More

    ನಾಪತ್ತೆಯಾಗಿದ್ದ ಸೋಂಕಿತ ಪತ್ತೆ

    ನಿಟ್ಟುಸಿರು ಬಿಟ್ಟ ಕರಡಕೆರೆ ಗ್ರಾಮಸ್ಥರು

    ಕೆ.ಎಂ.ದೊಡ್ಡಿ: ಸಮೀಪದ ಕರಡಕೆರೆ ಗ್ರಾಮದಲ್ಲಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ ಕರೊನಾ ಸೋಂಕಿತ ವ್ಯಕ್ತಿ ಮಂಗಳವಾರ ಪತ್ತೆಯಾಗಿದ್ದು, ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.
    ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಾರ್ಯದರ್ಶಿ ಹಾಗೂ ಕರಡಕೆರೆ ಗ್ರಾಮದ ವ್ಯಕ್ತಿಯ ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ನಂತರ ಕರೊನಾ ಪಾಸಿಟಿವ್ ಬಂದಿತ್ತು. ಮಾಹಿತಿ ತಿಳಿದ ತಕ್ಷಣ ಆತ ಮನೆಗೆ ಬೀಗ ಹಾಕಿಕೊಂಡು ಪತ್ನಿಯೊಂದಿಗೆ ನಾಪತ್ತೆಯಾಗಿದ್ದ. ನಂತರ ಪೊಲೀಸರು ಹುಡುಕಾಟ ನಡೆಸಿ, ಮದ್ದೂರಿನ ಕೆ.ಗುರುಶಾಂತಪ್ಪ ಆಸ್ಪತ್ರೆ ಬಳಿ ಮಂಗಳವಾರ ಪತ್ತೆ ಹಚ್ಚಿದ್ದಾರೆ. ಬಳಿಕ ತುರ್ತು ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದರು. ಇದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
    ಸೀಲ್‌ಡೌನ್: ಕರಡಕೆರೆ ಗ್ರಾಮವನ್ನು ಸಬ್ ಇನ್ಸ್‌ಪೆಕ್ಟರ್ ಶೇಷಾದ್ರಿಕುಮಾರ್ ನೇತೃತ್ವದಲ್ಲಿ ಸೀಲ್‌ಡೌನ್ ಮಾಡಲಾಗಿದೆ. ಸೋಂಕಿತನ ಪತ್ನಿಯನ್ನು ಹಾಸ್ಟೆಲ್‌ನಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಈತನ ಪ್ರಥಮ ಸಂರ್ಪಕದಲ್ಲಿದ್ದ 22 ಜನರನ್ನು ಹೋಂ ಕ್ವಾರೆಂಟೈನ್ ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts