ಶಾಸಕ ಭರತ್ ಶೆಟ್ಟಿ ಕಾಂಗ್ರೆಸ್ ಕಾರ್ಯಕರ್ತನ ಮೈ ಮುಟ್ಟಿ ನೋಡಲಿ ಮಾಜಿ ಸಚಿವ ಬಿ.ರಮಾನಾಥ ರೈ ಸವಾಲು

BRamanathRaiVb_vb_17
Published on

ಮಂಗಳೂರು: ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಗೆ ಪ್ರಚೋದನಾಕಾರಿ ಹಾಗೂ ಅವಹೇಳನಕಾರಿಯಾಗಿ ಮಾತನಾಡಿರುವ ಶಾಸಕ ಡಾ.ಭರತ್ ಶೆಟ್ಟಿ ಗಂಡು ಮಗ ಆಗಿದ್ದರೆ ಸಾಮಾನ್ಯ ಕಾರ್ಯಕರ್ತನ ಮೈ ಮುಟ್ಟಿ ನೋಡಲಿ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಸವಾಲು ಹಾಕಿದ್ದಾರೆ.


ದಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕ್ಷೇಪಾರ್ಹ ಹೇಳಿಕೆ ನೀಡಿರುವ ಶಾಸಕ ಭರತ್ ಶೆಟ್ಟಿ ವಿರುದ್ಧ ಸರ್ಕಾರ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದರು.


ಸಂಸತ್ತಿನ ವಿಪಕ್ಷ ನಾಯಕರಾಗಿ ಅಧಿಕೃತವಾಗಿ ಆಯ್ಕೆಯಾದ ರಾಹುಲ್ ದೇಶಕ್ಕೆ ಪ್ರಾಣ ಕೊಟ್ಟ ನೆಹರೂ, ಇಂದಿರಾಗಾಂಧಿಯವರ ಕುಡಿ. ರಾಹುಲ್ ಹೇಳಿಕೆಯನ್ನು ಕೆಟ್ಟದಾಗಿ ಪ್ರತಿಬಿಂಬಿಸುವ ಕೆಲಸ ಬಿಜೆಪಿ ಮಾಡುತ್ತಿದೆ.


ಡಾ.ಭರತ್ ಶಾಸಕನಾಗಲು ನಾಲಾಯಕ್, ಯೋಗ್ಯತೆ ಇಲ್ಲದ ಮನುಷ್ಯ. ಬಿಜೆಪಿ ವಚನ ಭ್ರಷ್ಟ ಎಂದು ಕುಮಾರ ಸ್ವಾಮಿ ಅಂದು ಹೇಳಿದಾಗ ಭರತ್ ಶೆಟ್ಟಿ ಜನತಾ ದಳ ಪಕ್ಷದಲ್ಲಿದ್ದರು. ಅಮರನಾಥ್ ಶೆಟ್ಟಿ ಅವರ ಕೃಪಾ ಕಟಾಕ್ಷದಿಂದ ರಾಜಕೀಯದಲ್ಲಿ ಮೇಲೆ ಬಂದು ಅವರಿಗೆ ಕೈ ಕೊಟ್ಟಿದ್ದಾರೆ. ಭರತ್ ಶೆಟ್ಟಿ, ರಾಹುಲ್ ಕಪಾಲಕ್ಕೆ ಹೊಡೆಯುವ ಹೇಳಿಕೆ ಮೂಲಕ ಬಿಜೆಪಿಯ ಹಿಂಸೆಯನ್ನು ಪರೋಕ್ಷವಾಗಿ ಒಪ್ಪಿಕೊಂಡಂತೆ. ಈ ಹಿಂಸೆಯ ಬಿಜೆಪಿಯ ಪ್ರವೃತ್ತಿಯನ್ನೇ ರಾಹುಲ್ ವಿರೋಧಿಸಿ ಹೇಳಿಕೆ ನೀಡಿದ್ದು ಎಂದು ರಮಾನಾಥ ರೈ ಹೇಳಿದರು.


ಬೆೆಳ್ತಂಗಡಿಯಲ್ಲಿ ಶಾಸಕ ಅಧಿಕಾರಿ ಮೇಲ್ ಕೈ ಮಾಡಲು ಹೋಗಿದ್ದಾರೆ. ಬಿಜೆಪಿ ಅಧಿಕಾರ ಕಳೆದುಕೊಂಡು ನೀರಿನಿಂದ ತೆಗೆದ ಮೀನಿನಂತೆ ಆಗಿದ್ದಾರೆ. ಹಿಂಸೆಗೆ ಪ್ರಚೋದನೆ ನೀಡುವ ಕೆಲಸ ಬಿಜೆಪಿಯವರು ಮಾಡುತ್ತಿದ್ದಾರೆ. ಸಮುದಾಯ ಮಧ್ಯ ವಿಭಜನೆ ಮಾಡಿ ಮತ ಗಳಿಸುವ ಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.


ರಾಹುಲ್ ಅವರನ್ನು ಹುಚ್ಚ ಎಂದು ಹೇಳಿದ್ದು, ಆ ಹುಚ್ಚ ಯಾರು ಎಂದು ಅವರ ನಾಯಕರ ಕಟೌಟ್ ನಲ್ಲಿ ಅವರ ವೇಷ ಭೂಷಣ ನೋಡಿದಾಗ ತಿಳಿಯುತ್ತೆ. ನಮ್ಮನ್ನು ಕೂಡಾ ಹಿಂದೂವಿಗೆ ಹುಟ್ಟಿದವರು ಅಲ್ಲ, ನಮ್ಮ ತಾಯಿ ಬಗ್ಗೆಯೂ ಕೆಟ್ಟದಾಗಿ ಆರೋಪ ಮಾಡುವ ಬಿಜೆಪಿಗರು ನಮ್ಮ ಹುಟ್ಟನ್ನು ಪ್ರಶ್ನೆ ಮಾಡುತ್ತಾರೆ. ಇದು ಜನರನ್ನು ವಿಭಜಿಸಿ ಮತ ಗಳಿಸುವ ಕೀಳು ಮಟ್ಟದ ರಾಜಕೀಯ ಎಂದವರು ಹೇಳಿದರು.


ರಾಜ್ಯದಲ್ಲಿ ಡೆಂೆ ಹಾವಳಿ ಇದೆ. ಸರ್ಕಾರ ಅದಕ್ಕಾಗಿ ಸೂಕ್ತ ಕ್ರಮ ಕೈ ಗೊಳ್ಳುತ್ತಿದೆ. ಈ ಬಗ್ಗೆ ಬಿಜೆಪಿ ಸುಮ್ಮನೆ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ. ಕೊರೊನಾ ಸಂಧರ್ಭ ಅಂದಿನ ಆರೋಗ್ಯ ಸಚಿವ ಡಾ.ಸುಧಾಕರ್ ಎಷ್ಟು ಕೋಟಿ ಕೋಟಿ ರೂ. ಲೂಟಿ ಹೊಡೆದಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ. ಬೆಲೆ ಏರಿಕೆ ಬಗ್ಗೆ ಮಾತನಾಡುವ ಬಿಜೆಪಿಗರಿಗೆ ದಿನ ಬಳಕೆ ವಸ್ತು ಗಳ ಬೆಲೆ ಏರಿಕೆ ಆಗಿದ್ದು ಈಗ ಗೊತ್ತಾಗಿದ್ದೇ ಎಂದು ರಮಾನಾಥ ರೈ ಪ್ರಶ್ನಿಸಿದರು.


ಮುಖಂಡರಾದ ಶಶಿಧರ್ ಹೆಗ್ಡೆ, ಶುಭೋದಯ ಆಳ್ವ, ನವೀನ್ ಡಿಸೋಜ, ಎಂ.ಜಿ. ಹೆಗಡೆ. ಅಶ್ರಫ್, ಪ್ರಕಾಶ್ ಸಾಲಿಯಾನ್, ಅಪ್ಪಿ, ರಮಾನಂದ ಪೂಜಾರಿ, ನೀರಜ್ ಪಾಲ್, ಚಿತ್ತರಂಜನ್ ಶೆಟ್ಟಿ, ಸಲೀಂ, ಸುರೇಂದ್ರ ಕಾಂಬ್ಳಿ, ಇಮ್ರಾನ್, ಸವಾದ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net