ಮೊದಲ ಸುತ್ತಿನ ಮತ ಎಣಿಕೆ ಅಂತ್ಯಕ್ಕೆ ಮುನ್ನಡೆ ಕಾಯ್ದುಕೊಂಡ ನಿಖಿಲ್‌ ಕುಮಾರಸ್ವಾಮಿ

ಮಂಡ್ಯ: ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳಿಗಿಂತಲೂ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಮೈತ್ರಿ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್‌ ಮತ್ತು ನಿಖಿಲ್‌ ಕುಮಾರಸ್ವಾಮಿ ಮಧ್ಯೆ ನಿಖಿಲ್‌ ಸುಮಾರು 1872 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಮೊದಲ ಸುತ್ತಿನ ಮತಎಣಿಕೆಯಲ್ಲಿ ನಿಖಿಲ್​ ಕುಮಾರಸ್ವಾಮಿಗೆ 32,183 ಮತಗಳು ಚಲಾವಣೆಯಾಗಿದ್ದರೆ, ಸುಮಲತಾ ಅಂಬರೀಷ್​ಗೆ 30.311 ಮತಗಳು ಬಂದಿವೆ.

ಇನ್ನು ಮಂಡ್ಯದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ಮತ ಎಣಿಕೆ ಕೇಂದ್ರದತ್ತ ಜನರು ಸುಳಿದಿಲ್ಲ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *