25.7 C
Bangalore
Sunday, December 15, 2019

ಮಂಗಳೂರು ದಸರಾಕ್ಕೆ ದಿನಗಣನೆ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹರೀಶ್ ಮೋಟುಕಾನ ಮಂಗಳೂರು
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಂಪ್ರತಿ ಸಂಭ್ರಮ, ಸಡಗರದಿಂದ ನಡೆಯುವ ವೈಭವದ ಮಂಗಳೂರು ದಸರಾಕ್ಕೆ ದಿನಗಣನೆ ಆರಂಭಗೊಂಡಿದೆ. ಇದಕ್ಕಾಗಿ ಮಂಗಳೂರು ನಗರ ಭರದಿಂದ ಶೃಂಗಾರಗೊಳ್ಳುತ್ತಿದೆ.

ಶ್ರೀ ಕ್ಷೇತ್ರದ ನವೀಕರಣದ ರೂವಾರಿ ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಾಲಯದ ನವರಾತ್ರಿ ಉತ್ಸವ ಮಂಗಳೂರು ದಸರಾ ಹೆಸರಿನಲ್ಲಿ ಪ್ರತಿ ವರ್ಷ ನಡೆಯುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿಯನ್ನೂ ಹೊಂದಿದೆ. ಈ ಬಾರಿ ಸೆ.29ರಿಂದ ಅ.9ರ ತನಕ ನಡೆಯಲಿದೆ.

ರಸ್ತೆಯ ಇಕ್ಕೆಲಗಳು ಶುಚಿಯಾಗುತ್ತಿವೆ. ಎಲ್ಲೆಡೆ ವೈವಿಧ್ಯಮಯ, ವಿವಿಧ ವಿನ್ಯಾಸದ ಬಲ್ಬ್‌ಗಳನ್ನು ಜೋಡಿಸಲಾಗುತ್ತಿದೆ. ಮರಗಳನ್ನೂ ಬಳ್ಳಿಯಂತೆ ಹಬ್ಬಿಕೊಂಡ ಬಲ್ಬ್‌ಗಳ ಮಾಲೆ, ರಸ್ತೆಯಲ್ಲಿ ಕಂಗೊಳಿಸುವ ದೊಡ್ಡ ಬಲ್ಬ್‌ಗಳ ಸರಮಾಲೆ, ಇಕ್ಕೆಲಗಳಲ್ಲಿ ಅಲ್ಲಲ್ಲಿ ಮನಸ್ಸಿಗೆ ಮುದ ನೀಡುವ ಬಲ್ಬ್‌ಗಳ ಜೋಡಣೆ. ಎಲ್ಲವೂ ನವರಾತ್ರಿಯೂ ಕಂಗೊಳಿಸುವ ಬೆಳಕಿನ ಚಿತ್ತಾರಗಳನ್ನು ನೋಡಲು ಕಾತರಿಸುವಂತಾಗಿದೆ.
ದಸರಾ ಮೆರವಣಿಗೆ ವೈಭವದಿಂದ 65ಕ್ಕೂ ಅಧಿಕ ಸ್ತಬ್ಧಚಿತ್ರಗಳೊಂದಿಗೆ ಇರುತ್ತದೆ. ದೇವಸ್ಥಾನ ಬಣ್ಣ ಹಾಗೂ ವಿದ್ಯುದ್ದೀಪಗಳಿಂದ ಆಕರ್ಷಕವಾಗಿ ಕಂಗೊಳಿಸುತ್ತದೆ. ಮಂಗಳೂರು ದಸರಾ ವಿದ್ಯುತ್ ದೀಪಾಲಂಕಾರದ ವೀಕ್ಷಣೆ ನಯನ ಮನೋಹರ. ದೇಶ-ವಿದೇಶದ ಲಕ್ಷಾಂತರ ಮಂದಿ ಪ್ರತಿ ವರ್ಷ ಮಂಗಳೂರು ದಸರಾ ವೀಕ್ಷಿಸಿ ಸಂಭ್ರಮಿಸುತ್ತಾರೆ.

9 ಕಿ.ಮೀ. 25 ಲಕ್ಷ ಬಲ್ಬ್
ದೇವಸ್ಥಾನ ಮತ್ತು ಮಂಗಳೂರು ದಸರಾ ಮೆರವಣಿಗೆ ಸಾಗುವ 9 ಕಿ.ಮೀ.ರಾಜಬೀದಿಗಳಲ್ಲಿ 25 ಲಕ್ಷಕ್ಕಿಂತಲೂ ಅಧಿಕ ವಿದ್ಯುತ್ ದೀಪಗಳನ್ನು ಅಳವಡಿಸಲಾಗುತ್ತದೆ. ಲೈಟಿಂಗ್ಸ್ ವರ್ಷದಿಂದ ವರ್ಷಕ್ಕೆ ವಿನ್ಯಾಸದಲ್ಲಿ ಬದಲಾವಣೆ ಮಾಡಲಾಗುತ್ತದೆ. ಇದು ಮಂಗಳೂರು ದಸರಾ ವಿದ್ಯುತ್ ದೀಪಾಲಂಕಾರದ ವಿಶೇಷತೆ. ಬೆಂಗಳೂರು, ಮೈಸೂರು, ಮಂಗಳೂರಿನ ಕಂಟ್ರಾಕ್ಟರ್‌ಗಳು ವಿದ್ಯುತ್ ದೀಪಾಲಂಕಾರದಲ್ಲಿ ತೊಡಗಿದ್ದಾರೆ.

ನವ ದುರ್ಗೆಯರ ವಿಗ್ರಹ ನಿರ್ಮಾಣ
ಮಂಗಳೂರು ದಸರಾಕ್ಕೆ ಮುನ್ನುಡಿಯಾಗಿ ಶ್ರೀ ಕ್ಷೇತ್ರದಲ್ಲಿ ಶಾರದೆ ಹಾಗೂ ನವ ದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಶ್ರೀ ಶಾರದಾ ಮಾತೆಯೊಂದಿಗೆ ನವದುರ್ಗೆಯರ ಆರಾಧನೆ ಇಲ್ಲಿನ ವಿಶೇಷ. ಶಾರದಾ ಮಾತೆ, ಆದಿಶಕ್ತಿಯೊಂದಿಗೆ ಸ್ಕಂದ ಮಾತೆ, ಕಾತ್ಯಾಯಿನಿ, ಮಹಾಕಾಳಿ, ಮಹಾ ಗೌರಿ, ಸಿದ್ದಿದಾತ್ರಿ, ಶೈಲ ಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ ದೇವಿಯರನ್ನು ಹಾಗೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿ ಆರಾಧಿಸಲಾಗುತ್ತದೆ. ಕಲ್ಕತ್ತಾದ ಕಲಾವಿದರು ಇಲ್ಲಿ ಬಂದು ಬಹುಆಕರ್ಷಕವಾಗಿ ಈ ವಿಗ್ರಹಗಳನ್ನು ರಚಿಸುತ್ತಾರೆ.

ನಗರದ ಎಲ್ಲೆಡೆ ದೀಪಾಲಂಕಾರ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಸಹಿತ ನಗರದ ಎಲ್ಲೆಡೆ ವಿದ್ಯುತ್ ದೀಪಾಲಂಕಾರ ಮಾಡಲಾಗುತ್ತಿದೆ. ವಿವಿಧ ಮಾದರಿಯ ವಿನ್ಯಾಸದ ಮಿನಿಯೇಚರ್‌ಗಳಿಂದ ಅಲಂಕೃತಗೊಂಡ ದೇಗುಲದ ಗೋಪುರ, ಪೌಳಿಗಳನ್ನು ರಾತ್ರಿ ವೀಕ್ಷಿಸುವುದು ಆನಂದಮಯ. ಮೆರವಣಿಗೆ ಸಾಗಿ ಬರುವ ಇಕ್ಕೆಲಗಳಲ್ಲಿರುವ ಕಟ್ಟಡದವರು ತಮ್ಮ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳ ಅಲಂಕಾರ ಮಾಡಲಾಗುತ್ತದೆ.

ಮಂಗಳೂರು ದಸರಾ ಈ ಬಾರಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ದೇವಾಲಯ ಹಾಗೂ ಮೆರವಣಿಗೆ ಸಾಗುವ ರಸ್ತೆಯಲ್ಲಿ ಸಿದ್ಧತೆ ಭ ರದಿಂದ ನಡೆಯುತ್ತಿದೆ. ಭಕ್ತರ ಸಲಹೆ ಮೇರೆಗೆ ಈ ಬಾರಿ ಮೆರವಣಿಗೆಯ ಸ್ವರೂಪದಲ್ಲಿ ಕೆಲ ಬದಲಾವಣೆ ಮಾಡಲಾಗುತ್ತದೆ.
– ಆರ್.ಪದ್ಮರಾಜ್, ಕೋಶಾಧಿಕಾರಿ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...