Tuesday, 20th November 2018  

Vijayavani

ಕಬ್ಬು ಬೆಳಗಾರರ ಜತೆ ಸಿಎಂ ಸಭೆ - ವಿಧಾನಸೌಧಕ್ಕೆ ಆಗಮಿಸಿದ ರೈತ ಮುಖಂಡರು - ಕಬ್ಬಿನ ಬಾಕಿ ಹಣ ಕೊಡಿಸ್ತಾರಾ ಎಚ್‌ಡಿಕೆ?        ಉ-ಕ ರೈತರ ಹೋರಾಟಕ್ಕೆ ಜಾತಿ ಲೇಪನ - ನಾಲಾಯಕ್ ಅನ್ನೋದು ಕೆಟ್ಟ ಪದ ಅಲ್ಲ - ಸಿಎಂ ವಿರುದ್ಧ ಮತ್ತೆ ಗುಡುಗಿದ ಯಡಿಯೂರಪ್ಪ        ಸಿಂಪಲ್ ಮ್ಯಾರೇಜ್ ಆಗೋರಿಗೆ ಶಾಕ್‌- ಮುಜರಾಯಿ ದೇವಸ್ಥಾನದಲ್ಲಿ ಮದುವೆಗೆ ಬ್ರೇಕ್‌ - ಅರ್ಚಕರ ಮನವಿಗೆ ಇಲಾಖೆ ನಿರ್ಧಾರ        ದಿಗ್ಗಜರಿಂದಲೇ ಬಿಬಿಎಂಪಿಗೆ ಬಾಕಿ - ಜಾರ್ಜ್‌, ಹ್ಯಾರೀಸ್‌, ಕುಪೇಂದ್ರರೆಡ್ಡಿ ಕಟ್ಟಿಲ್ಲ ಟ್ಯಾಕ್ಸ್‌ - ಪಾಲಿಕೆ ದಿವಾಳಿಗೆ ಕಾರಣರಾದ್ರಾ ನಾಯಕರು        ಛತ್ತಿಸ್‌ಗಡದಲ್ಲಿ ಎರಡನೇ ಹಂತದ ಮತದಾನ -72 ವಿಧಾನಸಭಾ ಕ್ಷೇತ್ರಗಳಲ್ಲಿ ವೋಟಿಂಗ್‌ - ಮಧ್ಯ ಪ್ರದೇಶದಲ್ಲಿ ಪ್ರಧಾನಿ ರ‍್ಯಾಲಿ        ಬೆಂಗಳೂರಿಗೆ ಬಂದಿಳಿದ ನವಜೋಡಿ - ಮುಂಬೈನಿಂದ ಸಿಲಿಕಾನ್‌ ಸಿಟಿಗೆ ರಣವೀರ್‌, ದೀಪಿಕಾ - ನಾಳೆ ಲೀಲಾ ಪ್ಯಾಲೇಸ್‌ನಲ್ಲಿ ರಿಸೆಪ್ಷನ್       
Breaking News

