More

  ಯಾವುದೇ ಆಮಿಷಕ್ಕೆ ಬಲಿಯಾಗದಿರಿ


  ಮಂಡ್ಯ: ಮತದಾರರು ಯಾವುದೋ ಆಮಿಷಕ್ಕೆ ಬಲಿಯಾಗಿ ಮತ ಚಲಾವಣೆ ಮಾಡಿದಾಗ ಪ್ರಜಾಪ್ರಭುತ್ವದಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಕೆ.ಯಾಲಕ್ಕಿಗೌಡ ಹೇಳಿದರು.

  ನಗರದ ಕೆ.ವಿ.ಶಂಕರಗೌಡ ಶಿಕ್ಷಣ ಮಹಾವಿದ್ಯಾಲಯದಿಂದ ಶುಕ್ರವಾರ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.ಜಾಗೃತ ಮತದಾರರು ಪ್ರಜಾಪ್ರಭುತ್ವದ ನೇತಾರರಿದ್ದಂತೆ. ಮತದಾರರು ಜಾಗೃತರಾದರಷ್ಟೇ ಅಲ್ಲಿ ಉತ್ತಮ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ ಎಂದರು.

  ಮುಂದಿನ 30 ವರ್ಷ ಯುವಜನರ ಕಾಲವಿದ್ದಂತೆ. ಈ ಹಿನ್ನೆಲೆಯಲ್ಲಿ ಯುವಜನರು ದೇಶದ ನೇತೃತ್ವ ವಹಿಸಿಕೊಂಡು ಪ್ರಜಾಪ್ರಭುತ್ವವನ್ನು ಇನ್ನಷ್ಟು ಗಟ್ಟಿಗೊಳಿಸಬೇಕಾಗಿದೆ. ಅದಕ್ಕಾಗಿ ಏನೆಲ್ಲಾ ಪ್ರಯತ್ನಗಳನ್ನು ಮಾಡಬೇಕೋ, ಅದೆಲ್ಲವನ್ನೂ ಮಾಡಬೇಕು ಎಂದರು.
  ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಹೊನ್ನಪ್ಪ, ಪ್ರಾಂಶುಪಾಲ ಡಾ.ಕೆ.ಚನ್ನಕೃಷ್ಣಯ್ಯ, ಕಾಲೇಜು ಉಪನ್ಯಾಸಕರು ಮತ್ತು ಸಿಬ್ಬಂದಿ ಹಾಜರಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಜಾಗೃತಿ ಜಾಥಾ ನಡೆಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಸಿನಿಮಾ

  Latest Posts