More

    ಮಂಗಳೂರು ದಸರಾ ಮಾದರಿ ಉತ್ಸವ, ಕುದ್ರೋಳಿಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ ಬಿಷಪ್ ಹರ್ಷ

    ಮಂಗಳೂರು: ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂಥ ಮಹಾಪುರುಷರ ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ, ಮತ, ಭೇದವಿಲ್ಲದೆ ನಡೆಯುತ್ತಿರುವ ಉತ್ಸವ ಮಾದರಿಯಾಗಿದೆ ಎಂದು ಸಿರೋ-ಮಲಬಾರ್ ಬೆಳ್ತಂಗಡಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕುಝಿ ಹೇಳಿದರು.

    ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದಲ್ಲಿ ಸೋಮವಾರ ಪಾಲ್ಗೊಂಡು ದೇವರ ದರ್ಶನ ಪಡೆದು ಕ್ಷೇತ್ರದ ಕಾರ್ಯಕ್ರಮಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದರು.

    ಕುದ್ರೋಳಿ ಕ್ಷೇತ್ರದ ಪರ ಅಧ್ಯಕ್ಷ ಎಚ್.ಎಸ್.ಸಾಯಿರಾಂ, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್., ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಸದಸ್ಯರಾದ ರಾಧಾಕೃಷ್ಣ, ಮುಂಬೈನ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಚೇರ್ಮನ್ ಸೂರ್ಯಕಾಂತ್ ಜೆ.ಸುವರ್ಣ ಲಾರೆನ್ಸ್ ಮುಕುಝಿ ಅವರನ್ನು ಸ್ವಾಗತಿಸಿದರು.

    ಕಂಕನಾಡಿ ಆಲ್ಫೋನ್ಸ್ ಚರ್ಚ್‌ನ ಧರ್ಮಗುರು ಮಾಣಿ, ಬೆಳ್ತಂಗಡಿ ಧರ್ಮಪ್ರಾಂತ ಪಿಆರ್‌ಒ ಸೆಬಾಸ್ಟಿಯನ್ ಕೆ.ವಿ ಜತೆಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts