18.5 C
Bangalore
Sunday, December 15, 2019

ಮೋದಿ ಕಲ್ಪನೆ ಸ್ವಚ್ಛ ಆಡಳಿತ: ನಳಿನ್ ಕುಮಾರ್ ಕಟೀಲ್

Latest News

ಅಮಿತ್ ಷಾ ಅವರನ್ನು ಭೇಟಿಯಾದ ಬಿ. ವೈ ವಿಜಯೇಂದ್ರ 

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಗೃಹ ಸಚಿವ ಅಮಿತ್ ಷಾ ಅವರನ್ನು ನವದೆಹಲಿಯಲ್ಲಿ ಶುಕ್ರವಾರ ರಾತ್ರಿ ರಾಜ್ಯ ಬಿಜೆಪಿ ಯುವ ಮೋರ್ಚಾ...

ಪಾಕಿಸ್ತಾನದಲ್ಲಿ ಸಾರಾ ಅಲಿ ಖಾನ್​ಗಾಗಿ ಬಾರಿ ಹುಡುಕಾಟ!

ಈಗಷ್ಟೇ ಬಾಲಿವುಡ್​ನಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಿರುವ ಸೈಫ್ ಅಲಿಖಾನ್ ಪುತ್ರಿ ಸಾರಾ ಅಲಿಖಾನ್, ಸದ್ಯ ಬಿ-ಟೌನ್​ನ ಬಿಜಿ ನಟಿ. ಹಲವು ಸಿನಿಮಾಗಳು ಕೈಯಲ್ಲಿದ್ದು,...

ರಾಜಧಾನಿಯಲ್ಲಿ ಸ್ಮಾರ್ಟ್ ಪಾರ್ಕಿಂಗ್​ ಶುರು

ಬೆಂಗಳೂರು: ನಗರದಲ್ಲಿ ಆರೇಳು ವರ್ಷಗಳಿಂದ ರ್ಚಚಿತ ವಿಷಯವಾಗಿದ್ದ ಸ್ಮಾರ್ಟ್ ರ್ಪಾಂಗ್ ವ್ಯವಸ್ಥೆಯನ್ನು ಕೊನೆಗೂ ಜಾರಿಗೊಳಿಸಲು ಬಿಬಿಎಂಪಿ ಮುಂದಾಗಿದೆ. ಕಸ್ತೂರಬಾ ರಸ್ತೆಯಲ್ಲಿ ಸ್ಮಾರ್ಟ್ ರ್ಪಾಂಗ್...

ಲೈವ್ ಧಾರವಾಡ ಪೇಡಾ ಮಳಿಗೆ ಪ್ರಾರಂಭ

ಬೆಂಗಳೂರು: ಸಿಹಿತಿನಿಸುಗಳ ತಯಾರಿಕೆ ಮತ್ತು ಮಾರಾಟಕ್ಕೆ ಪ್ರಸಿದ್ಧವಾಗಿರುವ ಬಿಗ್ ಮಿಶ್ರಾ ಪೇಡಾ ಪ್ರೖೆ. ಲಿ. ಗಾಂಧಿನಗರದ ಗುಬ್ಬಿ ವೀರಣ್ಣ ನಾಟಕ ರಂಗಮಂದಿರದ ಮುಂಭಾಗದಲ್ಲಿ ಶನಿವಾರ...

ಪೊಲೀಸರ ಹೆಸರಲ್ಲಿ ದೂರುದಾರಗೆ ವಂಚನೆ!: ಇಲಾಖೆಯ ಇ-ಲಾಸ್ಟ್ ಆಪ್ ಮೂಲಕ ಕೊಟ್ಟ ದೂರಿನ ವಿವರವನ್ನೇ ಕದ್ದು ಮೋಸ

ಬೆಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಆನ್​ಲೈನ್ ಮಾರ್ಕೆಟ್​ನಲ್ಲಿ ಯೋಧರ ಹೆಸರಲ್ಲಿ ಪರಿಚಯಿಸಿಕೊಂಡು ಯಾಮಾರಿಸುತ್ತಿದ್ದ ಸೈಬರ್ ಖದೀಮರು, ಇದೀಗ ಪೊಲೀಸರ ಹೆಸರಿನಲ್ಲಿಯೇ ವಂಚನೆಗೆ ಇಳಿದಿದ್ದಾರೆ....

ಮಂಗಳೂರು: ಮೋದಿ ಕೇಂದ್ರದಲ್ಲಿ ನಡೆಸುತ್ತಿರುವ ಭ್ರಷ್ಟಾಚಾರ ರಹಿತ, ಸ್ವಚ್ಛ ಆಡಳಿತವನ್ನೇ ಮಹಾನಗರ ಪಾಲಿಕೆಯಲ್ಲೂ ನೀಡಲು ಪಕ್ಷ ಬದ್ಧ. ಪಕ್ಷದ ಗೌರವ, ನಂಬಿಕೆ, ವಿಶ್ವಾಸ, ಜನರ ನಂಬಿಕೆಗೆ ದ್ರೋಹವಾಗದ ರೀತಿ, ಬಿಜೆಪಿ ಆಡಳಿತದಲ್ಲಿ ಉತ್ತಮ ಕೆಲಸಗಳು ನಡೆಯಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಭರವಸೆ ನೀಡಿದರು.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ವಿಜೇತರಾದ ಪಕ್ಷದ ಸದಸ್ಯರಿಗೆ ಮತ್ತು ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ನಗರದ ಕದ್ರಿ ಮೈದಾನದಲ್ಲಿ ಶನಿವಾರ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಭ್ರಷ್ಟತೆಗೆ ಎಡೆಮಾಡದೆ ತಮ್ಮ ವಾರ್ಡ್ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಸೂಚನೆ ನೀಡಿದ ಅವರು, 5 ವರ್ಷದ ಕಾಂಗ್ರೆಸ್ ದುರಾಡಳಿತ, ಬೇಜವಾಬ್ದಾರಿ, ಆಡಳಿತದಲ್ಲಿ ಗುದ್ದಾಟವನ್ನು ನೋಡಿ ಜನ ಬೇಸತ್ತಿದ್ದಾರೆ. ಇನ್ನಷ್ಟು ಭ್ರಷ್ಟಾಚಾರ ನಡೆಸಬೇಕು ಎಂದು ಮೀಸಲಾತಿಯಲ್ಲೂ ರಾಜಕಾರಣ ಮಾಡಿದ ಪರಿಣಾಮ ಜನತೆ ಬಿಜೆಪಿಗೆ ಆಡಳಿತ ನೀಡಿದ್ದಾರೆ ಎಂದರು.

ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ಅಧಕ್ಷತೆ ವಹಿಸಿದ್ದರು. ಶಾಸಕರಾದ ರಾಜೇಶ್ ನಾಕ್ ಉಳೇಪಾಡಿ, ಉಮಾನಾಥ ಕೊಟ್ಯಾನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ, ಜಿಲ್ಲಾ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಸಹ ಸಂಚಾಲಕ ನಿತಿನ್ ಕುಮಾರ್, ಮಾಜಿ ಸಚಿವರಾದ ನಾಗರಾಜ ಶೆಟ್ಟಿ, ಕೃಷ್ಣ ಜೆ.ಪಾಲೆಮಾರ್, ಮಾಜಿ ಶಾಸಕ ಬಾಲಕೃಷ್ಣ ಭಟ್, ಯೋಗೀಶ್ ಭಟ್, ಪದ್ಮನಾಭ ಕೊಟ್ಟಾರಿ, ವಿಧಾನ ಪರಿಷತ್ ಮಾಜಿ ಮೋನಪ್ಪ ಭಂಡಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಬೃಜೇಶ್ ಚೌಟ, ಮಂಡಲ ಪ್ರಧಾನ ಕಾರ್ಯದರ್ಶಿ ಭಾಸ್ಕರ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ಉತ್ತರ ಶಾಸಕ ಡಾ. ವೈ. ಭರತ್ ಶೆಟ್ಟಿ ಸ್ವಾಗತಿಸಿದರು. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಪ್ರಸ್ತಾವಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಮೂಡುಬಿದಿರೆ ಕಾರ್ಯಕ್ರಮ ನಿರೂಪಿಸಿದರು.

ಜೋಡೆತ್ತುಗಳ ಕೆಲಸ
ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಜೋಡೆತ್ತುಗಳಾಗಿ ಕೆಲಸ ಮಾಡುತ್ತಿದ್ದರೆ, ಮನಪಾ ಚುನಾವಣೆಯಲ್ಲಿ ಡಾ.ಭರತ್ ಶೆಟ್ಟಿ ಹಾಗೂ ವೇದವ್ಯಾಸ ಕಾಮತ್ ಜೋಡೆತ್ತುಗಳಾಗಿ ಬಿಜೆಪಿಯನ್ನು ಗೆಲ್ಲಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು. ನಗರದ 5-6 ಲಕ್ಷ ಮತದಾದರು ಪಾಲಿಕೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಜನರ ಭಾವನೆಯನ್ನು ಅರ್ಥಮಾಡಿ ಸಮರ್ಥವಾಗಿ ಕೆಲಸ ಮಾಡುವ ಜವಾಬ್ದಾರಿ ಆಯ್ಕೆಯಾದ ಜನಪ್ರತಿನಿಧಿಗಳದ್ದು. ಅಭಿನಂದನೆ ಜತೆಗೆ ಜವಾಬ್ದಾರಿ ನೆನಪು ಮಾಡುವ ಕಾರ್ಯಕ್ರಮವಾಗಿದೆ ಎಂದರು.

ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರನ್ನು ಕಾಂಗ್ರೆಸ್ ನಡೆಸಿಕೊಂಡ ರೀತಿ ಮತ್ತು ಅವರು ಕಾಂಗ್ರೆಸ್‌ಗೆ ನೀಡಿದ ಶಾಪ ಬಿಜೆಪಿಗೆ ವರವಾಯಿತು.
– ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಜ್ಯಾಧ್ಯಕ್ಷ

ಪಾಲಿಕೆಯಲ್ಲಿ ಹೊಸ ಮುಖಗಳಿಗೆ ಈ ಬಾರಿ ಅವಕಾಶ ಸಿಕ್ಕಿದೆ. ಜನತೆ ಪಕ್ಷದ ಮೇಲೆ ಇಟ್ಟ ವಿಶ್ವಾಸಕ್ಕೆ ಕಳಂಕ ಬಾರದಂತೆ, ಕಪ್ಪು ಚುಕ್ಕೆ ಇಲ್ಲದೆ ಭ್ರಷ್ಟಾಚಾರ ರಹಿತ ಆಡಳಿತ ಮಾಡಬೇಕಿದೆ. ಪಕ್ಷ ಶೇ.100ರಷ್ಟು ವಚನಗಳನ್ನು ಪಾಲಿಸಿದೆ ಎಂದು ಮುಂದಿನ ಚುನಾವಣೆ ವೇಳೆ ಜನರು ಹೇಳುವಂತಹ ವಾತಾವರಣ ಸೃಷ್ಟಿಸಬೇಕಿದೆ.
ವೇದವ್ಯಾಸ ಕಾಮತ್, ಶಾಸಕ

Stay connected

278,753FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...