

ಮಂಗಳೂರು: ಎರಡು ಪ್ರತ್ಯೇಕ ಪ್ರಕರಣದಲ್ಲಿ ಗಾಂಜಾ ಸೇವನೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಸೆಂಟ್ರಲ್ ರೈಲ್ವೇ ಸ್ಟೇಷನ್ ಬಳಿ ಅಮಲು ಪದಾರ್ಥ ಸೇವನೆಯ ನಶೆಯಲ್ಲಿದ್ದ ಕೇರಳದ ಮಲಪ್ಪುರ ಜಿಲ್ಲೆ ಮೊಹಮ್ಮದ್ ಸಾಲಿ (20) ಎಂಬಾತನನ್ನು ಸೆನ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ತಾನು ಗಾಂಜಾ ಸೇವನೆ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದು, ವೈದ್ಯಕೀಯ ತಪಾಸಣೆಗೆ ವೇಳೆ ಮಾದಕ ವಸ್ತು ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಕಾವೂರು ಪರಿಸರದಲ್ಲಿ ಅಮಲು ಪದಾರ್ಥ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗುವಂತೆ ವರ್ತಿಸುತ್ತಿದ್ದ ಕೆಪಿಟಿ ಬಳಿಯ ವ್ಯಾಸನಗರ ನಿವಾಸಿ ವಿಶಾಲ್ ನಾಯ್ಕ (24) ಎಂಬಾತನನ್ನು ಕಾವೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ದೃಢಪಟ್ಟಿದೆ. ಆತನ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.