25.1 C
Bangalore
Friday, December 6, 2019

ಭೂ ಸ್ವಾಧೀನ ಕಾಯ್ದೆ ತಿದ್ದುಪಡಿಗೆ ವಿರೋಧ

Latest News

ಸ್ಮಶಾನ ಸಿಟಿ ಆಗ್ತಿತ್ತು ಸ್ಮಾರ್ಟ್‌ಸಿಟಿ

ತುಮಕೂರು: ಸ್ಮಾರ್ಟ್‌ಸಿಟಿ ಕಾಮಗಾರಿಯ ಪೈಪ್‌ಗಳು ಸುಟ್ಟುಹೋದ ಸ್ಥಳಕ್ಕೆ ಈವರೆಗೆ ಒಬ್ಬ ಅಧಿಕಾರಿಯೂ ಬಂದು ಪರಿಶೀಲಿಸಿಲ್ಲ. ಏನಾದರೂ ಹೆಚ್ಚು ಕಡಿಮೆ ಆಗಿದ್ದರೆ ಸ್ಮಾರ್ಟ್‌ಸಿಟಿ ಸ್ಮಶಾನ ಸಿಟಿ ಆಗುತ್ತಿತ್ತು...

ತಿಪಟೂರು ತಾಲೂಕಿನಲ್ಲಿ ರಾಗಿ ಕಟಾವು ಯಂತ್ರಗಳ ಸದ್ದು!

ತಿಪಟೂರು: ತಾಲೂಕಿನಲ್ಲಿ ಬಿತ್ತನೆಯಾಗಿದ್ದ ರಾಗಿ ಬೆಳೆಯ ಪೈಕಿ ಶೇ.80 ಭಾಗ ಕೈ ಸೇರುವ ನಿರೀಕ್ಷೆ ಇರುವುದರಿಂದ ಕಡೆಗೂ ಅನ್ನದಾತನ ಆತಂಕ ದೂರವಾಗಿದೆ. ರಾಗಿ ಕಟಾವಿಗೆಂದೇ ಅತ್ಯಾಧುನಿಕ...

ತಾಪಂ ಸಾಮಾನ್ಯ ಸಭೇಲಿ ಕಳಪೆ ಶೂ, ಸಾಕ್ಸ್ ವಾಸನೆ!

ಮಧುಗಿರಿ: ತಾಲೂಕಿನಲ್ಲಿ ಕಳಪೆ ಕಾಮಗಾರಿಗಳು, ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ, ಗ್ರಾಮೀಣ ಭಾಗದಲ್ಲಿ ಸ್ವಚ್ಛತೆ ಕೊರತೆ, ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಸೇರಿ ಹಲವಾರು ವಿಷಯಗಳು...

ಹಲವು ನಿಗೂಢ ಅಪರಾಧ ಪ್ರಕರಣ ಪತ್ತೆ ಮಾಡಿದ್ದ ಪೊಲೀಸ್​ ಶ್ವಾನ ರೂಬಿ ಸಾವು

ರಾಯಚೂರು : ಅಪರಾಧಿಗಳ ಪತ್ತೆಗೆ ತರಬೇತಿ ಪಡೆದಿದ್ದ ರೂಬಿ ಹೆಸರಿನ ಪೊಲೀಸ್​ ಶ್ವಾನ ಮೃತಪಟ್ಟಿದೆ.ಪೊಲೀಸ್​ ಇಲಾಖೆಯಲ್ಲಿ 13 ವರ್ಷ 6 ತಿಂಗಳು ಸೇವೆ...

ಗ್ರಹಣವು ಅಚ್ಚರಿಗಳ ಸಂಗಮ

ದಾವಣಗೆರೆ: ಗ್ರಹಣವು ಅಚ್ಚರಿಗಳ ಸಂಗಮವಾಗಿದ್ದು ಅದರ ಬಗ್ಗೆ ತಿಳಿಯುವ ಕುತೂಹಲ ಬೆಳೆಸಿಕೊಳ್ಳಬೇಕು ಎಂದು ವಿಜ್ಞಾನ ಸಂವಹನಕಾರ ಪ್ರೊ.ಎಂ.ಆರ್. ನಾಗರಾಜು ಹೇಳಿದರು. ಡಿ. 26ರಂದು ಸಂಭವಿಸುವ ಕಂಕಣ ಸೂರ್ಯ...

ಮಂಡ್ಯ: ಕೇಂದ್ರ ಸರ್ಕಾರದ 2013ರ ಭೂ ಸ್ವಾಧೀನ ಕಾಯ್ದೆಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿ ಮಸೂದೆಯನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ನಗರದಲ್ಲಿ ಶನಿವಾರ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಮಾಯಿಸಿದ ಕಾರ್ಯಕರ್ತರು, ಕೆಲಕಾಲ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು.

ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದರ ವಿರುದ್ಧ ದೇಶಾದ್ಯಂತ ರೈತರು ಮತ್ತು ಜನಪರ ಸಂಘಟನೆಗಳು ಹೋರಾಟ ಮಾಡಿದ ಹಿನ್ನೆಲೆ 1894ರ ಭೂ ಸ್ವಾಧೀನ ಕಾಯ್ದೆಯನ್ನು ರದ್ದುಪಡಿಸಿ 2013ರಲ್ಲಿ ಹೊಸ ಕಾಯ್ದೆ ರೂಪಿಸಲಾಯಿತು. ಇದರಲ್ಲಿ ಒಂದಷ್ಟು ಸಮಾಧಾನಕರವಾದ ಅಂಶ ಒಳಗೊಂಡಿತ್ತು. ಆದರೆ, ಈ ಅಧಿನಿಯಮದ ಮೂಲ ಉದ್ದೇಶಕ್ಕೆ ವಿರುದ್ಧವಾಗಿ ಕೆಲ ತಿದ್ದುಪಡಿ ತರಲು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮುಂದಾದಾಗ ಅದರ ವಿರುದ್ಧವೂ ವಿರೋಧ ವ್ಯಕ್ತವಾಗಿತ್ತು. ಜತೆಗೆ 2 ಬಾರಿ ಮೇಲ್ಮನೆಯಲ್ಲಿ ಬಿಲ್ ಮಂಡನೆಯಾಗದ ಹಿನ್ನೆಲೆ ತಿದ್ದುಪಡಿ ಸಾಧ್ಯವಾಗಲಿಲ್ಲ ಎಂದು ಪ್ರತಿಭಟನಾಕಾರರು ವಿವರಿಸಿದರು.

ಆದರೆ, ಆಯಾ ರಾಜ್ಯ ಸರ್ಕಾರ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದ ಹಿನ್ನೆಲೆ ಕರ್ನಾಟಕ 2013ರ ಕಾಯ್ದೆಗೆ ಇತ್ತೀಚಿಗೆ ನಡೆದ ವಿಧಾನಸಭಾ ಅಧಿವೇಶನದಲ್ಲಿ ತಿದ್ದುಪಡಿ ಬಿಲ್ ಮಂಡಿಸಿ ಚರ್ಚೆ ಇಲ್ಲದೆ ಅಂಗೀಕಾರ ಪಡೆದು, ರಾಜ್ಯಪಾಲರ ಸಹಿಗೆ ಕಳುಹಿಸಿದೆ. ಈ ತಿದ್ದುಪಡಿ ಬಿಲ್ 2013ರ ಕಾಯ್ದೆಯ ಮೂಲ ಉದ್ದೇಶಕ್ಕೆ ವ್ಯತಿರಿಕ್ತವಾಗಿದೆ. ಅಲ್ಲದೆ, ಇದು ಬ್ರಿಟಿಷರು ರೂಪಿಸಿದ್ದ ಕಾಯ್ದೆ ಮುಂದುವರಿಸುವ ಭಾಗವಾಗಿದ್ದು, ಬಂಡವಾಳಶಾಹಿಗಳ ಪರವಾಗಿದೆ. ಆದ್ದರಿಂದ, ಕೂಡಲೇ ತಿದ್ದುಪಡಿ ಕಾಯ್ದೆ ಆದೇಶ ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ಬಿ.ಬೊಮ್ಮೇಗೌಡ, ಚಂದ್ರು ಶಿವಳ್ಳಿ, ಕೆ.ನಾಗಣ್ಣ, ಶ್ರೀನಿವಾಸ್, ಲತಾ ಶಂಕರ್ ಇತರರಿದ್ದರು.


Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...