ಮಂಡ್ಯ ಲೋಕಸಭೆಗೆ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಬೇಕು: ಜೆಡಿಎಸ್​ ಮುಖಂಡರ ಒತ್ತಾಯ

ಮಂಡ್ಯ: ಮುಂಬರುವ ಲೋಕಸಭಾ ಚುನಾವಣೆಗೆ ಮಂಡ್ಯದಿಂದ ಅಭ್ಯರ್ಥಿಯನ್ನಾಗಿ ನಿಖಿಲ್​ ಕುಮಾರಸ್ವಾಮಿ ಅವರನ್ನು ಕಣಕ್ಕೆ ಇಳಿಸಬೇಕೆಂದು ಜಿಲ್ಲಾ ಜೆಡಿಎಸ್​ ಮುಖಂಡರು ಒತ್ತಾಯಿಸಿದ್ದಾರೆ.

ಜೆಡಿಎಸ್​ ಜಿಲ್ಲಾಧ್ಯಕ್ಷೆ ನಾಗರತ್ನ ಸ್ವಾಮಿ ಹಾಗೂ ಉಪಾಧ್ಯಕ್ಷೆ ಗಾಯತ್ರಿ ಅವರು ಗುರುವಾರ ಜಂಟಿ ಸುದ್ದಿಗೋಷ್ಠಿ ನಡೆಸಿ, ಮಂಡ್ಯ ಜಿಲ್ಲೆಯ ಜತೆ ನಿಖಿಲ್ ನಿಕಟ ಸಂಪರ್ಕ ಹೊಂದಿದ್ದಾರೆ. ಜಿಲ್ಲೆಯಾದ್ಯಂತ ನಿಖಿಲ್​ ಈಗಾಗಲೇ ಪ್ರವಾಸ ಮಾಡಿದ್ದಾರೆ. ಅವರನ್ನೇ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿರುವುದಾಗಿ ತಿಳಿಸಿದರು.

ಈಗಾಗಲೇ ಜೆಡಿಎಸ್​ ವರಿಷ್ಠ ಎಚ್​.ಡಿ.ದೇವೇಗೌಡ, ಮುಖ್ಯಮಂತ್ರಿ ಎಚ್​.ಡಿ.ಕುಮಾರಸ್ವಾಮಿ ಹಾಗೂ ಪಕ್ಷದ​ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *