ಮಂಗಳೂರು: ಭದ್ರತೆಯನ್ನು ಹೆಚ್ಚಿಸುವ ಮಹತ್ವದ ಹೆಜ್ಜೆಯಾಗಿ, ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಹೊಸ ಪೊಲೀಸ್ ಚೆಕ್ ಪೋಸ್ಟ್ ಶನಿವಾರ ಉದ್ಘಾಟಿಸಲಾಯಿತು.
ಮಂಗಳೂರು ನಗರ ಪೊಲೀಸರ ಸಹಯೋಗದೊಂದಿಗೆ, ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣದ ಸಿಬ್ಬಂದಿಯ ಸುರಕ್ಷತೆ ಮತ್ತು ಭದ್ರತೆಯನ್ನು ಹೆಚ್ಚಿಸುವ ಉದ್ದೇಶದಿಂದ ಚೆಕ್‌ಪೋಸ್ಟ್ ತೆರೆಯಲಾಗಿದೆ.
ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಚೆಕ್ ಪೋಸ್ಟ್ ಲೋಕಾರ್ಪಣೆ ಮಾಡಿದರು. ಚೆಕ್ ಪೋಸ್ಟ್‌ನಲ್ಲಿ ಕರ್ತವ್ಯ ನಿರ್ವಹಿಸಲು ಪೂರಕವಾಗಿ ಉತ್ತಮ ಮೂಲಸೌಲಭ್ಯ ಕಲ್ಪಿಸಲಾಗಿದೆ. ನಗರ ಪೊಲೀಸರಿಂದ ತರಬೇತಿ ಪಡೆದ ಸಿಬ್ಬಂದಿ ಚೆಕ್ ಪೋಸ್ಟ್ ನಿರ್ವಹಿಸಲಿದ್ದಾರೆ.