22.5 C
Bengaluru
Sunday, January 19, 2020

ನೀರು ಬಿಡದಿದ್ದರೆ ಕೆಆರ್‌ಎಸ್‌ಗೆ ಮುತ್ತಿಗೆ

Latest News

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಮಂಡ್ಯ: ಬೆಳೆಗಳಿಗೆ ನೀರು ಬಿಡುವ ಬಗ್ಗೆ ಸರ್ಕಾರ ಜೂ.28ರ ಬೆಳಗ್ಗೆ 11 ಗಂಟೆಯೊಳಗೆ ನಿರ್ಧಾರ ಪ್ರಕಟಿಸಬೇಕು. ತಪ್ಪಿದಲ್ಲಿ ಕೆಆರ್‌ಎಸ್‌ಗೆ ಮುತ್ತಿಗೆ ಹಾಕುತ್ತೇವೆ ಎಂದು ರೈತ ಸಂಘದ ನಾಯಕ ದರ್ಶನ್ ಪುಟ್ಟಣ್ಣಯ್ಯ ಎಚ್ಚರಿಸಿದರು.

ಕಾವೇರಿ ಭವನದ ಎದುರು ನಡೆಯುತ್ತಿರುವ ಅಹೋರಾತ್ರಿ ಧರಣಿಯಲ್ಲಿ ಗುರುವಾರ ಮಾತನಾಡಿದ ಅವರು, ನಮ್ಮ ವಿವಿಧ ಬೇಡಿಕೆ ಈಡೇರಿಕೆಗಾಗಿ 7 ದಿನಗಳಿಂದ ಧರಣಿ ನಡೆಸುತ್ತಿದ್ದೇವೆ. ಈತನಕ ನೀರು ಬಿಡುವ ಅಥವಾ ಪರ್ಯಾಯ ವ್ಯವಸ್ಥೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಬುಧವಾರ ರಾತ್ರಿ ಜಿಲ್ಲಾಧಿಕಾರಿ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆಗಮಿಸಿ ನೀರು ಬಿಡಲು ಸಾಧ್ಯವಿಲ್ಲ ಎಂದಿದ್ದಾರೆ. ಆದರೆ, ಪರ್ಯಾಯ ಏನೆಂದು ಹೇಳಿಲ್ಲ. ಹೀಗಾಗಿ ನಮ್ಮ ಬೆಳೆಗಳಿಗೆ ನಾವೇ ನೀರು ಬಿಟ್ಟುಕೊಳ್ಳುತ್ತೇವೆ. ಬೈಕ್ ಹಾಗೂ ವಿವಿಧ ವಾಹನಗಳ ಮೂಲಕ ಕೆಆರ್‌ಎಸ್‌ಗೆ ತೆರಳಲಿದ್ದೇವೆ ಎಂದರು.

ಜಿಲ್ಲೆಯಲ್ಲಿ ಸದ್ಯ 41 ಸಾವಿರ ಕುಟುಂಬಗಳು ಕಬ್ಬು ಹಾಕಿದ್ದು, ನೀರು ಬಿಡದೆ ಹೋದಲ್ಲಿ 1200 ಕೋಟಿ ರೂ. ಮೌಲ್ಯದ ಕಬ್ಬು ನಾಶವಾಗಲಿದೆ. ಈ ಕಬ್ಬಿನ ಆಧಾರದ ಮೇಲೆ 500 ಕೋಟಿ ರೂ. ಸಾಲ ತೆಗೆದುಕೊಂಡಿದ್ದಾರೆ. ಕಬ್ಬು ಉಳಿಸದಿದ್ದರೆ ಜಿಲ್ಲೆಯಲ್ಲಿ ಸಾಮೂಹಿಕ ಆತ್ಮಹತ್ಯೆಗಳು ನಡೆಯಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ರೈತರ ಸಮಸ್ಯೆ ಬಗೆಹರಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಧರಣಿ ಕುಳಿತು 7 ದಿನಗಳಾಗಿವೆ. ಈಗ ಬಂದು ನಿಮ್ಮ ಮನವಿ ಬಗ್ಗೆ ಸರ್ಕಾರಕ್ಕೆ ವರದಿ ನೀಡುತ್ತೇವೆ ಎಂದು ಹೇಳುತ್ತಾರೆ ಎಂದು ಕಿಡಿಕಾರಿದರು.

ಸುನೀತಾ ಪುಟ್ಟಣ್ಣಯ್ಯ, ಶಂಭೂನಹಳ್ಳಿ ಸುರೇಶ್, ರಘು, ಕಾಮಾಕ್ಷಮ್ಮ, ಹರೀಶ್, ಲತಾ ಶಂಕರ್, ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು, ಮಂಜುನಾಥ್ ಮೊದಲಾದವರು ಧರಣಿಯಲ್ಲಿದ್ದರು.

ಇಲ್ಲಿಂದ ಜಾಗ ಖಾಲಿ ಮಾಡಿ: ಬುಧವಾರ ರಾತ್ರಿ ಧರಣಿ ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮಂಜುಶ್ರೀ, ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್.ಎಲ್.ಪ್ರಸನ್ನ ಅವರಿಗೆ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ದರ್ಶನ್ ತರಾಟೆಗೆ ತೆಗೆದುಕೊಂಡರು.

ಧರಣಿನಿರತರನ್ನು ಜಿಲ್ಲಾಧಿಕಾರಿ, ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಮನವೊಲಿಸಲು ಮುಂದಾದರು. ಜಿಲ್ಲಾಧಿಕಾರಿ ಮಾತನಾಡಿ, ನಿಮ್ಮ ಸಮಸ್ಯೆ ಬಗ್ಗೆ ಸರ್ಕಾರದ ಗಮನಕ್ಕೆ ತರುತ್ತೇವೆ ಎಂದಾಗ, ಇದನ್ನು ಹೇಳಲು ಮಾತ್ರ ಇಲ್ಲಿಗೆ ಬಂದಿದ್ದೀರಾ? ರೈತರ ರಕ್ಷಣೆಗೆ ಪರ್ಯಾಯ ವ್ಯವಸ್ಥೆ ಏನು ಮಾಡಿಕೊಂಡಿದ್ದೀರಿ, ಕೇವಲ ವರದಿ ನೀಡುವುದಕ್ಕೆ ನೀವು ಅಧಿಕಾರಿಗಳೇ ಎಂದು ಕಿಡಿಕಾರಿದರು. ಧರಣಿ ಸ್ಥಳಕ್ಕೆ ಉಪಮುಖ್ಯಮಂತ್ರಿ ಆಗಮಿಸಿ ನಮ್ಮ ಜತೆ ಕೆಳಗೆ ಕುಳಿತು ಸಮಸ್ಯೆ ಕೇಳಿದರು. ನಿಮಗೆ ಕುರ್ಚಿ ವ್ಯವಸ್ಥೆ ಮಾಡಿದ್ದು ತಪ್ಪಾಯಿತು. ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ವಾಪಸ್ ಕಳಿಸಿದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...