More

    ಡಿಎಸ್4 ಸಂಘಟನೆಯಿಂದ ಪ್ರತಿಭಟನೆ

    ಮಂಡ್ಯ: ಕೇಂದ್ರ ಬಜೆಟ್‌ನಲ್ಲಿ ಪರಿಶಿಷ್ಟ ಜಾತಿ ಪಂಗಡಗಳ ಜನಸಂಖ್ಯೆಗೆ ಅನಗುಣವಾಗಿ ಅನುದಾನ ಮೀಸಲಿಡುವ ರಾಷ್ಟ್ರೀಯ ಎಸ್ಸಿ, ಎಸ್ಟಿ ಉಪಯೋಜನೆ ಕಾಯ್ದೆ ರೂಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ (ಡಿಎಸ್4) ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
    ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು ಡಿಸಿ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ಅವರಿಗೆ ಮನವಿ ಸ್ವೀಕರಿಸಿದರು.
    ಭಾರತೀಯರೆಲ್ಲರಿಗೂ ಸಮಾನ ಅವಕಾಶಕ್ಕಾಗಿ ವಿದ್ಯೆ, ಭೂಮಿ, ಆರೋಗ್ಯ ಸೇವೆಯನ್ನು ರಾಷ್ಟ್ರೀಕರಣ ಮಾಡಬೇಕು. ಭಾರತೀಯರೆಲ್ಲರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೊಳಗೊಂಡ ರಾಷ್ಟ್ರೀಯ ಜನಗಣತಿ ಮಾಡಿಸಬೇಕು. ಭಾರತದ ಕೃಷಿ ವಲಯವನ್ನು ಉದ್ಯಮವನ್ನಾಗಿ ಘೋಷಿಸಬೇಕು. ಕೃಷಿ ಉತ್ಪನ್ನಗಳಿಗೆ ವೈಜ್ಞಾನಿಕ ಬೆಲೆ ನೀಡಿ, ಸುವ್ಯವಸ್ಥಿತ ಕೃಷಿ ಮಾರುಕಟ್ಟೆ ವ್ಯವಸ್ಥೆಗೊಳಿಸಬೇಕು. ಮಹಿಳೆ ಮತ್ತು ಮಕ್ಕಳ ಮೇಲಿನ ಅತ್ಯಾಚಾರ, ಕೊಲೆ, ದೌರ್ಜನ್ಯ ತಡೆಯಲು ಕಠಿಣ ಕಾನೂನು ಜಾರಿಗೊಳಿಸಬೇಕು. ಮಹಿಳೆಯರ ಅಭ್ಯುದಯಕ್ಕಾಗಿ ಪ್ರತಿ ಸ್ವ-ಸಹಾಯ ಸಂಘಗಳಿಗೆ ಕೌಶಲ ತರಬೇತಿ ನೀಡಬೇಕು ಎಂದು ಆಗ್ರಹಿಸಿದರು.
    ಪರಿಶಿಷ್ಟ ಜಾತಿ/ಪಂಗಡಗಳ ದೌರ್ಜನ್ಯ ತಡೆ ತಿದ್ದುಪಡಿ ಕಾಯ್ದೆ (2014)ಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರಿ ಸೇವೆಯಲ್ಲಿನ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ, ನೇಮಕಾತಿ ಪ್ರಕ್ರಿಯೆ ನಡೆಯಬೇಕು. ಮಹದಾಯಿ, ಕೃಷ್ಣ, ಕಾವೇರಿ ಜಲ ವಿವಾದ ಸೇರಿದಂತೆ ಗಡಿ, ಭಾಷೆ ಮುಂತಾದ ಜ್ವಲಂತ ಸಮಸ್ಯೆಗಳಿಗೆ ಮುಕ್ತಿ ನೀಡಿ ಕರ್ನಾಟಕದ ಅಭಿವೃದ್ಧಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು.
    ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಶಿವರಾಜ್, ಚನ್ನಕೇಶವ, ಶಿವಶಂಕರ್, ಆನಂದ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts