More

    ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಮಂಡ್ಯ ರೈತನಿಂದ ವಿನೂತನ ಪ್ರತಿಭಟನೆ

    ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲಿ ಪ್ರತಿಭಟನೆಗಳು ಮುಂದುವರಿದಿದೆ. ರಾಜ್ಯ ಸರ್ಕಾರ ಮತ್ತು ತಮಿಳುನಾಡು ವಿರುದ್ಧ ರೈತರು ನಿರಂತರವಾಗಿ ಆಕ್ರೋಶ ಹೊರಹಾಕುತ್ತಿದ್ದು, ಇದೀಗ ರೈತರೊಬ್ಬರು ವಿನೂತನ ಪ್ರತಿಭಟನೆಯ ಮೂಲಕ ಗಮನ ಸೆಳೆದಿದ್ದಾರೆ.

    ಕಳೆದ ಒಂದು ತಿಂಗಳಿಗೂ ಅಧಿಕ ಸಮಯದಿಂದ ಕಾವೇರಿ ನೀರು ತಮಿಳುನಾಡಿಗೆ ಹರಿಯುತ್ತಿದೆ. ಇದರ ವಿರುದ್ಧ ಶಿವಕುಮಾರ್​ ಆರಾಧ್ಯ ಎಂಬ ರೈತ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ವಿನೂತನವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಜಮೀನಿನಲ್ಲಿ ಗುಂಡಿಯನ್ನು ತೋಡಿ ಶಿರ ಮಾತ್ರ ಕಾಣುವಂತೆ ಇಡೀ ಶರೀರವನ್ನು ಮಣ್ಣಿನಿಂದ ಮುಚ್ಚಿ ಪ್ರತಿಭಟನೆ ಮಾಡುತ್ತಿದ್ದಾರೆ.

    ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರನ್ನು ಜೀವಂತ ಸಮಾಧಿ ಮಾಡುತ್ತಿದೆ. ಇಷ್ಟು ದಿನ ವಿರೋಧಿ ಘೋಷಣೆ ಕೂಗುತ್ತಿದ್ದೆವು ಇನ್ನು ಅವರ ಪರವಾಗಿ ಘೋಷಣೆ ಕೂಗುತ್ತೇವೆ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್​ ಮತ್ತು ಕೃಷಿ ಸಚಿವ ಚಲುವರಾಯಸ್ವಾಮಿಗೆ ಧಿಕ್ಕಾರದ ಬದಲಿಗೆ ಜೈಕಾರ ಕೂಗುತ್ತಲೇ ರೈತ ಆಕ್ರೋಶ ಹೊರಹಾಕಿದರು.

    ಇದನ್ನೂ ಓದಿ: ಅರುಣಾಚಲ ಪ್ರದೇಶ, ಕಾಶ್ಮೀರ ಭಾರತದ ಭಾಗವಲ್ಲ ಎಂಬುದೇ ನ್ಯೂಸ್​ಕ್ಲಿಕ್ ಕಾರ್ಯಸೂಚಿ: ನಕ್ಷೆ ರಚನೆಗೂ ನಡೆದಿತ್ತು ಮಾತುಕತೆ

    ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸುವುದಿಲ್ಲ. ವರುಣನಾ ಕೃಪೆಯಿಂದ ಜಲಾಶಯ ತುಂಬುತ್ತಿದೆ. ರೈತರನ್ನು ಸಮಾಧಿ ಮಾಡುವುದನ್ನು ಬಿಟ್ಟು, ಇನ್ನಾದರೂ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸಲಿ ಎಂದು ರೈತ ಕೋರಿದ್ದಾರೆ.

    ತಮಿಳುನಾಡಿಗೆ ಪ್ರತಿನಿತ್ಯ ಮೂರು ಸಾವಿರ ಕ್ಯೂಸೆಕ್ ನೀರನ್ನು ಹರಿಸಲು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸೆಪ್ಟೆಂಬರ್ 26ರಂದು ನಡೆದ ಸಭೆಯಲ್ಲಿ CWRC ಶಿಫಾರಸು ಮಾಡಿತ್ತು. CWMA ಅಕ್ಟೋಬರ್ 15 ರವರೆಗೂ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸೆ. 29ರಂದು ಆದೇಶ ಹೊರಡಿಸಿದೆ.

    ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್; ಅ.15ರವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWMA ಆದೇಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts