ನಾಪತ್ತೆಯಾಗಿದ್ದ ಫರಂಗಿಪೇಟೆಯು ದಿಗಂತ್ ಉಡುಪಿಯಲ್ಲಿ ಪತ್ತೆ

mng---5 march Diganth
Published on

ಮಂಗಳೂರು: ರಾಜ್ಯದಲ್ಲೇ ಸಂಚಲನ ಮೂಡಿಸಿದ್ದ ಫರಂಗಿಪೇಟೆಯ ಕಿದೆಬೆಟ್ಟು ಪದ್ಮನಾಭ ಮಡಿವಾಳರ ಪುತ್ರ ದಿಗಂತ್ ಕೊನೆಗೂ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.

ವಿಧಾನಸಭೆಯಲ್ಲೂ ಪ್ರಕರಣ ಪ್ರತಿಧ್ವನಿಸಿದ್ದು, ಶೀಘ್ರ ಪತ್ತೆಗೆ ಆಗ್ರಹ ವ್ಯಕ್ತವಾಗಿತ್ತು. ಪ್ರಕರಣ ಭೇದಿಸಲು ನುರಿತ ಪೊಲೀಸರ 7 ತಂಡಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದರು. ಆತ ಮೊಬೈಲ್ ಬಿಟ್ಟು ಯಾವುದೇ ಸುಳಿವು ನೀಡದೆ ಹೋದ ಕಾರಣ ಪೊಲೀಸರಿಗೆ ಆತನ ಪತ್ತೆ ಸವಾಲಾಗಿ ಪರಿಣಮಿಸಿತ್ತು.

ಪಶ್ಚಿಮ ವಲಯ ಐ.ಜಿ ಅಮೀತ್ ಸಿಂಗ್ ಅವರ ಮಾರ್ಗದರ್ಶನದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಎಸ್ಪಿ ಯತೀಶ್ ನೇತೃತ್ವದಲ್ಲಿ ಮತ್ತಷ್ಟು ತನಿಖೆ ತೀವ್ರಗೊಳಿಸಲಾಗಿತ್ತು. ಸಿಸಿ ಕ್ಯಾಮರಾಗಳ ಪರಿಶೀಲನೆ, ಆತನ ಮೊಬೈಲ್ ದಾಖಲೆ ಪರಿಶೀಲನೆ, ಆತನ ಸ್ನೇಹಿತರಿಂದ ಲಭಿಸಿದ ಮಾಹಿತಿ ಮೊದಲಾದುವುಗಳನ್ನು ಆಧರಿಸಿ ಪೊಲೀಸರು ತನಿಖೆ ನಡೆಸಿದ್ದರು. ಈ ಹಿಂದೆ ಬಂಟ್ವಾಳ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಪೊಲೀಸರನ್ನು ಈ ಪ್ರಕರಣದ ತನಿಖೆಗೆ ಕರೆಸಿಕೊಳ್ಳಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net