18.5 C
Bangalore
Monday, December 16, 2019

ದಸರಾ ಜನತೆಯ ಹಬ್ಬ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ವಿಜಯವಾಣಿ ಸುದ್ದಿಜಾಲ ಮಂಗಳೂರು
ಮೈಸೂರಿನ ಮಹಾರಾಜರು ಪ್ರಾರಂಭಿಸಿದ ನಾಡಹಬ್ಬ ದಸರಾ ಒಂದೆಡೆಯಾದರೆ, ಇಲ್ಲಿ ನಾರಾಯಣಗುರು ಸ್ಥಾಪಿತ ಕ್ಷೇತ್ರದಲ್ಲಿ ಬೆಳೆದು ಬಂದಿರುವ ಜನತೆಯ ಹಬ್ಬ ಮಂಗಳೂರು ದಸರಾ ಕೂಡಾ ಅಷ್ಟೇ ಪ್ರಮುಖವಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕುದ್ರೋಳಿಯ ಶ್ರೀ ಗೋಕರ್ಣನಾಥೇಶ್ವರ ಕ್ಷೇತ್ರದಲ್ಲಿ ಪೂಜೆ, ಪ್ರಾರ್ಥನೆ ಸಲ್ಲಿಸಿದ ಬಳಿಕ ಭಾನುವಾರ ಸಾಯಂಕಾಲ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಬೇರೆ ಜಿಲ್ಲೆಗಳಿಂದ ಶಾಸಕರು ಬಂದು ದಸರಾ ಉತ್ಸವ ಆಚರಣೆಗೆ ಕೋಟಿ ಕೋಟಿ ರೂ. ಹಣ ಕೇಳುತ್ತಾರೆ, ಆದರೆ ಇಲ್ಲಿನ ವಿಶೇಷ ಎಂದರೆ, ಇದುವರೆಗೆ ಯಾರೂ ಬಂದು ಮಂಗಳೂರು ದಸರಾಕ್ಕೆ ಆರ್ಥಿಕ ನೆರವು ಕೇಳಿಲ್ಲ, ಕೋಟ್ಯಂತರ ರೂಪಾಯಿ ಖರ್ಚು ಮಾಡಿ ನಗರವನ್ನೇ ಶೃಂಗಾರ ಮಾಡಿ ಉತ್ತಮ ರೀತಿಯಲ್ಲಿ ಸಂಘಟಿಸುತ್ತಿದ್ದೀರಿ ಎಂದು ಶ್ಲಾಘಿಸಿದರು.
ಒಂದೆಡೆ ರಾಜ್ಯ ಬೆಳವಣಿಗೆ ಸಾಧಿಸುತ್ತಾ ಇದೆ, ಆದರೆ ಇನ್ನೊಂದೆಡೆ ಯೋಜನೆಗಳ ಹೆಸರಿನಲ್ಲಿ ನಾವು ತಪ್ಪು ಮಾಡುತ್ತಾ ಪರಿಸರದ ಮೇಲೆ ಆಘಾತ ಉಂಟುಮಾಡುತ್ತಿದ್ದೇವೆ ಎಂದು ವಿಷಾದದ ಮಾತುಗಳನ್ನೂ ಆಡಿದ ಸಿಎಂ ನಾವೆಷ್ಟೇ ವೈಜ್ಞಾನಿಕವಾಗಿ ಬೆಳೆದರೂ ಅಂತಿಮವಾಗಿ ದೇವರೇ ನಮಗೆ ರಕ್ಷಣೆ ಒದಗಿಸಬೇಕು ಎಂದರು.
ಕುದ್ರೋಳಿ ಕ್ಷೇತ್ರ ಅಭಿವೃದ್ಧಿಯ ರೂವಾರಿ ಬಿ.ಜನಾರ್ದನ ಪೂಜಾರಿ, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ್, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಕ್ ಉಳಿಪಾಡಿ, ಬಿಲ್ಲವ ಮಹಾಮಂಡಲದ ಅಧ್ಯಕ್ಷ ಜಯ ಸಿ.ಸುವರ್ಣ, ವಿಧಾನ ಪರಿಷತ್ ಪ್ರತಿಪಕ್ಷ ಕೋಟ ಶ್ರೀನಿವಾಸ ಪೂಜಾರಿ, ಸದಸ್ಯರಾದ ಐವನ್ ಡಿ’ಸೋಜ, ಎಸ್.ಎಲ್.ಭೋಜೆಗೌಡ, ಹರೀಶ್ ಕುಮಾರ್, ಕುದ್ರೋಳಿ ದೇವಸ್ಥಾನ ಅಧ್ಯಕ್ಷರಾದ ಎಚ್.ಎಸ್.ಸಾಯಿರಾಂ, ಉದ್ಯಮಿ ಊರ್ಮಿಳ ರಮೇಶ್ ಕುಮಾರ್, ಮಂಗಳೂರು ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್, ಜಿಲ್ಲಾ ಎಸ್ಪಿ ಡಾ.ರವಿಕಾಂತೇಗೌಡ ಮುಂತಾದವರು ಉಪಸ್ಥಿತರಿದ್ದರು.
ದೇವಸ್ಥಾನ ಕ್ಷೇತ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್.ಸ್ವಾಗತಿಸಿದರು. ಪತ್ರಕರ್ತ ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಹರಿಕೃಷ್ಣ ಬಂಟ್ವಾಳ ವಂದಿಸಿದರು. ಯುವ ಕಲಾವಿದೆ ಶಬರಿ ಗಾಣಿಗ ‘ಗ್ಲೋ ಟೆಕ್ನಿಕ್’ ಮೂಲಕ ರಚಿಸಿದ ಸಿಎಂ ಕುಮಾರಸ್ವಾಮಿ ಅವರ ಚಿತ್ರ ಹಸ್ತಾಂತರಿಸಿದರು.

ಪ್ರಗತಿಗೆ ಕೈಜೋಡಿಸಿ:  ದಕ್ಷಿಣ ಕನ್ನಡದಲ್ಲಿ ಶ್ರೀಮಂತಿಕೆಯ ಜನರೂ ಇದ್ದಾರೆ, ಎರಡು ಹೊತ್ತಿನ ಊಟಕ್ಕೆ ಕಷ್ಟಪಡುವ ಕುಟುಂಬಗಳೂ ಇರುವುದು ನನಗೆ ಗೊತ್ತಿದೆ. ಎಂಡೋಸಲ್ಫಾನ್ ಪೀಡಿತ ಕುಟುಂಬಗಳ ಪರಿಸ್ಥಿತಿ ಕೆಟ್ಟದಾಗಿದೆ, ಹಾಗಾಗಿ ನಾವು ಮಾಡಬೇಕಾದ ಕೆಲಸ ಸಾಕಷ್ಟಿದೆ, ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಜನಪ್ರತಿನಿಧಿಗಳೂ ತಮ್ಮ ಭಿನ್ನಾಭಿಪ್ರಾಯ ಬಿಟ್ಟು ಸೋದರರಂತೆ ಕೈಜೋಡಿಸಬೇಕು ಎಂದು ಕುಮಾರಸ್ವಾಮಿ ವಿನಂತಿ ಮಾಡಿಕೊಂಡರು.

ಸಿಎಂಗಾಗಿ ಮಳೆಯಲ್ಲೇ ನೆನೆದ ಪೂಜಾರಿ:  ಸಾಯಂಕಾಲ 6 ಗಂಟೆಗೆ ಕುದ್ರೋಳಿಯಲ್ಲಿ ದಸರಾ ಉತ್ಸವ ಉದ್ಘಾಟನೆಗೆ ಸಿಎಂ ಕುಮಾರಸ್ವಾಮಿ ಆಗಮಿಸಬೇಕಿತ್ತು. ದೇವಸ್ಥಾನದ ದ್ವಾರದ ಬಳಿ ಜನಾರ್ದನ ಪೂಜಾರಿ ಸಿಎಂ ಅವರನ್ನು ಎದುರುಗೊಳ್ಳಲು ಕಾಯುತ್ತಿದ್ದರು. ಆದರೆ ಆ ವೇಳೆಗೆ ಮಳೆ ಜೋರಾಗಿ ಸುರಿಯಲಾರಂಭಿಸಿತು. ಸಿಎಂ ಬರುವಾಗ ತಡವಾಗುತ್ತದೆ, ಒಳಗೆ ಕುಳಿತುಕೊಳ್ಳಿ ಎಂದು ಸ್ವಯಂಸೇವಕರು ಕೇಳಿಕೊಂಡರೂ ಪೂಜಾರಿ ಕೇಳದೆ, ಸಿಎಂ ಬಂದ ಬಳಿಕವೇ ಬರುತ್ತೇನೆ ಎಂದು ಮಳೆಯಲ್ಲೇ ಕುರ್ಚಿಯಲ್ಲಿ ಕುಳಿತುಬಿಟ್ಟರು.
ಇದನ್ನು ತಮ್ಮ ಭಾಷಣದಲ್ಲೂ ಪ್ರಸ್ತಾಪಿಸಿದ ಸಿಎಂ, ಪೂಜಾರಿಯವರು ದೇಶ ಕಂಡ ಪ್ರಾಮಾಣಿಕ, ಸರಳ ರಾಜಕಾರಣಿ, ನನಗಾಗಿ ಅವರು ಮಳೆಯಲ್ಲಿ ಕುಳಿತದ್ದು ನೋವು ತಂದಿತು. ಅವರು ಕೋಪಿಷ್ಠ, ಆದರೆ ಹೃದಯದಲ್ಲಿ ಕಲ್ಮಶವಿಲ್ಲ, ಅವರು ಮನಸು ಮಾಡಿದರೆ ಕೋಟಿ ಕೋಟಿ ರೂ. ಗಳಿಸಬಹುದಿತ್ತು, ಆದರೆ ಸಮಾಜ ಬದಲಾವಣೆಗೆ ಬದುಕು ಮುಡಿಪಾಗಿಟ್ಟರು, ನಿಮ್ಮಂಥವರು ನಮಗೆ ಮಾದರಿ ಎಂದರು.

ರಾಷ್ಟ್ರಪತಿಯಾಗ್ತೀರಿ ಎಂದ ಪೂಜಾರಿ:  ಕುಮಾರಸ್ವಾಮಿಯವರಲ್ಲಿ ವಿನಯ ಇದೆ, ದುರಹಂಕಾರ ಇಲ್ಲ, ಈ ಗುಣ ಅವರ ತಂದೆ ಎಚ್.ಡಿ.ದೇವೇಗೌಡರಿಂದ ಬಂದಿದೆ. ಕುಮಾರಸ್ವಾಮಿಯವರೇ ನೀವು ಬಹಳ ಎತ್ತರಕ್ಕೆ ಹೋಗ್ತೀರಿ, ಆಗ ನಾನು ಇರಲಿಕ್ಕಿಲ್ಲ. ಪೂಜಾರಿ ದೇವರ ಸಮಕ್ಷಮ ಈ ಮಾತು ಹೇಳಿದ್ದರೆಂದು ನೆನಪಿಸಿಕೊಳ್ಳುವಿರಿ ಎಂದು ಜನಾರ್ದನ ಪೂಜಾರಿ ನುಡಿದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...