16 C
Bangalore
Saturday, December 7, 2019

ಅಬ್ಬರದ ನಡುವೆ ಸುಮಲತಾ ನಾಮಪತ್ರ ಸಲ್ಲಿಕೆ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹರಿದು ಬಂದ ಅಭಿಮಾನಿಗಳ ಸಾಗರ * ಮೇಳೈಸಿದ ಅಂಬಿ ಹೆಸರು

ವಿಜಯವಾಣಿ ಸುದ್ದಿಜಾಲ ಮಂಡ್ಯ
ಸಹಸ್ರಾರು ಅಭಿಮಾನಿಗಳ ಬೆಂಬಲ, ಜೈಕಾರದೊಂದಿಗೆ ಸುಮಲತಾ ಅಂಬರೀಷ್ ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ ಮೈಸೂರು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬಳಿಕ11ಗಂಟೆ ಸುಮಾರಿಗೆ ನಗರದ ಡಿಸಿ ಕಚೇರಿಗೆ ಆಗಮಿಸಿದ ಸುಮಲತಾ ಅಂಬರೀಷ್, ಐವರು ಸೂಚಕರೊಂದಿಗೆ ಚುನಾವಣಾಧಿಕಾರಿ ಕಚೇರಿಗೆ ತೆರಳಿದರು. ಈ ವೇಳೆ ಅಂಬರೀಷ್ ಪುತ್ರ ಅಭಿಷೇಕ್, ನಿರ್ಮಾಪಕ ರಾಕಲೈನ್ ವೆಂಕಟೇಶ್ ಇದ್ದರು.
ನಾಮಪತ್ರ ಸಲ್ಲಿಕೆಗೆ ಮುನ್ನ ಆಯೋಗದ ಪ್ರಕ್ರಿಯೆ ಪೂರ್ಣಗೊಳಿಸಿ ಬಳಿಕ ಡಿಸಿ ಎನ್.ಮಂಜುಶ್ರೀ ಅವರಿಗೆ ನಾಮಪತ್ರ ಸಲ್ಲಿಸಿದರು. ಈ ವೇಳೆ ಸೂಚಕರಾಗಿ ವಿವಿಧ ಸಮುದಾಯದ ಮುಖಂಡರಾದ ಬಸ್ ನಂಜುಂಡಪ್ಪ, ಜಿಪಂ ಮಾಜಿ ಸದಸ್ಯ ಸುರೇಶ್ ಕಂಠಿ, ಅನ್ಸರ್, ಅಂಬರೀಷ್ ಸಂಬಂಧಿ ಮದನ್ ಇದ್ದರು.
ಬಳಿಕ ಕಚೇರಿಯಿಂದ ಹೊರಬಂದ ಸುಮಲತಾ, ಕಾರಿನ ಸಮೀಪ ನಿಂತು ಅಭಿಮಾನಿಗಳಿಗೆ ಎರಡು ಕೈ ಮುಗಿದು ನಮಸ್ಕರಿಸಿದರು. ಈ ವೇಳೆ ಅಭಿಮಾನಿಗಳ ಜೈಕಾರ ಮುಗಿಲುಮುಟ್ಟಿತ್ತು. ನಂತರ ಕಾವೇರಿ ಉದ್ಯಾನದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್, ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮಸ್ಕರಿಸಿದರು. ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆ ನಡೆಸಿದರು.

ಮೂರು ಸೆಟ್, ಮೂವತ್ತು ಸೂಚಕರು:
ಸುಮಲತಾ ಅಂಬರೀಷ್ ಅವರು ಮೂರು ಪ್ರತಿಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಪ್ರತಿ ಸೆಟ್‌ಗೂ ತಲಾ ಹತ್ತು ಸೂಚಕರಂತೆ ಮೂವತ್ತು ಸೂಚಕರಿಂದ ಸಹಿ ಮಾಡಿಸಲಾಗಿತ್ತು. ಇನ್ನು ಸುಮಲತಾ ಬರುವ ಮುನ್ನವೇ ಬೆಂಬಲಿಗರು ದಾಖಲಾತಿಯೊಂದಿಗೆ ಆಗಮಿಸಿದರು.
ಇನ್ನು ಡಿಸಿ ಕಚೇರಿ ಸುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದ ಪರಿಣಾಮ, ಕಚೇರಿ ಎದುರು ನಿಂತ ಅಭಿಮಾನಿಗಳನ್ನು ಪೊಲೀಸರು ದೂರ ಕಳುಹಿಸಿದರು. ಆದರೆ, ಸುಮಲತಾ ಬರುವ ವೇಳೆಗಾಗಲೇ ಡಿಸಿ ಕಚೇರಿ ಸಮೀಪ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದರು. ನಾಮಪತ್ರ ಸಲ್ಲಿಕೆ ಮಾಡುವವರೆಗೂ ಘೋಷಣೆ ಕೂಗುತ್ತಾ ತಮ್ಮ ಬೆಂಬಲ ಸೂಚಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಡಿಸಿ ಕಚೇರಿ ಸಮೀಪ ಬಿಎಸ್‌ಎಫ್ ಭದ್ರತಾ ಪಡೆ ನಿಯೋಜಿಸಲಾಗಿತ್ತು.
ರಾರಾಜಿಸಿದ ಕೈ ಬಾವುಟ, ಹಸಿರು ಶಾಲು:
ನಾಮಪತ್ರ ಸಲ್ಲಿಕೆ ಹಿನ್ನೆಲೆ ಸುಮಲತಾ ಅವರನ್ನು ಬೆಂಬಲಿಸಲು ಸಾವಿರಾರೂ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದರು. ಡಿಸಿ ಕಚೇರಿ ಹೊರನಿಂತು ಅಂಬರೀಷ್, ಸುಮಲತಾ, ದರ್ಶನ್ ಅವರಿಗೆ ಜೈಕಾರ ಕೂಗುತ್ತಿದ್ದರು.
ಈ ವೇಳೆ ಕಾಂಗ್ರೆಸ್ ಬಾವುಟ ಹಿಡಿದ ಕಾರ್ಯಕರ್ತರು ಕೂಡ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಅಂತೆಯೇ, ಹಸಿರು ಶಾಲು ಹಿಡಿದ ಕೆಲವರು ಕೈ ಬೀಸಿ ಬೆಂಬಲ ಸೂಚಿಸಿದರು. ಇದು ಪಕ್ಷಾತೀತವಾಗಿ ಸುಮಲತಾ ಅವರಿಗೆ ಬೆಂಬಲ ಸಿಗಲಿದೆ ಎನ್ನುವುದನ್ನು ತೋರಿಸಿಕೊಡುವಂತಿತ್ತು.
ಕುಣಿದು, ಕುಪ್ಪಳಿಸಿದ ಅಭಿಮಾನಿಗಳು:
ಬುಧವಾರ ಬೆಳಗ್ಗೆಯಿಂದಲೇ ಅಭಿಮಾನಿಗಳು, ಬೆಂಬಲಿಗರು ಸಿಲ್ವರ್ ಜ್ಯೂಬಿಲಿ ಪಾರ್ಕ್, ಸರ್‌ಎಂವಿ ಪ್ರತಿಮೆ, ಡಿಸಿ ಕಚೇರಿ ಸಮೀಪ ಜಮಾಯಿಸುತ್ತಿದ್ದರು. ಅಂತೆಯೇ, ನಾಮಪತ್ರ ಸಲ್ಲಿಸಿ ಹೊರಬಂದ ಬಳಿಕ ಸುಮಲತಾ ಸೇರಿದಂತೆ ಗಣ್ಯರು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಿದರು. ಈ ವೇಳೆ ಅಂಬರೀಷ್, ದರ್ಶನ್ ಭಾವಚಿತ್ರ ಹಿಡಿದು ಜೈಕಾರ ಮೊಳಗಿಸಿದರು. ಸರ್‌ಎಂವಿ ಪ್ರತಿಮೆಯಿಂದ ಹೊರಟ ಮೆರವಣಿಗೆಗೆ ಸಹಸ್ರ್ಕಾಖಿ ಅಭಿಮಾನಿಗಳು ಸಾಥ್ ನೀಡಿದರು. ಅಂತೆಯೇ, ಜನಪದ ಕಲಾ ತಂಡಗಳು ಕೂಡ ಮೆರವಣಿಗೆಯ ಮೆರುಗು ಹೆಚ್ಚಿಸಿದವು. ಅದರಲ್ಲಿಯೂ ಅಂಬರೀಷ್, ದರ್ಶನ್ ಚಿತ್ರದ ಹಾಡುಗಳಿಗೆ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...