿಗೆ ಯತ್ನ - ಪೊಲೀಸರೊಂದಿಗೆ ಅನ್ನದಾತರ ಜಟಾಪಟಿ        ರಾಜಸ್ಥಾನ ಸಿಎಂ ಆಗಿ ಗೆಹ್ಲೋಟ್ ಹೆಸರು ಫೈನಲ್ - ರಾಹುಲ್ ಆಪ್ತ ಸಚಿನ್ ಪೈಲಟ್​ಗೆ ಡಿಸಿಎಂ ಪಟ್ಟ - ಅಧಿಕೃತ ಘೋಷಣೆ ಬಾಕಿ        ಬಳ್ಳಾರಿಯ ಮೈಲಾರದಲ್ಲಿ ಗೊರವಯ್ಯನ ಗಲಾಟೆ - ಸಣ್ಣಪ್ಪ ಮಲ್ಲಪ್ಪನವರಿಗೆ ಗೊರವಯ್ಯನ ದೀಕ್ಷೆ ಕೊಟ್ಟಿದ್ದಕ್ಕೆ ವಿರೋಧ         ಟ್ರಿನಿಟಿ ಸರ್ಕಲ್​​ನಲ್ಲಿ ಮೆಟ್ರೋ ಪಿಲ್ಲರ್ ಬಿರುಕು - ಜೀವದ ಜತೆ ಚೆಲ್ಲಾಟ ಬೇಡ - ದಿಗ್ವಿಜಯ ನ್ಯೂಸ್ ಜತೆ ಎಕ್ಸ್​​ಪರ್ಟ್​​ಗಳ ಮಾತು        ತಿರುವನಂತಪುರದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ -ಹಿಂಸಾಚಾರಕ್ಕೆ ಯತ್ನ, ಪೊಲೀಸರಿಂದ ಲಾಠಿಚಾರ್ಜ್       
Breaking News

ಮುಗೀತು ಖಾತೆ ಕ್ಯಾತೆ, ಶುರುವಾಗಿದೆ ಉಸ್ತುವಾರಿ ವ್ಯಥೆ

Monday, 11.06.2018, 1:55 PM       No Comments

ಮಂಡ್ಯ: ಖಾತೆ ಹಂಚಿಕೆಯಿಂದ ಉಂಟಾಗಿದ್ದ ಅಸಮಾಧಾನ ಶಮನವಾದ ಬೆನ್ನಲ್ಲೇ ಇದೀಗ ಜೆಡಿಎಸ್​ನಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿಗಾಗಿ ಸಚಿವರಾದ ಸಿ.ಎಸ್.ಪುಟ್ಟರಾಜು ಹಾಗೂ ಡಿ.ಸಿ.ತಮ್ಮಣ್ಣ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

ಸಣ್ಣ ನೀರಾವರಿ ಸಚಿವ ಸ್ಥಾನ ನೀಡಿದ್ದಕ್ಕೆ ಬೇಸರಗೊಂಡಿರುವ ಪುಟ್ಟರಾಜು ಅವರನ್ನು ಸಮಾಧಾನಪಡಿಸಲು ಉಸ್ತುವಾರಿಯನ್ನು ನೀಡಲು ಸಿಎಂ ಕುಮಾರಸ್ವಾಮಿ ಒಲವು ಹೊಂದಿದ್ದರು. ಇತ್ತ ಬೀಗರಾದ ಸಚಿವ ಡಿ.ಸಿ. ತಮ್ಮಣ್ಣ ಪರ ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರು ಹಾಗೂ ಮಾಜಿ ಸಚಿವ ಅಂಬರೀಶ್​ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಮಂಡ್ಯ ಜಿಲ್ಲಾ ಉಸ್ತುವಾರಿ ಹಂಚಿಕೆ ಕೆಲಸ ಮುಖ್ಯಮಂತ್ರಿ ಹೆಚ್ಡಿಕೆಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಮುಂದೆ ಇದು ಯಾವ ತಿರುವ ಪಡೆದುಕೊಳ್ಳುತ್ತದೋ ಎಂಬುದನ್ನು ಕಾದು ನೋಡಬೇಕಾಗಿದೆ.

Leave a Reply

Your email address will not be published. Required fields are marked *

Back To Top