More

    ಅಂತಾರಾಷ್ಟ್ರೀಯ ಸಿಲ್ಕ್ ಮಾರುಕಟ್ಟೆ ಸ್ಥಾಪಿಸಲು ಚಿಂತನೆ

    ಮಂಡ್ಯ: ರೇಷ್ಮೆ ಉದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ರಾಮನಗರ-ಚನ್ನಪಟ್ಟಣ ಮಧ್ಯೆ ಅಂತಾರಾಷ್ಟ್ರೀಯ ಸಿಲ್ಕ್ ಮಾರುಕಟ್ಟೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ ಎಂದು ರೇಷ್ಮೆ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
    ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾನುವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ, ನೂತನ ಪದಾಧಿಕಾರಿಗಳ ಪದಗ್ರಹಣ, ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೇಷ್ಮೆ ಬೆಳೆಗಾರರು ತೊಂದರೆ ಅನುಭವಿಸುತ್ತಿರುವುದನ್ನು ಕಂಡು ರೇಷ್ಮೆಗೂ ಹೆಚ್ಚಿನ ಉತ್ತೇಜನ ನೀಡುವ ಸಲುವಾಗಿ ಯೋಜನೆ ರೂಪಿಸಲಾಗಿದೆ. ಮೈಸೂರು ರೇಷ್ಮೆ ಸೀರೆಗೆ ಹೆಚ್ಚಿನ ಬೇಡಿಕೆ ಇದೆ. ಆದ್ದರಿಂದ ಅಂತಾರಾಷ್ಟ್ರೀಯ ಮಾರುಕಟ್ಟೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದರು.
    ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಜಿಲ್ಲಾ ಎಸ್ಪಿ ಕೆ.ಪರಶುರಾಮ, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಉಪಾಧ್ಯಕ್ಷ ಮತ್ತೀಕೆರೆ ಜಯರಾಂ ಅಧ್ಯಕ್ಷತೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts