ಮಂಡ್ಯ ಸಂಸದೆ ಸುಮಲತಾ ಅಂಬರೀಷ್​ಗೆ ಪರಾಜಿತ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಮಾಡಿದ ಮನವಿ ಹೀಗಿದೆ…

Latest News

ಅಹ್ಮದ್​ ಪಟೇಲ್​ ಜತೆ ಸಭೆಯ ಬಳಿಕ ಸೋನಿಯಾ, ಶರದ್​ ಪವಾರ್​ ಭೇಟಿ: ಶಿವಸೇನೆಯ ಹಿಂದುತ್ವ ಸಿದ್ಧಾಂತಕ್ಕೆ ಧಕ್ಕೆ ಆಗಲ್ಲವಂತೆ

ಮುಂಬೈ: ಕಾಂಗ್ರೆಸ್​ನ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಕಾಂಗ್ರೆಸ್​ ಮುಖಂಡ ಅಹ್ಮದ್​ ಪಟೇಲ್​ ಜತೆ ಸಭೆ ನಡೆಸಿ, ಮಹಾರಾಷ್ಟ್ರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ...

ಮಹಾರಾಷ್ಟ್ರದಲ್ಲಿ ಕಾಡುತ್ತಿದೆ ಶಾಸಕರ ಕುದುರೆ ವ್ಯಾಪಾರದ ಭೀತಿ: ಎನ್​ಸಿಪಿ ಮಾತ್ರ ನಿರಾತಂಕ

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದಲ್ಲಿ ಸರ್ಕಾರ ರಚಿಸಲು ಎನ್​ಸಿಪಿ ಮತ್ತು ಕಾಂಗ್ರೆಸ್​ ತರಾತುರಿ ತೋರುತ್ತಿವೆ. ಸರ್ಕಾರ ರಚನೆ ವಿಳಂಬವಾದಲ್ಲಿ ಬಿಜೆಪಿಯವರು ಆಪರೇಷನ್​ ಕಮಲ...

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಪೇಜಾವರ ಶ್ರೀಗಳಂತಹ ಹಿರಿಯರ ಕನಸು: ಬಾಬಾ ರಾಮದೇವ್​

ಉಡುಪಿ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಪೇಜಾವರ ಶ್ರೀಗಳಂತಹ ಹಿರಿಯರ ಕನಸಾಗಿದೆ ಎಂದು ಯೋಗಗುರು ಬಾಬಾ ರಾಮದೇವ್​ ತಿಳಿಸಿದರು. ಐದು ದಿನಗಳ ಯೋಗ ಮತ್ತು...

ಮಹಾರಾಷ್ಟ್ರ ಸರ್ಕಾರ: ಮೂರು ಪಕ್ಷಗಳ ಚುನಾವಣಾ ಪ್ರಣಾಳಿಕೆ ಆಧರಿಸಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ನಿರ್ಧಾರ

ಮುಂಬೈ: ಮಹಾರಾಷ್ಟ್ರದಲ್ಲಿ ಎನ್​ಸಿಪಿ ಮತ್ತು ಕಾಂಗ್ರೆಸ್​ ಬೆಂಬಲಿತ ಶಿವಸೇನೆ ಸರ್ಕಾರ ಅಸ್ತಿತ್ವಕ್ಕೆ ಬರುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಮೂರು ಪಕ್ಷಗಳ ಚುನಾವಣಾ...

ಮಡಿಕೇರಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಮಡಿಕೇರಿನಗರದ ಜನತೆಗೆ ಮೂಲಸೌಲಭ್ಯ ಕಲ್ಪಿಸುವಲ್ಲಿ ನಗರಸಭೆ ವಿಫಲವಾಗಿದೆ ಎಂದು ಆರೋಪಿಸಿ ಮಡಿಕೇರಿ ರಕ್ಷಣಾ ವೇದಿಕೆಯ ಸದಸ್ಯರು ನಗರದ ಪ್ರಮುಖ ಬೀದಿಗಳಲ್ಲಿ...

ಬೆಂಗಳೂರು/ಮಂಡ್ಯ: ಸಕ್ಕರೆ ನಾಡಿನ ಲೋಕಸಭಾ ಕ್ಷೇತ್ರದಿಂದ ಪ್ರಚಂಡ ಗೆಲುವು ಸಾಧಿಸಿ ಮೊದಲ ಬಾರಿಗೆ ಸಂಸದೆಯಾದ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್​ ಅವರಿಗೆ ಪರಾಜಿತ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ​ ಸಾಮಾಜಿಕ ಜಾಲತಾಣ ಫೇಸ್​ಬುಕ್​ ಮೂಲಕ ಮನವಿಯೊಂದನ್ನು ಮಾಡಿದ್ದಾರೆ.

ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ರಾಜ್ಯದ ಸಂಸತ್ ಸದಸ್ಯರಿಗೆ ನನ್ನ ಅಭಿನಂದನೆಗಳು. ರಾಜ್ಯದ ಹಿತವನ್ನು ಕಾಪಾಡುವ ಜತೆಗೆ, ವಿಶೇಷವಾಗಿ ನಮ್ಮ ರೈತರ ಹಾಗೂ ಬಡವರ ಪರವಾಗಿ, ಅವರ ಏಳಿಗೆಗಾಗಿ, ನಿಮ್ಮ ಪ್ರಯತ್ನಗಳು ಇರಲಿವೆ ಎಂದು ಎಲ್ಲ ಕನ್ನಡಿಗರಂತೆ, ನಾನೂ ಕೂಡ ನಿರೀಕ್ಷಿಸುತ್ತಿದ್ದೇನೆ ಎಂದು ಫೇಸ್​ಬುಕ್​ನಲ್ಲಿ ಮೊದಲಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಆಳುವ ಪಕ್ಷದ ಬೆಂಬಲದೊಂದಿಗೆ ಗೆದ್ದಿದ್ದೀರಾ ತುಂಬಾ ನಿರೀಕ್ಷೆ ಇದೆ
ಮಂಡ್ಯದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಷ್ ಅವರಿಗೆ ನನ್ನ ಅಭಿನಂದನೆಗಳು. ಕೇಂದ್ರ ಸರ್ಕಾರದಿಂದ ಅಗತ್ಯ ಬೆಂಬಲ, ನೆರವು ಸಿಗದೆ ನಮ್ಮ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ವಿಶೇಷ ನೆರವಿಗಾಗಿ ಬೇಡಿಕೆ ಹೊತ್ತು ರಾಜ್ಯಸರ್ಕಾರ ಕೇಂದ್ರಕ್ಕೆ ನಿಯೋಗಗಳನ್ನು ಕರೆದೊಯ್ದು, ಬರಿಗೈಯಲ್ಲಿ ಮರಳುತ್ತಿರುವುದನ್ನು ಕೂಡ ರಾಜ್ಯದ ಜನ ನೋಡುತ್ತಲೇ ಬಂದಿದ್ದಾರೆ. ಈಗ ಕೇಂದ್ರದಲ್ಲಿ ಆಳುವ ಪಕ್ಷದ ಬೆಂಬಲದೊಂದಿಗೆ ಇಲ್ಲಿ ನೀವು ಗೆದ್ದಿರುವುದರಿಂದ, ನಮ್ಮ ರೈತರಿಗೆ ಅರ್ಹ ನೆರವು, ಯೋಜನೆಗಳನ್ನು ತರುವಲ್ಲಿ ತಾವು ಯಶಸ್ವಿಯಾಗುವಿರಿ ಎನ್ನುವುದು ಮಂಡ್ಯದ ಜನರ ಹಾಗೂ ರೈತರ ನಿರೀಕ್ಷೆಯಾಗಿದೆ ಎಂದು ನೂತನ ಸಂಸದೆ ಸುಮಲತಾ ಅಂಬರೀಷ್​ ಕುರಿತು ಬರೆದುಕೊಂಡಿದ್ದಾರೆ.

ಸೋಲಿಗೆ ನಾನೇ ಹೊಣೆ
ಈ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಮಂಡ್ಯದಲ್ಲಿ ಗೆಲುವು ಸಾಧಿಸದೆ ಇರುವುದಕ್ಕೆ, ಪಕ್ಷದ ಅಭ್ಯರ್ಥಿಯಾಗಿ ನಾನೇ ಹೊಣೆ. ಇದಕ್ಕಾಗಿ ಯಾರನ್ನೂ ದೂಷಿಸುವುದಿಲ್ಲ. ಹಿನ್ನಡೆಗೆ ಕಾರಣಗಳನ್ನು ನೀಡುವ ಬದಲು ಅದರ ಸಂಪೂರ್ಣ ಜವಾಬ್ದಾರಿಯನ್ನು ನಾನೇ ಹೊತ್ತುಕೊಳ್ಳುತ್ತೇನೆ. ನಾನು ಮಂಡ್ಯ ಬಿಟ್ಟು ಎಲ್ಲೂ ಹೋಗುವುದಿಲ್ಲ. ಇಲ್ಲೆ ಇರುತ್ತೇನೆ. ಈ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ 5.77 ಲಕ್ಷ ಜನರ ನಿರೀಕ್ಷೆಗಳಿಗೆ ನಾನು ಉತ್ತರದಾಯಿಯಾಗಿದ್ದೇನೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಜನರ ಆಶೀರ್ವಾದ ಪಡೆಯುವ ನಿಟ್ಟಿನಲ್ಲಿ ನನ್ನ ಪ್ರಯತ್ನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಮಂಡ್ಯ ಜನತೆಗೆ ನನ್ನ ಕೃತಜ್ಞತೆಗಳು
ಪಕ್ಷದ ಯಶಸ್ಸಿಗಾಗಿ ಶ್ರಮಿಸಿದ ಪ್ರತಿಯೊಬ್ಬ ಕಾರ್ಯಕರ್ತರ ಪರಿಶ್ರಮ, ನಮ್ಮನ್ನು ಬೆಂಬಲಿಸಿದ ಜನರ ಪ್ರೀತಿ-ಅಭಿಮಾನಗಳ ದೊಡ್ಡ ಜವಾಬ್ದಾರಿ ನನ್ನ ಮೇಲಿದೆ. ನಮ್ಮ ಜೆಡಿಎಸ್ ಪಕ್ಷದ ಸಾವಿರಾರು ನಿಷ್ಠಾವಂತ ಕಾರ್ಯಕರ್ತರ ಜತೆಗೆ ಪಕ್ಷ ಸಂಘಟನೆಯ ಕಾರ್ಯದಲ್ಲಿ ನಾನು ತೊಡಗಿಕೊಳ್ಳುತ್ತೇನೆ. ಜೆಡಿಎಸ್ ಪಕ್ಷದ ಬಲವರ್ಧನೆಗಾಗಿ ನನ್ನ ಪ್ರಯತ್ನ ಮುಂದುವರಿಯಲಿದೆ. ನನ್ನನ್ನು ಬೆಂಬಲಿಸಿ, ಆಶೀರ್ವದಿಸಿದ ನನ್ನ ಮಂಡ್ಯದ ಬಂಧುಗಳಿಗೆ, ಹಿರಿಯರಿಗೆ ಹಾಗೂ ತಾಯಂದಿರಿಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಫೇಸ್​ಬುಕ್​ ಮೂಲಕ ಸುದೀರ್ಘವಾಗಿ ನಿಖಿಲ್​ ಕುಮಾರಸ್ವಾಮಿ ಅವರು ಬರೆದುಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

Nikhil Gowda ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶುಕ್ರವಾರ, ಮೇ 31, 2019

- Advertisement -

Stay connected

278,480FansLike
564FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....

VIDEO: ಅವಿಸ್ಮರಣೀಯ ಕ್ಷಣಗಳು:...

ಹ್ಯೂಸ್ಟನ್​: ಇಲ್ಲಿ ಭಾನುವಾರ ಆಯೋಜನೆಗೊಂಡಿದ್ದ ಹೌಡಿ ಮೋದಿ ಕಾರ್ಯಕ್ರಮ ಮುಗಿದ ಬಳಿಕ ವೇದಿಕೆಯಿಂದ ಇಳಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್​ ತೆರಳುತ್ತಿದ್ದರು. ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ...

VIDEO: ಅಮೆರಿಕ ತಲುಪಿದ...

ಹ್ಯೂಸ್ಟನ್​: ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಮೆರಿಕ ತಲುಪಿದರು. ಹ್ಯೂಸ್ಟನ್​ನ ಜಾರ್ಜ್ ಬುಷ್​ ಇಂಟರ್​ಕಾಂಟಿನೆಂಟಲ್​ ಏರ್​ಪೋರ್ಟ್​ಗೆ ಬಂದಿಳಿದ ಅವರನ್ನು ಭಾರತದಲ್ಲಿನ ಅಮೆರಿಕ ರಾಯಭಾರಿ ಕೆನ್ನೆತ್​ ಜಸ್ಟರ್​, ಅಮೆರಿಕದಲ್ಲಿನ ಭಾರತದ ರಾಯಭಾರಿ...

ಹೈಕೋರ್ಟ್ ಜಡ್ಜ್​ ವಿರುದ್ಧ...

ಹೈದರಾಬಾದ್​: ಹೈಕೋರ್ಟ್​ನ ನಿವೃತ್ತ ನ್ಯಾಯಮೂರ್ತಿ ನೂಟಿ ರಾಮಮೋಹನ ರಾವ್​ ವಿರುದ್ಧ ಅವರ ಸೊಸೆಯೇ ಕೌಟುಂಬಿಕ ದೌರ್ಜನ್ಯದ ದೂರು ದಾಖಲಿಸಿದ್ದಾರೆ. ಬರೀ ಮಾವನ ವಿರುದ್ಧವಷ್ಟೇ ಅಲ್ಲದೆ, ಅತ್ತೆ ನೂಟಿ ದುರ್ಗಾ ಜಯ ಲಕ್ಷ್ಮೀ ಮತ್ತು...

ಉಪಚುನಾವಣೆಯಲ್ಲಿ ಮೈತ್ರಿ ಕುರಿತು...

ಬೆಂಗಳೂರು: ಉಪಚುನಾವಣೆಯಲ್ಲಿ ಎಲ್ಲಾ 15 ಕ್ಷೇತ್ರಗಳಲ್ಲಿ ಜೆಡಿಎಸ್​ ಏಕಾಂಗಿಯಾಗಿ ಸ್ಪರ್ಧಿಸಲಿದೆ. ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂದು ಜೆಡಿಎಸ್​ ಟ್ವೀಟ್​ ಮಾಡಿದೆ. ಇದರ ಬೆನ್ನಲ್ಲೇ ಸುದ್ದಿಗೋಷ್ಠಿ ನಡೆಸಿದ...

ಮಸ್ಕಿ ಮತ್ತು ಆರ್​.ಆರ್​....

ಬೆಂಗಳೂರು: ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗಳ ಜತೆಯಲ್ಲೇ ರಾಜ್ಯದಲ್ಲಿ ತೆರವಾಗಿದ್ದ 17 ಕ್ಷೇತ್ರಗಳ ಪೈಕಿ 15 ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿದೆ. ಆದರೆ ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಚುನಾವಣಾ ಆಯೋಗ...

ಅಕ್ರಮ ಹಣ ಪತ್ತೆ...

ನವದೆಹಲಿ: ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ತೀರ್ಪನ್ನು ಸೆ.25ಕ್ಕೆ ಕಾಯ್ದಿರಿಸಲಾಗಿದೆ. ಇಂದು ಇ.ಡಿ. ವಿಶೇಷ...