ಇಂದಿನಿಂದ ಶ್ರೀರಂಗಪಟ್ಟಣ ದಸರಾ

Tuesday, 16.10.2018, 5:00 AM       No Comments

ಮಂಡ್ಯ: ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಅ.16 ರಿಂದ 18 ರವರೆಗೆ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಮಂಜುಶ್ರೀ ತಿಳಿಸಿದ್ದಾರೆ.
16 ರಂದು ಮಧ್ಯಾಹ್ನ 1.30ಕ್ಕೆ ಶ್ರೀರಂಗಪಟ್ಟಣ ತಾಲೂಕು ಕಿರಂಗೂರಿನಲ್ಲಿರುವ ಬನ್ನಿ ಮಂಟಪದ ಸಮೀಪ ಭಾನುಪ್ರಕಾಶ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಂದಿಧ್ವಜ ಪೂಜೆ. ಮಧ್ಯಾಹ್ನ 2 ಗಂಟೆಯಿಂದ 2.45ರೊಳಗೆ ನಾಡದೇವತೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ವೈಭವಯುತ ದಸರಾ ಜಂಬೂ ಸವಾರಿಗೆ ಗಣ್ಯರಿಂದ ಚಾಲನೆ ದೊರೆಯಲಿದೆ.
ಸಂಜೆ 6 ಗಂಟೆಗೆಕ್ಕೆ ಶ್ರೀರಂಗನಾಥ ದೇವಾಲಯ ಆವರಣದಲ್ಲಿರುವ ಶ್ರೀರಂಗ ವೇದಿಕೆಯಲ್ಲಿ ನಿರ್ದೇಶಕ ಟಿ.ಎಸ್.ನಾಗಾಭರಣ ಸಾಂಸ್ಕ್ರತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಬಳಿಕ ಸಂಗೀತ ನಿರ್ದೇಶಕ ಅರ್ಜುನ್‌ಜನ್ಯ ಮತ್ತು ತಂಡದವರಿಂದ ಮ್ಯೂಸಿಕಲ್ ನೈಟ್, ಶಿಲ್ಪಿ ಚೌದರಿ ತಂಡದವರಿಂದ ಮೈಸೂರು ಸಿಲ್ಕ್ ಹಾಗೂ ಕೊಡಿಯಾಲ ಸೀರೆಗಳ ಸೌಂದರ್ಯ ಪ್ರದರ್ಶನ ಕಾರ್ಯಕ್ರಮ ಹಾಗೂ ಆಯಾನಾ ತಂಡದವರಿಂದ ಸಮಕಾಲೀನ ನೃತ್ಯ ಪ್ರದರ್ಶನ ನಡೆಯಲಿದೆ.
17ರಂದು ಸಂಜೆ 5ಕ್ಕೆ ಸಾಹಿತಿ ಪ್ರೊ.ಕೃಷ್ಣೇಗೌಡ ಅವರು ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಬಳಿಕ ಹಾಸ್ಯನಟ ಸಾಧು ಕೋಕಿಲ, ಸಂಗೀತ ನಿರ್ದೇಶಕ ಸತೀಶ್ ಆರ್ಯನ್, ಅನುರಾಧಾ ಭಟ್ ಮತ್ತು ತಂಡದವರಿಂದ ಸಂಗೀತ ಸುಧೆ ಹಾಗೂ ಗೋಪಿಯವರಿಂದ ಮಿಮಿಕ್ರಿ ಕಾರ್ಯಕ್ರಮ ನಡೆಯಲ್ಲಿದೆ. 7ಕ್ಕೆ ರಾಜೇಶ್ ಕೃಷ್ಣನ್, ಶಮಿತಾ ಮಲ್ನಾಡ್, ಸುಪ್ರಿಯಾ ಲೋಹಿತ್, ಪುರುಷೋತ್ತಮ ಹಾಗೂ ಸರಿಗಮಪ ಖ್ಯಾತ ತಾರೆಯರಿಂದ ಸಂಗೀತ ಸಂಜೆ ಕಾರ್ಯಕ್ರಮ ಹಾಗೂ ಕಾಮಿಡಿ ಕಿಲಾಡಿಗಳು ವಿಜೇತ ಶಿವರಾಜ್ ಕೆ.ಆರ್.ಪೇಟೆ ಅವರಿಂದ ಹಾಸ್ಯ ಚಟಾಕಿ ಕಾರ್ಯಕ್ರಮ ನಡೆಯಲಿದೆ.
18ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಸಂಜೆ 4ಕ್ಕೆ ಸಾಹಿತಿ ಡಾ.ಲತಾ ರಾಜಶೇಖರ್ ಚಾಲನೆ ನೀಡುವರು. ಸಂಜೆ 6 ಗಂಟೆಗೆ ದಸರಾ ಸ್ಟಾರ್ಸ್ ನೈಟ್ ಏರ್ಪಡಿಸಿದ್ದು, ಚಲನಚಿತ್ರ ತಾರೆಯರಿಂದ ನೃತ್ಯ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Back To Top