More

    ಭೂ ಸ್ವಾಧೀನ ಪ್ರಕ್ರಿಯೆ ನಿಲ್ಲಿಸಿ

    ಮಂಡ್ಯ: ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿ ವ್ಯಾಪ್ತಿಯಲ್ಲಿ ಕೆಐಡಿಎಬಿ ವತಿಯಿಂದ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದು, ಕೂಡಲೇ ಈ ಪ್ರಕ್ರಿಯೆಯನ್ನು ನಿಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ಆದೇಶ ನೀಡಬೇಕೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಅವರಲ್ಲಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಮಾಡಿದ್ದಾರೆ.

    ಈ ಸಂಬಂಧವಾಗಿ ವಿಧಾನಸೌಧದಲ್ಲಿ ಶನಿವಾರ ಸಚಿವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಅವರು, ಕಾಳಿಂಗನಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 400-500 ಎಕರೆ ಹಾಗೂ ಇತ್ತೀಚೆಗೆ ಹಟ್ಟ- ಬಿಳಿಗುಂದ – ಬೀಚನಹಳ್ಳಿ – ಗರುಡನಹಳ್ಳಿ ಭಾಗದಲ್ಲಿ 400 ರಿಂದ 800 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿಸಿದರು.

    ನಾಗಮಂಗಲ ತಾಲೂಕಿನ ಜನರು ವ್ಯವಸಾಯ ಮಾಡಲು ಹಾಗೂ ಜೀವನ ಸಾಗಿಸಲು ಯಾವುದೇ ಹೆಚ್ಚುವರಿ ಜಮೀನು ಇಲ್ಲದೆ ಕಂಗಾಲಾಗಿದ್ದಾರೆ. ಆದ್ದರಿಂದ ಜಮೀನುಗಳನ್ನು ಸ್ವಾಧೀನ ಪ್ರಕ್ರಿಯೆಯಿಂದ ತಕ್ಷಣವೇ ಕೈ ಬಿಡಲು ಆದೇಶಿಸಬೇಕೆಂದು ಸಚಿವರನ್ನು ಕೋರಿದರು. ಈ ಸಂದರ್ಭದಲ್ಲಿ ಜಮೀನಿನ ಮಾಲೀಕರು ಇದ್ದರು.

    ಭೂ ಸ್ವಾಧೀನ ಪ್ರಕ್ರಿಯೆ ನಿಲ್ಲಿಸುವಂತೆ ಒತ್ತಾಯಿಸಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಜಮೀನಿನ ಮಾಲೀಕರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್‌ಗೆ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts