More

    ಮಧ್ಯವರ್ತಿಗಳ ನೆರವು ಇಲ್ಲದೆ ಸೌಲಭ್ಯ ಪಡೆಯಿರಿ

    ಕೆ.ಎಂ.ದೊಡ್ಡಿ: ಕೃಷಿ ಇಲಾಖೆಯಿಂದ ಸಿಗುವ ಸೌಲಭ್ಯವನ್ನು ಮಧ್ಯವರ್ತಿಗಳ ನೆರವಿಲ್ಲದೆ ರೈತರು ನೇರವಾಗಿ ಪಡೆಯಿರಿ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.


    ಮೆಳಹಳ್ಳಿ ಬಳಿಯ ಹುತಾತ್ಮ ಯೋಧ ಎಚ್.ಗುರು ಸ್ಮಾರಕದ ಬಳಿ 2 ಕೋಟಿ ರೂ. ವೆಚ್ಚದ ರೈತ ಸಂಪರ್ಕ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ರೈತರಿಗೆ ಕಾಂಗ್ರೆಸ್ ಸರ್ಕಾರ ಬೆನ್ನೆಲುಬಾಗಿ ನಿಂತಿದ್ದು ಕೃಷಿ ಇಲಾಖೆಯ ಸೌಲಭ್ಯಗಳನ್ನು ಪಡೆಯಲು ಸಲಹೆ ನೀಡಿದರು.


    ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಾಗ ನೀಡಿದ್ದ ಭರವಸೆಯಂತೆ ಜನರಿಗೆ ಗ್ಯಾರಂಟಿಗಳನ್ನು ನೀಡುತಿದ್ದು, ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳು ನಿಲ್ಲುತ್ತವೆ ಎಂದು ಪ್ರತಿಪಕ್ಷಗಳು ಅಪಪ್ರಚಾರ ಮಾಡುತ್ತಿದ್ದು, ಇದಕ್ಕೆ ಜನರು ಕಿವಿಗೊಡಬೇಡಿ ಎಂದು ಸಲಹೆ ನೀಡಿದರು.


    ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜನಪರ ಆಡಳಿತ ನೀಡುತ್ತಿದ್ದು, ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ 290 ಕೋಟಿ ರೂ. ಅನುದಾನ ತಂದು ರಸ್ತೆ, ಕೆಮ್ಮಣ್ಣು ಕಾಲುವೆ, ಸರ್ಕಾರಿ ಶಾಲೆ, ಆಸ್ಪತ್ರೆ, ಪಶುಚಿಕಿತ್ಸಾಲಯಗಳು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳು ಮಾಡುತಿದ್ದು, ಇನ್ನು ಹೆಚ್ಚಿನ ಅಭಿವೃದ್ಧಿಗೆ ಪಕ್ಷಾತೀತವಾಗಿ ನನ್ನ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.


    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎ.ಎಸ್.ರಾಜೀವ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಮೇಶ್, ಕೃಷಿ ಅಧಿಕಾರಿ ಭವಾನಿ, ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಕೆ.ಪಿ.ದೊಡ್ಡಿ ಶಿವರಾಮು, ಗ್ರಾ.ಪಂ. ಅಧ್ಯಕ್ಷೆ ಕೌಸಲ್ಯಾ ಅರ್ಕೇಶ್, ಸದಸ್ಯರಾದ ಕೆ.ಟಿ.ಶ್ರೀನಿವಾಸ್, ಪುಟ್ಟರಾಮು, ವಕ್ರತುಂಡ ವೆಂಕಟೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಟ್ಟನಹಳ್ಳಿ ಶಿವಲಿಂಗೇಗೌಡ, ಮುಖಂಡರಾದ ಮೆಣಸಗೆರೆ ಪ್ರಕಾಶ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts