22.5 C
Bengaluru
Sunday, January 19, 2020

ನೀರು ಬಿಡದಿದ್ದರೆ ರಸ್ತೆ ಬಂದ್

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಮಂಡ್ಯ: ಕೆಆರ್‌ಎಸ್ ಹಾಗೂ ಹೇಮಾವತಿ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಬೆಳೆದು ನಿಂತ ಬೆಳೆಗೆ ತಕ್ಷಣ ನೀರು ಬಿಡುವಂತೆ ಒತ್ತಾಯಿಸಿ ಮುಂದಿನ ಹೋರಾಟದ ಬಗ್ಗೆ ನಿರ್ಧರಿಸುವ ಸಂಬಂಧ ಶನಿವಾರ ನಗರದ ಪ್ರವಾಸಿ ಮಂದಿರದಲ್ಲಿ ರೈತ ಸಂಘದ ಜಿಲ್ಲಾ ಮಟ್ಟದ ಸಭೆ ಆಯೋಜಿಸಲಾಗಿತ್ತು.

ಸಂಘದ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಜಿಲ್ಲೆಯಲ್ಲಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಂತೆ ಸುದೀರ್ಘ ಚರ್ಚೆ ನಡೆಸಲಾಯಿತು. ಜತೆಗೆ ಜುಲೈ 15ರಂದು ಜಿಲ್ಲಾಧಿಕಾರಿ ಭೇಟಿ ಮಾಡಿ ರೈತರು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಂತೆ ಮನವರಿಕೆ ಮಾಡಿಕೊಡುವ ಬಗ್ಗೆ ಮನವಿ ಸಲ್ಲಿಸಲು ನಿರ್ಧರಿಸಲಾಯಿತು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಬಳಿಕ ಮುಂದಿನ ಹೋರಾಟದ ರೂಪುರೇಷೆಗಳನ್ನು ಕೈಗೊಳ್ಳುವುದು. ಒಂದು ವೇಳೆ ನಾಲೆಗಳಲ್ಲಿ ನೀರು ಹರಿಸಿ ಬೆಳೆ ರಕ್ಷಣೆಗೆ ಮುಂದಾಗದಿದ್ದಲ್ಲಿ ಜನ-ಜಾನುವಾರುಗಳೊಂದಿಗೆ ಜಿಲ್ಲೆಯಲ್ಲಿ ಅನಿರ್ದಿಷ್ಟಾವಧಿ ರಸ್ತೆ ಬಂದ್ ಮಾಡಲಾಗುವುದು. ಮೈಶುಗರ್ ಹಾಗೂ ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಗಳ ವ್ಯಾಪ್ತಿಯಲ್ಲಿರುವ ಕಬ್ಬನ್ನು ಸಾಗಿಸಲು ಸಂಬಂಧಪಟ್ಟವರ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳತಕ್ಕದ್ದು ಎಂದು ಸರ್ಕಾರ ಮತ್ತು ಜಿಲ್ಲಾಧಿಕಾರಿಯನ್ನು ಒತ್ತಾಯಿಸುವ ಬಗ್ಗೆಯೂ ನಿರ್ಧರಿಸಲಾಯಿತು.

ಬೆಳಗಾವಿಯಲ್ಲಿ ಜುಲೈ 21ರಂದು ಆಯೋಜಿಸಿರುವ ಬೃಹತ್ ಸಮಾವೇಶಕ್ಕೆ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಕರೆದೊಯ್ಯುವ ಬಗ್ಗೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಯಿತು.

ಯುವಕರನ್ನು ಸೆಳೆಯೋಣ: ಜಿಲ್ಲೆಯಲ್ಲಿ ರೈತ ಸಂಘವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಯುವಕರನ್ನು ಸಂಘಟನೆಗೆ ಕರೆತಂದು ಅವರಿಗೆ ಸೂಕ್ತ ತಿಳಿವಳಿಕೆ ಮೂಡಿಸಲು ಅಧ್ಯಯನ ಶಿಬಿರ ಆಯೋಜಿಸಬೇಕು. ಇತ್ತೀಚಿನ ದಿನಗಳಲ್ಲಿ ರೈತ ಸಂಘಟನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬಾರದಿರುವುದನ್ನು ಗಂಭೀರವಾಗಿ ಪರಿಗಣಿಸಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲು ಕ್ರಮ ವಹಿಸುವುದು. ಹಿರಿಯರಷ್ಟೇ ರೈತ ಸಂಘವನ್ನು ಮುನ್ನಡೆಸಲು ಸಾಧ್ಯವಾಗದು. ಹಿರಿಯರೊಂದಿಗೆ ಯುವಕರು ಸೇರಿದಾಗ ಸಂಘಟನೆಗೆ ಬಲ ಬರುತ್ತದೆ. ಈ ಹಿನ್ನೆಲೆಯಲ್ಲಿ ಯುವಜನರನ್ನು ರೈತ ಸಂಘದಲ್ಲಿ ತೊಡಗಿಸಿಕೊಳ್ಳಬೇಕೆಂಬ ಅಭಿಪ್ರಾಯಕ್ಕೆ ಬೆಂಬಲ ನೀಡಲಾಯಿತು.

ಸಭೆಯಲ್ಲಿ ಮುಖಂಡರಾದ ದರ್ಶನ್ ಪುಟ್ಟಣ್ಣಯ್ಯ, ಬಿ.ಬೊಮ್ಮೇಗೌಡ, ಜಿ.ಎಸ್.ಲಿಂಗಪ್ಪಾಜಿ, ರಾಮಕೃಷ್ಣ, ಲತಾ ಶಂಕರ್ ಇತರರಿದ್ದರು.

 

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...