

ಮಂಗಳೂರು: ನಗರದ ಉತ್ತರ ಹಾಗೂ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಮಾದಕವಸ್ತು ಸೇವನೆ ಮಾಡಿದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಧಕ್ಕೆಯಲ್ಲಿ ಮಾದಕ ವಸ್ತು ಸೇವನೆ ಮಾಡಿ ತೂರಾಡುತ್ತಿದ್ದ ಆಶೀಕ್ ರೆಹಮಾನ್ ಎಂ. (27) ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ದೇರಳಕಟ್ಟೆ ರಸ್ತೆ ಬದಿ ಧೂಮಪಾನ ಮಾಡುತ್ತಿದ್ದ ಮೊಹಮ್ಮದ್ ಫಯೀಜ್ (23) ಹಾಗೂ ಫಾಝಿಲ್ ಇಬ್ರಾಹಿಂ (26), ಯೂಸಯಫ್ ಇರ್ಷಾದ್ (24) ಅವರನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.