ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆಗೆ ಶರಣು

Sicide
Published on

ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಳವಳ್ಳಿಯಲ್ಲಿ ನಡೆದಿದೆ.

ಮೇ 11ರಂದು ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ನೇಣಿಗೆ ಶರಣಾದರೆ, ಜೂನ್ 4ರಂದು ಇತಿಹಾಸ ಉಪನ್ಯಾಸಕ ಸುರೇಶ್ (29) ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರು ಅತಿಥಿ ಉಪನ್ಯಾಸಕರಾಗಿ ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದರು. ಇದನ್ನೂ ಓದಿ: ಉಡುಪಿಯಲ್ಲಿ ಲವ್​ ಜಿಹಾದ್​? ಮುಸ್ಲಿಂ ಯುವಕನ ಬಲೆಗೆ ಸಿಲುಕಿದಳೇ 18ರ ಯುವತಿ…

ಮಾನಸಿಕ‌ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಅರ್ಹತೆ ಇದ್ದರೂ ಸರ್ಕಾರಿ ಕೆಲಸ ಸಿಕ್ಕಿಲ್ಲ ಎಂಬ ಜಿಗುಪ್ಸೆ ಹಾಗೂ ಲಾಕ್‌ಡೌನ್‌ನಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಖಿನ್ನತೆಗೆ ಒಳಗಾಗಿದ್ದರು ಎಂಬ ಮಾತು ಆಪ್ತವಲಯದಲ್ಲಿ ಕೇಳಿಬಂದಿದೆ. ಮಳವಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net