ಲೋಕಸಭೆ ಟಿಕೆಟ್​ಗಾಗಿ ಮಂಡ್ಯ ಜಿಲ್ಲಾ ಜೆಡಿಎಸ್​ನಲ್ಲಿ ಭುಗಿಲೆದ್ದ ಭಿನ್ನಮತ

ಮಂಡ್ಯ: ಮಂಡ್ಯ ಲೋಕಸಭೆ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಜೆಡಿಎಸ್​ ಟಿಕೆಟ್​ಗಾಗಿ ಆಕಾಂಕ್ಷಿಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಜಿಲ್ಲಾ ಜೆಡಿಎಸ್​ ನಾಯಕರ ನಡುವೆ ಭಿನ್ನಮತ ಭುಗಿಲೆದ್ದಿದೆ.

ಶಿವರಾಮೇಗೌಡ, ಲಕ್ಷ್ಮೀ ಅಶ್ವಿನ್‌ಗೌಡ, ಮತ್ತು ಡಿ.ಸಿ. ತಮ್ಮಣ್ಣ ಪುತ್ರ ಸಂತೋಷ್​ ಅವರ ನಡುವೆ ಟಿಕೆಟ್​ಗಾಗಿ ಪೈಪೋಟಿ ಏರ್ಪಟ್ಟಿದೆ. ಇದರ ನಡುವೆಯೇ ಸಾಮಾಜಿಕ ಜಾಲತಾಣಗಳಲ್ಲಿ ಶಿವರಾಮೇಗೌಡರಿಗೆ ಟಿಕೆಟ್​ ನೀಡಬೇಕು ಎಂದು ಅವರ ಬೆಂಬಲಿಗರು ಮನವಿ ಮಾಡುತ್ತಿದ್ದಾರೆ.

ಶಿವರಾಮೇಗೌಡರು ಪಕ್ಷ ಸಂಘಟನೆಗಾಗಿ ಶ್ರಮಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಅವರು ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್​ ನೀಡಿ, ಲಕ್ಷ್ಮೀ ಅಶ್ವಿನ್​ ಗೌಡ ಅವರಿಗೆ ಟಿಕೆಟ್​ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಕಾರ್ಯಕರ್ತರ ಒತ್ತಡದಿಂದಾಗಿ ಜೆಡಿಎಸ್​ ವರಿಷ್ಠರು ಕಂಗಾಲಾಗಿದ್ದು, ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಗೊಂದಲ ಇನ್ನಷ್ಟು ಹೆಚ್ಚಿದೆ.