More

    ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

    ಶ್ರೀರಂಗಪಟ್ಟಣ: ಕನ್ನಂಬಾಡಿ ಅಣೆಕಟ್ಟೆಯಿಂದ ತಕ್ಷಣ ವಿ.ಸಿ, ಸಿಡಿಎಸ್, ವಿರಿಜಾ ಹಾಗೂ ಬಂಗಾರದೊಡ್ಡಿ ನಾಲೆಗಳಿಗೆ ನೀರು ಹರಿಸಿ ಕಾವೇರಿ ಕೊಳ್ಳದ ರೈತರ ಕೃಷಿ ಬೆಳೆಗಳನ್ನು ರಕ್ಷಣೆ ಮಾಡಲೇಬೇಕು ಎಂದು ಆಗ್ರಹಿಸಿ ಭೂಮಿ ತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು.


    ಪಟ್ಟಣದ ತಾಲೂಕು ಕಚೇರಿ ಮುಂಭಾಗ ಜಮಾವಣೆಗೊಂಡ ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರ, ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿ ಬಾಯಿ ಬಡಿದುಕೊಂಡು ಧರಣಿ ನಡೆಸಿದರು.


    ರೈತ ನಾಯಕ ಕೆ.ಎಸ್.ನಂಜುಂಡೇಗೌಡ ಮಾತನಾಡಿ, ಮೈಸೂರು ಮಹಾರಾಜರು ಕನ್ನಂಬಾಡಿ ಅಣೆಕಟ್ಟು ನಿರ್ಮಾಣ ಮಾಡಿರುವುದು ಮಂಡ್ಯ ಸೇರಿದಂತೆ ಕಾವೇರಿ ಕೊಳ್ಳದ ರೈತಾಪಿ ಜನರ ಕೃಷಿ ಹಾಗೂ ಜನ-ಜಾನುವಾರುಗಳ ಬಳಕೆಗೆ. ಬದಲಾದ ವ್ಯವಸ್ಥೆಯಲ್ಲಿ ಸರ್ಕಾರಗಳು ಕುಡಿಯುವ ನೀರಿಗೆ ಹೆಚ್ಚು ಮಾನ್ಯತೆ ನೀಡಿದೆ. ಆದರೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಬೆಂಗಳೂರು ಜನರ ಕುಡಿಯುವ ನೀರಿನ ಹೆಸರಲ್ಲಿ ನದಿ ಮೂಲಕ ತಮಿಳುನಾಡಿಗೆ ನೀರು ಹರಿಸಿ ಅನ್ಯರಾಜ್ಯದ ಹಿತಕಾಯುತ್ತಿದ್ದಾರೆ ಎಂದು ಆಪಾದಿಸಿದರು.


    ನೀರಿನ ಲಭ್ಯತೆ ಹಾಗೂ ಅಂರ್ತಜಲ ಮಟ್ಟ ಕುಸಿತದಿಂದ ರೈತರು ಸಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ತಕ್ಷಣ 1 ವಾರ ಕಾಲ ಎಲ್ಲ ನಾಲೆಗಳಿಗೆ ನೀರು ಹರಿಸಲೇಬೇಕು. ಇಲ್ಲವಾದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಿ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಕೆಯೊಂದಿಗೆ ಗಡುವು ನೀಡಿದರು.


    ಭೂಮಿ ತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ.ಸಿ.ಕೃಷ್ಣೇಗೌಡ, ಉಪಾಧ್ಯಕ್ಷರಾದ ಜಗದೀಶ್, ಜಯರಾಮೇಗೌಡ, ಪ್ರಧಾನ ಕಾರ್ಯದರ್ಶಿ ಎಂ.ವಿ.ಕೃಷ್ಣ, ಖಜಾಂಚಿ ಪುಟ್ಟಮಾದು, ಸಂಚಾಲಕ ಮಂಜುನಾಥ್, ರಾಮಚಂದ್ರು, ಸಂಘಟನಾ ಕಾರ್ಯದರ್ಶಿ ಮಹಾಲಿಂಗು, ಪಾಲಹಳ್ಳಿ ರಾಮಚಂದ್ರು, ಕೆಂಪೇಗೌಡ, ಪುರುಷೋತ್ತಮ, ಸುರೇಶ್, ಚಂದಗಾಲು ರಾಮಕೃಷ್ಣ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts