ಮಂಗಳೂರು ವಿಮಾನ ನಿಲ್ದಾಣದಲ್ಲಿ 58.78 ಲಕ್ಷ ರೂ. ಮೌಲ್ಯದ ಚಿನ್ನ ವಶ

mng--12 april Gold
Published on


ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಗುದನಾಳದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 58,78,880 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿದ್ದಾರೆ.


ಗುರುವಾರ ದುಬೈನಿಂದ ಆಗಮಿಸಿದ ವಿಮಾನದಲ್ಲಿದ್ದ ದ.ಕ.ಜಿಲ್ಲೆಯ ಪ್ರಯಾಣಿಕನೊಬ್ಬ 812 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ಗುದನಾಳದಲ್ಲಿರಿಸಿ ಸಾಗಿಸುತ್ತಿದ್ದುದು ಪತ್ತೆಯಾಗಿತ್ತು. ಅಂಡಾಕಾರದ ಮೂರು ವಸ್ತುಗಳಲ್ಲಿ ಚಿನ್ನವನ್ನು ಪೇಸ್ಟ್ ರೂಪದಲ್ಲಿ
ಮರೆಮಾಡಿ ಕಳ್ಳಸಾಗಾಟ ಮಾಡುತ್ತಿದುದನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ವೇಳೆ ಜಫ್ತಿ ಮಾಡಿದ್ದಾರೆ. ವಶಪಡಿಸಿದ ಚಿನ್ನದ ಮೌಲ್ಯ 58,78,880 ರೂ. ಎಂದು ಹೇಳಲಾಗಿದೆ. ಪ್ರಯಾಣಿಕನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net