More

    ಮಂಗಳೂರು ಗೋಲಿಬಾರ್ ಪ್ರಕರಣ, 4 ಚಾರ್ಜ್‌ಶೀಟ್ ಸಲ್ಲಿಕೆ

    ಮಂಗಳೂರು: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಗೋಲಿಬಾರ್ ನಡೆದು ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ನಾಲ್ಕು ಆರೋಪ ಪಟ್ಟಿಗಳನ್ನು ಮಂಗಳೂರು ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.
    ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ, ಬಂದರು ಪೊಲೀಸ್ ಠಾಣೆಯಲ್ಲಿ 13 ಪ್ರಕರಣ ದಾಖಲಾಗಿತ್ತು. ಮುಖ್ಯ ಪ್ರಕರಣ ಸೇರಿದಂತೆ ಮೂರು ಪ್ರಕರಣಗಳನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು. ಇವುಗಳಲ್ಲಿ ಒಂದು ಪ್ರಕರಣದ ಆರೋಪ ಪಟ್ಟಿಯನ್ನು ಸಿಐಡಿಯು ಮಾರ್ಚ್ ತಿಂಗಳಲ್ಲೇ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದು, ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಇನ್ನೂ 2 ಪ್ರಕರಣಗಳ ಆರೋಪ ಪಟ್ಟಿ ಸಲ್ಲಿಕೆ ಬಾಕಿಯಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾಾರೆ.
    ಒಟ್ಟು 600ಕ್ಕೂ ಅಧಿಕ ಪುಟಗಳ ಚಾರ್ಜ್‌ಶೀಟ್ ಇದಾಗಿದೆ. ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿದ್ದ 13 ಪ್ರಕರಣಗಳ ಪೈಕಿ ಮೂರು ಪ್ರಕರಣಗಳ ಕುರಿತ ಆರೋಪ ಪಟ್ಟಿಯನ್ನು 10 ದಿನಗಳ ಹಿಂದಷ್ಟೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಸಲ್ಲಿಕೆಯಾದ ಚಾರ್ಜ್‌ಶೀಟ್‌ಗಳಲ್ಲಿ ಒಟ್ಟು 464 ಮಂದಿಯ ಹೆಸರನ್ನು ಆರೋಪಿಗಳನ್ನಾಗಿ ಪ್ರಸ್ತಾಪಿಸಲಾಗಿದೆ ಎಂದು ತಿಳಿದು ಬಂದಿದೆ.

    ತನಿಖೆ ಬಹುತೇಕ ಪೂರ್ಣ
    ಉಳಿದೆಲ್ಲ ಪ್ರಕರಣಗಳ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಆರೋಪ ಪಟ್ಟಿ ಸಲ್ಲಿಕೆಯಾಗುವ ನಿರೀಕ್ಷೆಯಿದೆ. ಮ್ಯಾಜಿಸ್ಟೀರಿಯಲ್ ತನಿಖೆಯ ಪೂರ್ಣ ವರದಿ ಸಲ್ಲಿಕೆ ಇನ್ನಷ್ಟೇ ಆಗಬೇಕಿದೆ. ಬಂದರು ಠಾಣಾ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್‌ಸ್ಪೆಕ್ಟರ್ ಗೋವಿಂದರಾಜು, ಪಾಂಡೇಶ್ವರ ಠಾಣಾ ವ್ಯಾಪ್ತಿಯ ಪ್ರಕರಣಗಳಿಗೆ ಇನ್‌ಸ್ಪೆಕ್ಟರ್ ಲೋಕೇಶ್ ಎ.ಸಿ. ತನಿಖಾಧಿಕಾರಿಯಾಗಿದ್ದರೆ, ಸಿಐಡಿ ಎಸ್‌ಪಿ ರಾಹುಲ್ ಕುಮಾರ್ ಸಿಐಡಿ ತಂಡದ ತನಿಖಾಧಿಕಾರಿಯಾಗಿದ್ದರು.
    ಮಂಗಳೂರಿನಲ್ಲಿ 2019ರ ಡಿ.19ರಂದು ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟು, 9ಕ್ಕೂ ಹೆಚ್ಚು ಗಾಯಗೊಂಡಿದ್ದರು. ಗೋಲಿಬಾರ್‌ನಲ್ಲಿ ಕಂದಕ್ ನಿವಾಸಿ ಅಬ್ದುಲ್ ಜಲೀಲ್(42), ಕುದ್ರೋಳಿ ನಿವಾಸಿ ನೌಶಿನ್(25) ಎಂಬುವರು ಮೃತಪಟ್ಟಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts