More

    ಮೇಲಧಿಕಾರಿ ಕಿರುಕುಳಕ್ಕೆ ಬೇಸತ್ತು ಮಂಡ್ಯ ವೈದ್ಯ ಬೆಂಗಳೂರಲ್ಲಿ ಸಾವಿಗೆ ಶರಣು

    ಬೆಂಗಳೂರು: ಮಂಡ್ಯ ಜಿಲ್ಲಾ ಆರೋಗ್ಯ ಅಧಿಕಾರಿ(ಡಿಎಚ್‌ಒ) ಕಿರುಕುಳದಿಂದ ಬೇಸತ್ತ ವೈದ್ಯರೊಬ್ಬರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಇದನ್ನೂ ಓದಿ: ‘ಬೆಂಗಳೂರು ಕಂಬಳ’: ಸಂಘಟಕರು ಪಾವತಿಸಿದ ಒಟ್ಟು ದಂಡದ ಮೊತ್ತಯಿಷ್ಟು!
    ನಟರಾಜ್ ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಇವರು ಮಂಡ್ಯ ಆರೋಗ್ಯ ಇಲಾಖೆಯ ವೆಲ್‌ಫೇರ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಶನಿವಾರ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಹೃದಯಾಘಾತಕ್ಕೊಳಗಾದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಟರಾಜ್ ರಜೆಯಲ್ಲಿದ್ದರು. ರಜೆ ಮುಗಿದ ಹಿನ್ನೆಲೆಯಲ್ಲಿ ನಟರಾಜ್​ ಶನಿವಾರ ಮಂಡ್ಯಗೆ ತೆರಳಿ ರಿಪೋರ್ಟ್ ಮಾಡಿಕೊಳ್ಳಬೇಕಿತ್ತು. ಆದರೆ ಮಂಡ್ಯ ಡಿಹೆಚ್‌ಒ ಇವರಿಗೆ ರಿಪೋರ್ಟ್ ಮಾಡಿಕೊಳ್ಳದಂತೆ ಸೂಚನೆ ನೀಡಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.

    ಬೆಟ್ಟಸ್ವಾಮಿ ಎಂಬ ಅಧಿಕಾರಿಯನ್ನು ಪಾಂಡವಪುರ ಟಿಎಚ್‌ಒ ಆಗಿ ವರ್ಗಾವಣೆ ಮಾಡಲಾಗಿತ್ತು. ಆದರೆ ಬೆಟ್ಟಸ್ವಾಮಿ ಪಾಂಡವಪುರದಲ್ಲಿ ರಿಪೋರ್ಟ್ ಮಾಡಿಕೊಂಡಿರಲಿಲ್ಲ. ಡಿಎಚ್‌ಒ ಬೆಟ್ಟಸ್ವಾಮಿ ಪರವಾಗಿ ಇದ್ದರು. ತನ್ನನ್ನು ಕಡೆಗಣಿಸದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

    900 ಭ್ರೂಣ ಹತ್ಯೆ ಆರೋಪಕ್ಕೆ ಅಂಜಿ ಮತ್ತೊಬ್ಬ ವೈದ್ಯ ಆತ್ಮಹತ್ಯೆ?: ಮೈಸೂರು ಜಿಲ್ಲೆ ಕೊಣಸೂರು ಸರ್ಕಾರಿ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಸತೀಶ್ ಕೊಡಗಿನ ಕುಶಾಲನಗರ ತಾಲೂಕಿನ ಆನೆಕಾಡು ರಾಷ್ಟ್ರೀಯ ಹೆದ್ದಾರಿ ಬದಿ ಶುಕ್ರವಾರ ನಿಂತಿದ್ದ ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದು, ಇತ್ತೀಚೆಗೆ ಬೆಳಕಿಗೆ ಬಂದ 900 ಭ್ರೂಣ ಹತ್ಯೆ ಪ್ರಕರಣದಲ್ಲಿ ಅವರ ಹೆಸರು ಸಹ ಕೇಳಿಬಂದಿದ್ದರಿಂದ ವಿಷಕಾರಿ ಇಂಜೆಕ್ಷನ್ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು.

    ಅಮೆರಿಕದ ಇಸ್ರೇಲ್ ರಾಯಭಾರಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡ ಪ್ಯಾಲೆಸ್ತೀನ್ ಬೆಂಬಲಿಗ ಮಹಿಳೆ; ಸ್ಥಿತಿ ಚಿಂತಾಜನಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts