ಆರೋಗ್ಯ ಸುರಕ್ಷಾಧಿಕಾರಿಗಳ ಸೇವೆ ಮಾದರಿ ಸಂಘದ ಸಭೆಯಲ್ಲಿ ಡಿಎಚ್‌ಒ ಡಾ.ತಿಮ್ಮಯ್ಯ ಶ್ಲಾಘನೆ

mng--29 sep Health suraksha
Published on

ಯಾವುದೇ ಮೂಲಭೂತ ಸೌಕರ್ಯಗಳು ಇರದ ಹಿಂದಿನ ದಿನಗಳಲ್ಲಿ ಆರೋಗ್ಯ ಸುರಕ್ಷಾಧಿಕಾರಿಗಳು ಗರ್ಭಿಣಿ ಮಹಿಳೆಯರ ಮನೆಗೆ ತೆರಳಿ ಹೆರಿಗೆ ಮಾಡಿಸುತ್ತಿದ್ದರು. ಅವರ ಸೇವೆ ಮಾದರಿಯಾಗಿದ್ದು, ಅವರ ಅನುಭವ ಇಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಶ್ಲಾಘಿಸಿದರು.


ನಗರದ ನಂದಿನಿ ಸಭಾಂಗಣದಲ್ಲಿ ಶನಿವಾರ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷರಾದ ಡಾ.ದುರ್ಗಾಪ್ರಸಾದ ಅವರು ಮಾತನಾಡಿ ಹಳ್ಳಿಯಲ್ಲಿ ಕಾರ್ಯನಿರ್ವಹಿಸುವ ಎಎನ್‌ಎಂ ನರ್ಸ್ ಗಳ ಸೇವೆಯನ್ನು ನಾವೆಲ್ಲರೂ ಪ್ರತಿ ಸಂದರ್ಭದಲ್ಲೂ ನೆನಪಿಸಿಕೊಳ್ಳಬೇಕು. ತಮ್ಮ ಕುಟುಂಬಕ್ಕಿಂತ ಹೆಚ್ಚಾಗಿ,ಊರಿನ ಜನರ ಯೋಗಕ್ಷೇಮವನ್ನು ನೋಡಿ ಕೊಳ್ಳುವ ಇವರು ನಿಜವಾದ ಅರ್ಥದಲ್ಲಿ ತಾಯಂದಿರು ಆಗಿದ್ದಾರೆ ಎಂದರು.


ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಚಂದ್ರಿಕಾ ಧಮ್ಮಳ್ಳಿ ಅವರು ಮಾತನಾಡಿ, ಆರೋಗ್ಯ ಸುರಕ್ಷಾಧಿಕಾರಿಗಳು ಅನುಭವಿಸುತ್ತಿರುವ ಸಮಸ್ಯೆಗಳು ಮತ್ತು ಬೇಡಿಕೆ ಬಗ್ಗೆ ಈಗಾಗಲೇ ಸರ್ಕಾರದ ಗಮನಕ್ಕೆ ತಂದು ಪರಿಹಾರ ಕಂಡು ಕೊಳ್ಳಲು ಪ್ರಯತ್ನ ಮಾಡಲಾಗಿದೆ. ಜೊತೆಗೆ ರಾಜ್ಯ ಸರ್ಕಾರ ಜಾರಿಗೆ ತರುವ ಆರೋಗ್ಯ ಇಲಾಖೆಯ ಎಲ್ಲಾ ಕಾರ್ಯಕ್ರಮಗಳನ್ನು ಜನರಿಗೆ ಮನೆ ಮನೆ ಮುಟ್ಟಿಸುವ ಕಾರ್ಯವನ್ನು ನಿಷ್ಪಕ್ಷಪಾತವಾಗಿ ಮಾಡುತ್ತಿದ್ದಾರೆ ಎಂದರು.


ಮಂಗಳೂರಿನ ಟಿ.ಹೆಚ್.ಓ ಡಾ.ಸುಜಯ್ ,ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಗಣೇಶ್ ರಾವ್, ನಿವೃತ್ತ ಮಾಜಿ ಜಿಲ್ಲಾಧ್ಯಕ್ಷ ಪಿ.ಕೆ. ಕೃಷ್ಣ ಡಿಹೆಚ್‌ಈಓ ಜ್ಯೋತಿ, ಕಾರ್ಯಕ್ರಮ ಆಯೋಜಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷೆ ಶಾಂತಮ್ಮ ಹಾಗೂ ಕಾರ್ಯದರ್ಶಿ ದೀಪಾ, ಖಜಾಂಚಿ ಶಾಲಿನಿ ಹಾಗೂ ಗೌರವಾಧ್ಯಕ್ಷರಾದ ಇಂದಿರಾ ಮೊದಲಾದವರಿದ್ದರು.
ಈ ಸಂದರ್ಭದಲ್ಲಿ ವಯೋ ನಿವೃತ್ತಿ ಹೊಂದಿದವರು ಮತ್ತು ವಿಶೇಷ ಸಾಧಕರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net