

ಮಂಡ್ಯ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ಹೊನ್ನಪ್ಪ ಇಂದು (ಫೆ.15) ಕೊನೆಯುಸಿರೆಳೆದಿದ್ದಾರೆ.
ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದವರಾದ ಹೊನ್ನಪ್ಪ, 1998ರಲ್ಲಿ ಜೆಡಿಎಸ್ ನಿಂದ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನಪರಿಷತ್ಗೆ ಆಯ್ಕೆಯಾಗಿದ್ದರು. 1998 ರಿಂದ 2004ರ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.
ಬಿಜೆಪಿ ಜಿಲ್ಲಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೇಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹೊನ್ನಪ್ಪ ಇಂದು ಬೆಳಗಿನ ಜಾವ ಅಸುನೀಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಹುಟ್ಟೂರು ಇಂಡುವಾಳು ಗ್ರಾಮದಲ್ಲೆ ಅಂತ್ಯ ಸಂಸ್ಕಾರ ನಡೆಯಲಿದೆ. (ದಿಗ್ವಿಜಯ ನ್ಯೂಸ್)