Monday, 10th December 2018  

Vijayavani

ಆರ್​ಬಿಐ ಗವರ್ನರ್​ ಸ್ಥಾನಕ್ಕೆ ಊರ್ಜಿತ್​ ಪಟೇಲ್​ ರಾಜೀನಾಮೆ- ವಿಜಯ ಮಲ್ಯ ಗಡಿಪಾರಿಗೆ ಯುಕೆ ನ್ಯಾಯಾಲಯ ಆದೇಶ        ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ -ಮೊದಲ ದಿನ ಕಲಾಪದಲ್ಲಿ ಅಗಲಿದ ಗಣ್ಯರಿಗೆ ಸಂತಾಪ -ಮೈತ್ರಿ ಸರ್ಕಾರ ವಿರುದ್ಧ ಬಿಜೆಪಿ ಗುಡುಗು        ಸರ್ಕಾರದ ವಿರುದ್ದ ರೈತರ ಹೋರಾಟ -ದೀಡ್ ದಂಡ ನಮಸ್ಕಾರ, ಬಾರುಕೋಲು ಚಳುವಳಿ -ಪೀಪಿ ಊದಿ ನಾಯಕರನ್ನು ಎಚ್ಚರಿಸಿದ ರೈತರು        ಚಿಕ್ಕಬಳ್ಳಾಪುರದಲ್ಲಿ ಒತ್ತುವರಿ ಅರಣ್ಯ ಭೂಮಿ ತೆರವು -ಜೆಸಿಬಿ ಮುಂದೆ ಬಿದ್ದು ಗೋಳಾಡಿದ ರೈತರು -ಬಿಗಿ ಪೊಲೀಸ್ ಭದ್ರತೆಯಲ್ಲಿ ಕಾರ್ಯಾಚರಣೆ        940 ದಿನಗಳ ನಿರಂತರ ವಿದ್ಯುತ್ ಉತ್ಪಾದನೆ -ಕೈಗಾ ಅಣುಸ್ಥಾವರದಿಂದ ವಿಶ್ವ ದಾಖಲೆ -ಸ್ಥಳೀಯರ ವಿರೋಧದ ನಡುವೆಯೂ ಸಾಧನೆ        ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ -ನಾಳೆ ವಾರ್ಡ್ ಗೆ ಶಿಫ್ಟ್ ಸಾಧ್ಯತೆ -ಅಲ್ಪಸಂಖ್ಯಾತ ವೈದ್ಯರ ಚಿಕಿತ್ಸೆ ಅಂತ ಪ್ರಸ್ತಾಪಿಸಿದ್ದ ಡಿಕೆಶಿ ಕ್ಷಮೆ        ಮಂಡ್ಯದ ನವದಂಪತಿಗೆ ವಿಶೇಷ ಗಿಫ್ಟ್ -ದೇಸೀ ಹಸು ಉಡುಗೊರೆ ನೀಡಿದ ಗೆಳೆಯರು -ಕಾಮಧೇನು ನೋಡಿ ಮದುಮಕ್ಕಳ ಸಂತಸ       
Breaking News

ಸಾಲಬಾಧೆಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

Saturday, 22.09.2018, 11:34 AM       No Comments

ಮಂಡ್ಯ: “ನಮ್ಮೆಲ್ಲರ ಸಾವಿಗೆ ವ್ಯವಸಾಯವೇ ಕಾರಣ” ಎಂದು ಡೆತ್​ನೋಟ್​ ಬರೆದಿಟ್ಟು ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಡ್ಯದ ಪಾಂಡವಪುರ ತಾಲೂಕಿನ ಸುಂಕಾತೊಣ್ಣೂರು ಗ್ರಾಮದ ನಂದೀಶ್ (35) ಎಂಬಾತನ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದೆ. ನಂದೀಶ್ ಸೇರಿ ಪತ್ನಿ ಕೋಮಲಾ (28), ಚಂದನ್ (10), ಮನು (13) ಮೃತರು.

ಸುಮಾರು ಐದು ಲಕ್ಷ ಸಾಲ ಮಾಡಿದ್ದ ನಂದೀಶ್​ ಸಹಾಯ ಕೋರಿ ಎರಡು ಬಾರಿ ಜನತಾ ದರ್ಶನದಲ್ಲಿ ಸಿಎಂ ಭೇಟಿ ಮಾಡಿ ಮನವಿ ಸಲ್ಲಿಸಿದರು. ಆದರೆ ಯಾವುದೇ ಉಪಯೋಗ ಆಗದಿದ್ದಾಗ ಮನನೊಂದು ತಮ್ಮ ತೋಟದ ಮನೆಯಲ್ಲಿ ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾವೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top