ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಪ್ರಚಾರ ವೇಳೆ ನಟ ದರ್ಶನ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶವಾಗಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಗ್ರಹಾರ ಬಾಚನಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ನಟ ದರ್ಶನ್ ಪ್ರಚಾರದಲ್ಲಿ ತೊಡಗಿದ್ದರು. ಪ್ರಚಾರದ ವಾಹನ ವೇಗವಾಗಿ ಮುಂದೆ ಸಾಗುತ್ತಿದ್ದಾಗ ದಿಢೀರ್ ವಿದ್ಯುತ್ ತಂತಿ ಸ್ಪರ್ಶಿಸಿದೆ. ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ ಕೂಡಲೇ ತುಂಡಾಗಿ ಬಿದ್ದಿದ್ದರಿಂದ ಅನಾಹುತ ತಪ್ಪಿದೆ.
ಪ್ರಚಾರದ ವೇಳೆ ನಟ ದರ್ಶನ್ ಇದ್ದ ಪ್ರಚಾರದ ವಾಹನಕ್ಕೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ಕೂದಲೆಳೆಯ ಅಂತರದಲ್ಲಿ ಭಾರೀ ಅನಾಹುತವೊಂದು ತಪ್ಪಿರುವುದು ಕಂಡುಬಂದಿದೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕಕ್ಕೆ ಒಳಗಾಗಿದ್ದ ನಟ ದರ್ಶನ್, ಬಳಿಕ ಚುನಾವಣಾ ಪ್ರಚಾರ ಮೊಟಕುಗೊಳಿಸಿ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ನಿದ್ದೆ ಬರ್ತಿಲ್ಲ, ಅವನು ಇದ್ದಿದ್ರೆ ನಾನು ತಬ್ಬಿಕೊಂಡು ಮಲಗುತ್ತೇನೆ; ಎಲ್ಲಿದ್ರು ಬೇಗಾ ಬಾ..ಎಂದ ನಟಿ
12 ಪ್ರಯತ್ನ, 7 ಬಾರಿ ಪರೀಕ್ಷೆ, 5 ಸಂದರ್ಶನ ಬಳಿಕವೂ ಕ್ಲಿಯರ್ ಆಗದ UPSC; ಸೋತವರಿಗೆ ಸ್ಫೂರ್ತಿಯಾದ ಕಥೆ ಇದು…..