More

    ಅಧಿಕಾರಿಗಳು ಕೆಲಸ ಮಾಡದಿದ್ದರೆ ಕ್ರಿಮಿನಲ್ ಮೊಕದ್ದಮೆ

    ಮದ್ದೂರು: ಕೋವಿಡ್ ಸಂಬಂಧ ನಿಯೋಜನೆ ಮಾಡುವ ಸರ್ಕಾರಿ ಅಧಿಕಾರಿಗಳು ಸಮರ್ಪಕವಾಗಿ ಕೆಲಸ ಮಾಡಬೇಕು, ಇಲ್ಲದಿದ್ದರೆ ಅಂಥವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಸೀಲ್ದಾರ್ ವಿಜಯಕುಮಾರ್ ಎಚ್ಚರಿಕೆ ನೀಡಿದರು.
    ತಾಲೂಕು ಪಂಚಾಯಿತಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಕರೊನಾ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ತಾಲೂಕು ಆಡಳಿತ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಪಿಯುಸಿ ಹಾಗೂ ಪದವಿ ಉಪನ್ಯಾಸಕರನ್ನು ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗದಂತೆ ಸಂಬಂಧಿಸಿದ ಪ್ರಾಂಶುಪಾಲರು ಉಪನ್ಯಾಸಕರ ಮಾಹಿತಿ ನೀಡಬೇಕು ಎಂದು ತಿಳಿಸಿದರು.
    ಗ್ರಾಮಾಂತರ ಪ್ರದೇಶದಲ್ಲಿ ಪಿಡಿಒಗಳು ಕೇಂದ್ರ ಸ್ಥಾನದಲ್ಲಿ ಇರಬೇಕು. ನಿಮ್ಮ ವ್ಯಾಪ್ತಿಯಲ್ಲಿ ವಸತಿ ನಿಲಯ ಅಥವಾ ಸರ್ಕಾರಿ ಶಾಲೆಗಳಲ್ಲಿ ಕ್ವಾರಂಟೈನ್ ಮಾಡಿದರೆ, ಅದರ ಸಂಪೂರ್ಣ ಜವಾಬ್ದಾರಿಯನ್ನು ಪಿಡಿಒಗಳು ವಹಿಸಬೇಕು. ಈ ಮೂಲಕ ವಿದ್ಯುತ್, ಕುಡಿಯುವ ನೀರು, ಸ್ವಚ್ಛತೆ ಸೇರಿ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಯಾವುದೇ ಅಧಿಕಾರಿಗಳು ಫೋನ್ ತೆಗೆಯದೆ ಬೇಜವಾಬ್ದಾರಿತನ ಪ್ರದರ್ಶನ ಮಾಡಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
    ತಾಪಂ ಇಒ ಮುನಿರಾಜ, ತಾಲೂಕು ಆರೋಗ್ಯಾಧಿಕಾರಿ ಡಾ.ಆಶಾಲತಾ, ಸಿಪಿಐ ಕೆ.ಆರ್.ಪ್ರಸಾದ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts