ಆಟೋ, ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಗೆ ಐವರು ಬಲಿ, ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರ

ಮಂಡ್ಯ: ಆಟೋ ಮತ್ತು ಟಿಪ್ಪರ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಿಂದಾಗಿ ಐವರು ಸ್ಥಳದಲ್ಲೇ ದುರಂತ ಸಾವಿಗೀಡಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ನಾಗಮಂಗಲ ತಾಲ್ಲೂಕಿನ ಸಂಕನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಗೊಂಡಿರುವ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಿಕ್ಕಿಯ ರಭಸಕ್ಕೆ ಟಿಪ್ಪರ್​, ಆಟೋವನ್ನು ಮೀಟರ್​ಗಟ್ಟಲೇ ಎಳೆದೊಯ್ದಿದೆ. ಆಟೋ ಡ್ರೈವರ್ ಸತೀಶ್ ಸೇರಿ ಐವರು ಸಾವಿಗೀಡಾಗಿದ್ದಾರೆ. ಈ ಸಂಬಂಧ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)