ಮಂಗಳೂರು ವಿಮಾನ ನಿಲ್ದಾಣ 45.7 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

mng--26 April Gold
Published on

ಮಂಗಳೂರು : ದುಬೈಯಿಂದ ಮಂಗಳೂರಿಗೆ ಸುಮಾರು 47.7 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ.


ವ್ಯಕ್ತಿಯಿಂದ 45,79,200 ಲಕ್ಷ ರೂ. ಮೌಲ್ಯದ 636 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಮೂಲದ ಪ್ರಯಾಣಿಕನೋರ್ವ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ 814 ಮೂಲಕ ಮಂಗಳೂರಿಗೆ ಆಗಮಿಸಿದ್ದಾನೆ. ಈ ಸಂದರ್ಭ ಪ್ರಯಾಣಿಕನ ಅನುಮಾನಾಸ್ಪದ ವರ್ತನೆಯನ್ನು ಗಮನಿಸಿದ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ತಪಾಸಣೆ ವೇಳೆ ಪ್ರಯಾಣಿಕನು ತನ್ನ ಗುದನಾಳದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net