ಸುಮಲತಾ ಗೆಲುವು ಸಾಧಿಸಿದ್ದಕ್ಕೆ ಅನ್ನದಾಸೋಹ

ಮದ್ದೂರು: ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಸುಮಲತಾ ಅಂಬರೀಷ್ ಅವರು ಗೆಲುವು ಸಾಧಿಸಿದ್ದರಿಂದ ಕಬ್ಬಾರೆ ಹಾಗೂ ಎಲೆದೊಡ್ಡಿ ಗ್ರಾಮಸ್ಥರು ಹಾಗೂ ಕಾಂಗ್ರೆಸ್ ಮುಖಂಡರು ಭಾನುವಾರ ಶ್ರೀ ಕಾಲಭೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮಾಡಿಸಿ ಅನ್ನಸಂತರ್ಪಣೆ ನೆರವೇರಿಸಿದರು.

ಗೆಲುವು ಸಾಧಿಸಲಿ ಎಂದು ಹರಕೆ ಹೊತ್ತಿದ್ದ ಹಿನ್ನೆಲೆಯಲ್ಲಿ ಶ್ರೀ ಕಾಲಭೈರವೇಶ್ವರ ದೇಗುದಲ್ಲಿ ಹೋಮ, ಹವನ, ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು. ನೂರಾರು ಭಕ್ತರಿಗೆ ಅನ್ನ ದಾಸೋಹ ಮಾಡಲಾಯಿತು.

 

Leave a Reply

Your email address will not be published. Required fields are marked *