26.8 C
Bangalore
Friday, December 13, 2019

ಹಾಲ್ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಪಿ.ಬಿ.ಹರೀಶ್ ರೈ ಮಂಗಳೂರು
ಮಂಗಳೂರಿನ ಪುರಭವನ ಸಹಿತ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯ ಯಾವುದೇ ಕನ್ವೆನ್ಶನ್ ಹಾಲ್‌ಗಳಲ್ಲಿ ಇನ್ನು ಸಂಘ, ಸಂಸ್ಥೆಗಳು ಕಾರ್ಯಕ್ರಮ ನಡೆಸ ಬೇಕಿದ್ದರೆ ಪೊಲೀಸ್ ಇಲಾಖೆಯ ನಿರಾಕ್ಷೇಪಣಾ ಪತ್ರ ಪಡೆಯುವುದು ಕಡ್ಡಾಯ. ಅಷ್ಟೇ ಅಲ್ಲ, ಉಪ ವಿಭಾಗಾಧಿಕಾರಿಯ ಅನುಮತಿಯನ್ನೂ ಪಡೆಯಬೇಕು. ಇದು ಮಂಗಳೂರು ನಗರ ಪೊಲೀಸ್ ಆಯುಕ್ತರ ಖಡಕ್ ಸೂಚನೆ.

ಇದುವರೆಗೆ ಮೈದಾನದಂಥ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ನಡೆಸುವಾಗ ಪೊಲೀಸರ ಅನುಮತಿ ಕಡ್ಡಾಯವಾಗಿತ್ತು. ಆದರೆ ಹಾಲ್‌ಗಳ ಒಳಗೆ ನಡೆಯುವ ಕಾರ್ಯಕ್ರಮಗಳ ಬಗ್ಗೆ ಪೊಲೀಸರಿಗೆ ಮಾಹಿತಿ ಇರುವುದಿಲ್ಲ. ಕಾರ್ಯಕ್ರಮ ನಡೆಸುವ ಸಂಘ, ಸಂಸ್ಥೆಗಳ ಬಗ್ಗೆ ಪೂರ್ವಭಾವಿ ಮಾಹಿತಿ ಇರಲಿ ಎನ್ನುವ ಉದ್ದೇಶದಿಂದ ಖಾಸಗಿ ಸಹಿತ ಯಾವುದೇ ಹಾಲ್‌ನಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು.

ಮಂಗಳೂರು ಕುದ್ಮುಲ್ ರಂಗರಾವ್ ಪುರಭವನ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿದೆ. ಈ ಠಾಣೆಯ ಪೊಲೀಸ್ ನಿರೀಕ್ಷಕರು ಮಂಗಳೂರು ಮಹಾ ನಗರ ಪಾಲಿಕೆ ಪತ್ರ ಬರೆದು, ಕಾರ್ಯಕ್ರಮ ಆಯೋಜಿಸುವ ಸಂಘಟನೆಗಳು ಕಡ್ಡಾಯವಾಗಿ ಅನುಮತಿ ಪಡೆಯುವಂತೆ ಮೇಲಾಧಿಕಾರಿಗಳ ಆದೇಶವಿದೆ ಎಂದು ತಿಳಿಸಿದ್ದಾರೆ. ಕೆಲವು ಸೂಕ್ಷ್ಮ ವಿದ್ಯಮಾನಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಈ ನಿರ್ಣಯ ಕೈಗೊಂಡಿದೆ ಎನ್ನುವ ಮಾಹಿತಿ ಇದೆ.

ಆಯೋಜಕರಿಗೆ ತೊಂದರೆ
ಮಂಗಳೂರು ಪುರಭವನದಲ್ಲಿ ನೃತ್ಯ, ನಾಟಕ, ವಾರ್ಷಿಕೋತ್ಸವ, ಯಕ್ಷಗಾನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವುದೇ ಹೆಚ್ಚು. ಇದುವರೆಗೆ ಕಾರ್ಯಕ್ರಮ ಆಯೋಜಕರು ನಗರ ಪಾಲಿಕೆ ಕಚೇರಿಗೆ ಬಂದು ಪುರಭವನ ಕಾದಿರಿಸಿದರೆ ಸಾಕಿತ್ತು. ಆದರೆ ಇನ್ನು ಅರ್ಜಿ ಹಿಡಿದು ಪೊಲೀಸ್ ಠಾಣೆ, ಉಪ ವಿಭಾಗಾಧಿಕಾರಿ ಕಚೇರಿಗೆ ಅಲೆಯಬೇಕು. ಇದುವರೆಗೆ ನಿರಾಕ್ಷೇಪಣಾ ಪತ್ರ ಪಡೆಯುವ ಕ್ರಮ ಇರಲಿಲ್ಲ. ಈಗ ಏಕಾಏಕಿ ಇಂತಹ ಸೂಚನೆ ನೀಡಿದ ಕಾರಣ ತೊಂದರೆ ಅನುಭವಿಸುವ ಸ್ಥಿತಿ ನಿರ್ಮಾಣವಾಗಿದೆ ಎನ್ನುವುದು ಕಲಾ ಸಂಘಟಕರ ಅಳಲು.

ಮದುವೆಗಳಿಗೆ ಅನ್ವಯಿಸಲ್ಲ
ನಿರಾಕ್ಷೇಪಣಾ ಪತ್ರ ಪಡೆಯಬೇಕೆಂಬ ಆದೇಶ ಸಂಘಸಂಸ್ಥೆಗಳ ಕಾರ್ಯಕ್ರಮಗಳಿಗೆ ಸೀಮಿತ. ಮದುವೆ, ನಿಶ್ಚಿತಾರ್ಥ, ಸೀಮಂತದಂಥ ವೈಯಕ್ತಿಕ ಕಾರ್ಯಕ್ರಮಗಳು, ಶಾಲೆಗಳ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನಿರಾಕ್ಷೇಪಣಾ ಪತ್ರ ಪಡೆದ ಬಳಿಕ ಪುರಭವನ ಕಾಯ್ದಿರಿಸಲು ಅವಕಾಶ ನೀಡುವಂತೆ ಪೊಲೀಸ್ ಇಲಾಖೆಯಿಂದ ಸೂಚನೆ ಬಂದಿದೆ. ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯಗೊಳಿಸ ಬಹುದು. ಆದರೆ ಇದನ್ನು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವ ಸಂಘ, ಸಂಸ್ಥೆಗಳಿಗೆ ಅನ್ವಯ ಮಾಡುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ. ಪಾಲಿಕೆ ಆಯುಕ್ತರ ಗಮನಕ್ಕೆ ತಂದು ಒಂದೆರಡು ದಿನಗಳಲ್ಲಿ ನಿರ್ಣಯ ಕೈಗೊಳ್ಳಲಾಗುವುದು.
-ವಿಜಯಕುಮಾರ್, ಕಂದಾಯ ಅಧಿಕಾರಿ (ಪುರಭವನ ಉಸ್ತುವಾರಿ), ಮನಪಾ

ಪುರಭವನವನ್ನು ಒಂದು ಉದ್ದೇಶಕ್ಕೆ ಪಡೆದು ಬೇರೆಯೇ ಉದ್ದೇಶದ ಸಭೆ ನಡೆಸುವ ಬಗ್ಗೆ ಮಾಹಿತಿ ಇದೆ. ಇದು ಕೆಲವೊಮ್ಮೆ ಸಾಮರಸ್ಯ ಕೆಡಿಸುವ ಸಾಧ್ಯತೆಯೂ ಇದೆ. ಹಾಗಾಗಿ ಪೊಲೀಸ್ ಇಲಾಖೆಗೆ ಮಾಹಿತಿ ಇರಲಿ ಎನ್ನುವ ಕಾರಣಕ್ಕಾಗಿ ಈ ಸೂಚನೆ ನೀಡಲಾಗಿದೆ. ಯಾರಿಗೂ ತೊಂದರೆ ನೀಡುವ ಉದ್ದೇಶ ಇದರಲ್ಲಿ ಇಲ್ಲ.
ಡಾ.ಹರ್ಷ ಪಿ.ಎಸ್, ಮಂಗಳೂರು ನಗರ ಪೊಲೀಸ್ ಕಮಿಷನರ್

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....