ಬೆಂಗ್ಳೂರಿಂದ ಕೆ.ಎಂ ದೊಡ್ಡಿಗೆ ಬಂದು ದ್ವಿಚಕ್ರ ವಾಹನ ಸವಾರರಿಂದ ಹಣ ವಸೂಲಿ: ನಕಲಿ PSI ಅರೆಸ್ಟ್​!

Duplicate PSI
Published on

ಮಂಡ್ಯ: ಪೊಲೀಸ್​ ಸಬ್​ ಇನ್​ಸ್ಪೆಕ್ಟರ್​ ಸಮವಸ್ತ್ರ ಧರಿಸಿ ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸಪ್ಪನನ್ನು ಬಂಧಿಸಲಾಗಿದೆ.

ಬೆಂಗಳೂರಿನ ಗೊಟ್ಟಿಗೆರೆ ನಿವಾಸಿ ಸಂಜಯ್ ಬಂಧಿತ ಆರೋಪಿ. ಕೆ.ಎಂ. ದೊಡ್ಡಿಯ ಅಸಲಿ ಪೊಲೀಸರು ನಕಲಿ ಪೊಲೀಸ್​ನನ್ನು ಬಂಧಿಸಿದ್ದಾರೆ.

ಕೆ.ಎಂ.ದೊಡ್ಡಿ ಸುತ್ತಮುತ್ತ ದ್ವಿಚಕ್ರ ವಾಹನಗಳನ್ನು ತಡೆದು ತಪಾಸಣಾ ಕಾರ್ಯ ಮಾಡುವ ನೆಪದಲ್ಲಿ ಸಂಚಾರಿ ನಿಯಮ ಉಲ್ಲಂಘನೆಯಾಗಿದೆ ಎಂದು ವಾಹನ ಸವಾರರಿಂದ ಹಣ ವಸೂಲಿ ಮಾಡುತ್ತಿದ್ದ. ಈ ಬಗ್ಗೆ ಕೆ.ಎಂ.ದೊಡ್ಡಿ ಠಾಣೆಯ ಇನ್​ಸ್ಪೆಕ್ಟರ್​ ಆನಂದ್​ಗೆ ಸಾರ್ವಜನಿಕರು ದೂರು ನೀಡಿದ್ದರು.

ಮಾಹಿತಿ ಬೆನ್ನಲ್ಲೆ ತಕ್ಷಣ ಎಚ್ಚೆತ್ತ ರಿಯಲ್ ಪೊಲೀಸರು ಕಾರ್ಯಾಚರಣೆಗೆ ಇಳಿದು ಸಂಜಯ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಾನೊಬ್ಬ ನಕಲಿ ಪೊಲೀಸ್ ಎಂಬುದನ್ನು ಒಪ್ಪಿಕೊಂಡಿದ್ದಾನೆ. ಇದಾದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯ ಎಚ್ಚರಿಕೆ ನೀಡಿ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆ ಮಾಡಿದೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net